ಕನ್ನಡ ಸುದ್ದಿ  /  ಕರ್ನಾಟಕ  /  Karnataka Budget 2023-24 Summary: ರಾಜ್ಯ ಬಜೆಟ್‌ನ ಸಾರವೇನು? ಚುನಾವಣಾ ಬಜೆಟ್‌ನ ಪ್ರಮುಖ ಹೈಲೈಟ್ಸ್‌ ಇಲ್ಲಿದೆ ಗಮನಿಸಿ

Karnataka Budget 2023-24 summary: ರಾಜ್ಯ ಬಜೆಟ್‌ನ ಸಾರವೇನು? ಚುನಾವಣಾ ಬಜೆಟ್‌ನ ಪ್ರಮುಖ ಹೈಲೈಟ್ಸ್‌ ಇಲ್ಲಿದೆ ಗಮನಿಸಿ

Karnataka Budget 2023-24 summary: ಧಾನಸಭಾ ಚುನಾವಣೆ ಸಮೀಪದಲ್ಲಿರುವ ಕಾರಣ ಒಂದು ರೀತಿಯಲ್ಲಿ ಜನಪ್ರಿಯ ಬಜೆಟ್‌ ಅನ್ನೇ ಸಿಎಂ ಬೊಮ್ಮಾಯಿ ಮಂಡಿಸಿದ್ದಾರೆ. ಎಲ್ಲ ಜಾತಿ, ಸಮುದಾಯ, ಮಹಿಳೆ, ಯುವಜನರು, ಮಕ್ಕಳು ಸೇರಿ ಎಲ್ಲ ವರ್ಗದವರನ್ನೂ ತಲುಪುವಂತಹ ಬಜೆಟ್‌ ಅನ್ನು ಅವರು ಮಂಡಿಸಿ ಚುನಾವಣೆ ಎದುರಿಸುವುದಕ್ಕೆ ಸಜ್ಜಾಗಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ (twitter)

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್‌ ಅನ್ನು ಶುಕ್ರವಾರ ಮಂಡಿಸಿದರು. ವಿಧಾನಸಭಾ ಚುನಾವಣೆ ಸಮೀಪದಲ್ಲಿರುವ ಕಾರಣ ಒಂದು ರೀತಿಯಲ್ಲಿ ಜನಪ್ರಿಯ ಬಜೆಟ್‌ ಅನ್ನೇ ಅವರು ಮಂಡಿಸಿದ್ದಾರೆ. ಎಲ್ಲ ಜಾತಿ, ಸಮುದಾಯ, ಮಹಿಳೆ, ಯುವಜನರು, ಮಕ್ಕಳು ಸೇರಿ ಎಲ್ಲ ವರ್ಗದವರನ್ನೂ ತಲುಪುವಂತಹ ಬಜೆಟ್‌ ಅನ್ನು ಅವರು ಮಂಡಿಸಿ ಚುನಾವಣೆ ಎದುರಿಸುವುದಕ್ಕೆ ಸಜ್ಜಾಗಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಅವರು ಈ ಬಜೆಟ್‌ ಅನ್ನು ರಾಜಸ್ವ ಹೆಚ್ಚಳದ ಬಜೆಟ್‌ ಎಂದು ಘೋಷಿಸಿದ್ದಾರೆ. ರಾಜ್ಯದ ಹಣಕಾಸಿನ ಪರಿಸ್ಥಿತಿಯು 2022-23ರ ಪ್ರಸಕ್ತ ವರ್ಷ ಸದೃಢವಾಗಿದೆ. ಉತ್ತಮ ಬೆಳವಣಿಗೆಯೂ ದಾಖಲಾಗುತ್ತಿದೆ. ಆರ್ಥಿಕ ಚಟುವಟಿಕೆ ವೃದ್ಧಿಯಿಂದ ರಾಜ್ಯದ ರಾಜಸ್ವ ಸಂಗ್ರಹಣೆಯಲ್ಲಿ ಹೆಚ್ಚಳ ದಾಖಲಾಗಿದೆ ಎಂದು ವಿವರಿಸಿದ್ದರು. ಈ ಬಜೆಟ್‌ನ ಹೈಲೈಟ್ಸ್‌ ಇಲ್ಲಿದೆ.

