ಕನ್ನಡ ಸುದ್ದಿ  /  Karnataka  /  Karnataka Cabinet Decisions: Cabinet Decision: Karnataka Cabinet Approval For Sasalatti Shivalingeshwara Irrigation Project Second Phase

Karnataka Cabinet Decisions: ಸಸಾಲಟ್ಟಿ ಶಿವಲಿಂಗೇಶ್ವರ ಏತ ನೀರಾವರಿಯ ಎರಡನೇ ಹಂತಕ್ಕೆ ಸಂಪುಟ ಒಪ್ಪಿಗೆ

Karnataka Cabinet Decisions: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕು ವ್ಯಾಪ್ತಿ ಅಡಿಯ ಬಾಧಿತ ಅಚ್ಚುಕಟ್ಟು ಪ್ರದೇಶಗಳಿಗೆ ಸಮರ್ಪಕವಾಗಿ ನೀರನ್ನು ಪೂರೈಸುವ ಉದ್ದೇಶಿತ ಯೋಜನೆ ಇದು. ಈ ಯೋಜನೆಗೆ 209 ಕೋಟಿ ರೂಪಾಯಿ ಅಂದಾಜಿಸಲಾಗಿದ್ದು, ಇದರ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ.

ಸಚಿವ ಗೋವಿಂದ ಕಾರಜೋಳ
ಸಚಿವ ಗೋವಿಂದ ಕಾರಜೋಳ (@GovindKarjol)

ಬೆಂಗಳೂರು: ಸಸಾಲಟ್ಟಿ ಶಿವಲಿಂಗೇಶ್ವರ ಏತ ನೀರಾವರಿಯ ಎರಡನೇ ಹಂತಕ್ಕೆ ರಾಜ್ಯ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು.

ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕು ವ್ಯಾಪ್ತಿ ಅಡಿಯ ಬಾಧಿತ ಅಚ್ಚುಕಟ್ಟು ಪ್ರದೇಶಗಳಿಗೆ ಸಮರ್ಪಕವಾಗಿ ನೀರನ್ನು ಪೂರೈಸುವ ಉದ್ದೇಶಿತ ಯೋಜನೆ ಇದು. ಈ ಯೋಜನೆಗೆ 209 ಕೋಟಿ ರೂಪಾಯಿ ಅಂದಾಜಿಸಲಾಗಿದ್ದು, ಇದರ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ.

ಸಸಾಲಟ್ಟಿ ಶಿವಲಿಂಗೇಶ್ವರ ಏತ ನೀರಾವರಿಯ ಎರಡನೇ ಹಂತದಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ, ಬೆಳಗಾವಿ ಜಿಲ್ಲೆಯ ರಾಯಬಾಗ ಹಾಗೂ ಮೂಡಲಗಿ ತಾಲೂಕು ವ್ಯಾಪ್ತಿಯ ಒಟ್ಟು 21 ಗ್ರಾಮಗಳ 9640.70 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಭಾದಿತ ಕೃಷ್ಣಾ ನದಿಯಿಂದ ನಿಗದಿತ ಅವಧಿಯಲ್ಲಿ ಪೂರ್ಣ ಪ್ರಮಾಣದ ನೀರನ್ನು ಒದಗಿಸಲು ಕೈಗೆತ್ತಿಕೊಳ್ಳಲಾಗಿದೆ.

ಯೋಜನೆಯ ಅನುಷ್ಠಾನದಿಂದ ರಬಕವಿ ಬನಹಟ್ಟಿ ತಾಲೂಕಿನ 11 ಗ್ರಾಮಗಳು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಆರು ಗ್ರಾಮಗಳು, ಹಾಗೂ ಮೂಡಲಗಿ ತಾಲೂಕಿನ ನಾಲ್ಕು ಗ್ರಾಮಗಳ ರೈತರಿಗೆ ಈ ಹಂಗಾಮಿನಲ್ಲಿ ಅಗತ್ಯ ಸಮೀಕರಣಕ್ಕೆ ನೀರು ಪೂರೈಕೆ ಮಾಡುವ ಮೂಲಕ ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಅನುವು ಕಲ್ಪಿಸಲಾಗಿದೆ.

ಕೃಷ್ಣ ನದಿಯಲ್ಲಿ ಹರಿಯುವ ಹೆಚ್ಚುವರಿ ನೀರನ್ನು ಬಳಸಿಕೊಂಡು ನೀರಾವರಿ ಮುಖಾಂತರ ಮುಂಗಾರು ಹಂಗಾಮಿನ ಎರಡು ಮೂರು ತಿಂಗಳು ಕಾಲುವೆಗೆ ನೀರು ಹರಿಸುವುದರಿಂದ ಬರಪೀಡಿತ ಅಚ್ಚುಕಟ್ಟು ಪ್ರದೇಶದ ರೈತರಿಗೆ ವರದಾನ ವಾಗುವುದಲ್ಲದೆ ಈ ಭಾಗದ ಅಂತರ್ಜಲ ಮಟ್ಟವು ಹೆಚ್ಚಾಗುವುದರಿಂದ ರೈತರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆ ತರಲು, ಆರ್ಥಿಕ ಪರಿಸ್ಥಿತಿ ಸುಧಾರಿಸಲು ಅನುಕೂಲವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ರವರು ಸಂತಸ ವ್ಯಕ್ತಪಡಿಸಿದ್ದಾರೆ.

IPL_Entry_Point