ಬಜೆಟ್‌ ಗಾತ್ರ - 3,09,182 ಲಕ್ಷ ಕೋಟಿ ರೂಪಾಯಿ

ಬಜೆಟ್‌ 2023-24 ವಲಯವಾರು ವಿಂಗಂಡಣೆ

1) ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯ

  • ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆ 80,318 ಕೋಟಿ ರೂಪಾಯಿ ಅನುದಾನ
  • ರೈತ ವಿದ್ಯಾನಿಧಿ ಯೋಜನೆ ಸಿಂಪಿಗರ ಮಕ್ಕಳಿಗೂ ವಿಸ್ತರಣೆ
  • ಗೌರವ ಧನ ಹೆಚ್ಚಳ - ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರ ಮಾಸಿಕ ಗೌರವಧನವನ್ನು 1,000 ರೂಪಾಯಿ ಹೆಚ್ಚಳ
  • ಮಕ್ಕಳ ಬಸ್ಸು - 100 ಕೋಟಿ ರೂ. ವೆಚ್ಚದಲ್ಲಿ 1,000 ಹೊಸ ಕಾರ್ಯಾಚರಣೆಗಳನ್ನು ಮಾಡಲು ʻಮಕ್ಕಳ ಬಸ್ಸುʼ ಎಂಬ ಹೊಸ ಯೋಜನೆ
  • ʻಹಳ್ಳಿ ಮುತ್ತುʼ - CET ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರಿಸಲಿದೆ.
  • ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ Academic Bank of Credits ಮತ್ತು Digilocker ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಕ್ರಮ
  • ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳಲ್ಲಿ ಸರಳ ಹಾಗೂ ಪಾರದರ್ಶಕ ಪ್ರವೇಶಾವಕಾಶಕ್ಕೆ ಏಕರೂಪ ವ್ಯವಸ್ಥೆ
  • ಮನೆ ಮನೆಗೆ ಆರೋಗ್ಯʼ - ರಾಜ್ಯದ ಗ್ರಾಮೀಣ ಜನತೆಗೆ 2023-24ನೇ ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ
  • ಬೆಂಗಳೂರು, ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿಯ 4 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ IVF ಕ್ಲಿನಿಕ್‌
  • ಮಹಿಳೆಯರಿಗೆ ವೈಯಕ್ತಿಕ ಮತ್ತು ಗುಂಪುಗಳನ್ನೊಳಗೊಂಡ 9,688 ಫಲಾನುಭವಿಗಳಿಗೆ ಕಿರು ಉದ್ದಿಮೆ ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯ
  • 45,೦೦೦ ಮಹಿಳಾ ಸ್ವಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿ ದರದಲ್ಲಿ 1,800 ಕೋಟಿ ರೂ. ಗಳಷ್ಟು ಸಾಲ
  • ʻಗೃಹಿಣಿ ಶಕ್ತಿʼ - ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ.
  • ಒಂದು ಲಕ್ಷ ಮಹಿಳೆಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿ
  • ದುಡಿಯುವ ಮಹಿಳೆಯರಿಗೆ ಶೇ.50 ರಷ್ಟು ರಿಯಾಯಿತಿ ಬಸ್ ಪಾಸ್ ಸೌಲಭ್ಯ
  • ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ʻವಿದ್ಯಾವಾಹಿನಿʼ ಉಚಿತ ಬಸ್‌ ಪಾಸ್‌

ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ಮಹಿಳಾ ಆಯವ್ಯಯದಲ್ಲಿ ಒಟ್ಟಾರೆ 46,278 ಕೋಟಿ ರೂ. ಒದಗಿಸಲಾಗಿದೆ.

ಮಕ್ಕಳ ಅಭ್ಯುದಯಕ್ಕೆ ಆಯವ್ಯಯದಲ್ಲಿ ಒಟ್ಟಾರೆ 47,256 ಕೋಟಿ ರೂ. ಒದಗಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯುದಯಕ್ಕೆ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಒಟ್ಟು 30,215 ಕೋಟಿ ರೂ.

ಪರಿಶಿಷ್ಟ ಜಾತಿ ಉಪ ಯೋಜನೆಗೆ 21,343 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ _ 8,872 ಕೋಟಿ ರೂ. ಒದಗಿಸಲಾಗಿದೆ.

2. ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ

ಆರ್ಥಿಕ ಅಭಿವೃದ್ಧಿಗೆ ಉತ್ತೇಜನೆ ವಲಯಕ್ಕೆ 2023-24ನೇ ಸಾಲಿಗೆ 61,488 ಕೋಟಿ ರೂ. ಗಳ ಅನುದಾನ

  • ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸಲು ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಲುವಾಗಿ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಳ (ಶೇ.30.4)- 2023-24ನೇ ಸಾಲಿನಲ್ಲಿ 61,234 ಕೋಟಿ ರೂ.ಗೆ ಹೆಚ್ಚಿಸಲಾಗಿದೆ.
  • ಕರ್ನಾಟಕ ರಾಜ್ಯ ಸಂಶೋಧನಾ ಫೌಂಡೇಶನ್‌ - ರಾಜ್ಯದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಯ ಪ್ರೋತ್ಸಾಹನೆಗೆ ಎಲ್ಲಾ ಹಿತಾಸಕ್ತರುಗಳಿಂದ ಅವಶ್ಯಕ ಬೆಂಬಲ ಖಚಿತಪಡಿಸಿಕೊಳ್ಳಲು ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಅಂತರ್‌ ಇಲಾಖೆಗಳ ಸಮನ್ವಯ ಸಾಧನೆಗಾಗಿ ಈ ಫೌಂಡೇಶನ್.‌
  • 6 ಪ್ರಾದೇಶಿಕ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಉನ್ನತೀಕರಣ
  • ಸಾಂಕ್ರಾಮಿಕ ಸನ್ನದ್ದತೆ ಕೇಂದ್ರ ಸ್ಥಾಪನೆಗೆ ಮೊದಲ ಹಂತದಲ್ಲಿ 10 ಕೋಟಿ ರೂ. ಬೆಂಬಲ
  • ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ಅತ್ಯಾಧುನಿಕ ಸ್ಟಾರ್ಟ್‌ಪ್ ಪಾರ್ಕ್ ಅನ್ನು 30 ಕೋಟಿ ರೂ. ವೆಚ್ಚ
  • ನೇಕಾರರಿಗೆ ಹಲವು ಯೋಜನೆ ಮತ್ತು ಉಪಕ್ರಮಗಳು
  • ಉತ್ತರ ಕನ್ನಡ ಜಿಲ್ಲೆಯ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ಕಲಬುರಗಿಯ ಚಿತ್ತಾಪುರ, ತುಮಕೂರಿನ ಬೈರಗೊಂಡನಹಳ್ಳಿ-ಚಿಕ್ಕನಾಯಕನಹಳ್ಳಿ, ಬೀದರ್‌ನ ಹುಮನಾಬಾದ್‌, ರಾಯಚೂರು ಗ್ರಾಮಾಂತರ, ವಿಜಯಪುರದ ಹೂವಿನ ಹಿಪ್ಪರಗಿ ಮತ್ತು ಚಿತ್ರದುರ್ಗದ ಮೊಳಕಾಲ್ಮೂರು ಹೀಗೆ 9 ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕಾ ವಸಾಹತು
  • ಮಂಗಳೂರು – ಕಾರವಾರ – ಗೋವಾ - ಮುಂಬಯಿ Waterways ಅನ್ನು ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ
  • ಗುರುಪುರ ಮತ್ತು ನೇತ್ರಾವತಿ ನದಿಗಳ ಪಾತ್ರದಲ್ಲಿ ಜಲಸಾರಿಗೆ ಸಂಪರ್ಕ
  • ಬಾಗಲಕೋಟೆ-ಕಂಕಣವಾಡಿ-ಕದಮ್‌ಪುರ, ಕಲಬುರಗಿ-ಸನ್ನತಿ, ಶಿವಮೊಗ್ಗ-ಕೊಗರು-ಶಿಗ್ಲು, ಮಂಗಳೂರು-ಹಂಗಾರಕಟ್ಟೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಹೊಸ Light Cargo Transport (LCT) ಬೋಟ್‌ ಸೇವೆ
  • ತುಮಕೂರು-ಚಿತ್ರದುರ್ಗ ರೈಲ್ವೆ ಮಾರ್ಗಕ್ಕೆ 220 ಕೋಟಿ ರೂ., ಶಿವಮೊಗ್ಗ-ಶಿಕಾರಿಪುರ ರೈಲ್ವೆ ಮಾರ್ಗಕ್ಕೆ 150 ಕೋಟಿ ರೂ., ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗಕ್ಕೆ 210 ಕೋಟಿ ರೂ., ಮುನಿರಾಬಾದ್-ಗಿಣಿಗೇರಾ-ರಾಯಚೂರು ರೈಲ್ವೆ ಮಾರ್ಗಕ್ಕೆ 150 ಕೋಟಿ ರೂ., ಗದಗ-ವಾಡಿ ರೈಲ್ವೆ ಮಾರ್ಗಕ್ಕೆ 200 ಕೋಟಿ ರೂ., ತುಮಕೂರು-ರಾಯದುರ್ಗ ರೈಲ್ವೆ ಮಾರ್ಗಕ್ಕೆ 225 ಕೋಟಿ ರೂ., ಒಳಗೊಂಡಂತೆ ಎಲ್ಲಾ ಹೊಸ ರೈಲ್ವೆ ಕಾಮಗಾರಿಗಳಿಗೆ ಒಟ್ಟಾರೆ 1,537 ಕೋಟಿ ರೂ
  • ಕೊಡಗು ಜಿಲ್ಲೆಯ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ವಿಶೇಷ ಪ್ಯಾಕೇಜ್‌

3 . ಸಂಸ್ಕೃತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ

ಸಂಸ್ಕೃತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣಾ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 3,458 ಕೋಟಿ ರೂ. ಅನುದಾನ

  • ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ ʻಶ್ರೀ ಭುವನೇಶ್ವರಿʼ ತಾಯಿಯ ಬೃಹತ್‌ ಮೂರ್ತಿ ಹಾಗೂ ಥೀಮ್‌ ಪಾರ್ಕ್‌ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿ
  • ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿʼ ಎಂಬ ಕಾರ್ಯಕ್ರಮದಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬವನ್ನು ಆಯೋಜನೆ
  • ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಪ್ರಾಶಸ್ತ್ಯವನ್ನು ನೀಡಲಾಗುವುದು. ಹಾಗೆಯೇ ಗಡಿ ಪ್ರದೇಶದ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ.
  • ಕರಗ ಉತ್ಸವ ಆಚರಣೆಗೆ ಸರ್ಕಾರದಿಂದ ವಿಶೇಷ ಅನುದಾನ
  • ʻಬದುಕುವ ದಾರಿʼ ಎಂಬ ಹೊಸ ಯೋಜನೆಯಡಿ ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರೆಸಲು ಸಾಧ್ಯವಾಗದೇ ಇರುವ ಯುವಜನರಿಗೆ ಐಟಿಐಗಳಲ್ಲಿ 3 ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ
  • 50 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಒಲಿಂಪಿಕ್ ಕನಸಿನ ಯೋಜನಾ ನಿಧಿ (Karnataka Olympic Dream Project Fund) ಸ್ಥಾಪನೆ

4. ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು

ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು ವಲಯಕ್ಕೆ 2023-24ನೇ ಸಾಲಿಗೆ 68,585 ಕೋಟಿ ರೂ. ಗಳ ಅನುದಾನ

  • ʻಮುಖ್ಯಮಂತ್ರಿ ವಿಮಾ ಯೋಜನೆʼ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವುದಕ್ಕಾಗಿ ಈ ಯೋಜನೆ., ಇಂತಹವರ ಅವಲಂಬಿತರಿಗೆ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ, ಇಂತಹವರು ಮರಣ ಹೊಂದಿದಲ್ಲಿ 2 ಲಕ್ಷ ರೂ. ಗಳ ವಿಮಾ ಸೌಲಭ್ಯ ಹಾಗೂ ಅಪಘಾತದಲ್ಲಿ ಮರಣ ಹೊಂದಿದಲ್ಲಿ 2 ಲಕ್ಷ ರೂ. ಗಳಂತೆ ಒಟ್ಟು 4 ಲಕ್ಷ ರೂ. ವಿಮಾ ಸೌಲಭ್ಯ.
  • ಸರ್ಕಾರಿ ವೆಬ್‌ ಸೈಟ್‌ ಗಳು, ಆನ್-ಲೈನ್‌ ಸೇವೆಗಳು ಮತ್ತು ದತ್ತಾಂಶಗಳ ಸುರಕ್ಷತೆಗಾಗಿ, ಸೈಬರ್‌ ತಜ್ಞರು ಮತ್ತು ಆಧುನಿಕ ತಂತ್ರಜ್ಞಾನವನ್ನೊಳಗೊಂಡ 24x7 ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್ ಸ್ಥಾಪನೆ
  • ಪ್ರಸಕ್ತ ವರ್ಷ 10 ಕೋಟಿ ರೂ. ವೆಚ್ಚದಲ್ಲಿ ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ
  • ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಮಗ್ರವಾಗಿ ಅಭಿವೃದ್ಧಿ
  • ಗ್ರಾಮ ಸಹಾಯಕರ ಹುದ್ದೆಗೆ ‘ಜನಸೇವಕ’ ಎಂದು ಮರುನಾಮಕರಣ ಮಾಸಿಕ ಗೌರವಧನವನ್ನು 13,000 ರೂ. ಗಳಿಂದ 14,000 ರೂ.ಗೆ ಏರಿಕೆ

IPL_Entry_Point