IAS Posting: ಕರ್ನಾಟಕದಲ್ಲಿ ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ, ಕೆಎ ದಯಾನಂದ ಗೃಹ ಮಂಡಳಿ ಆಯುಕ್ತ
ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೆಲವು ಅಧಿಕಾರಿಗಳಿಗೆ ಹೆಚ್ಚುವರಿ ಕಾರ್ಯಭಾರವನ್ನೂ ನೀಡಲಾಗಿದೆ.

ಬೆಂಗಳೂರು: ಕರ್ನಾಟಕ ಸರ್ಕಾರವು ಹಲವು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗ ಮಾಡಿ ಆದೇಶ ಹೊರಡಿಸಿದೆ. ಈಗಾಗಲೇ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಹುದ್ದೆಗಳಿಂದ ಕೆಲವು ಅಧಿಕಾರಿಗಳನ್ನು ಬದಲಾಯಿಸಲಾಗಿದ್ದರೆ, ಇನ್ನು ಕೆಲವರಿಗೆ ಹೊಸ ಹುದ್ದೆ ನೀಡಲಾಗಿದೆ. ಕೆಲವು ಐಎಎಸ್ ಅಧಿಕಾರಿಗಳಿಗೆ ಈಗಿರುವ ಹುದ್ದೆಯ ಜತೆ ಜತೆಯಲ್ಲಿಯೇ ಹೆಚ್ಚುವರಿ ಹುದ್ದೆಗಳನ್ನು ನೀಡಲಾಗಿದೆ. ವರ್ಗಗೊಂಡಿರುವ ಅಧಿಕಾರಿಗಳ ಪಟ್ಟಿಯಲ್ಲಿ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಕೆ.ಎ.ದಯಾನಂದ, ಕೆಎಸ್ಆರ್‌ಟಿಸಿ ಎಂಡಿಯಾಗಿ ಬಿಎಂಟಿಸಿ ಎಂಡಿ ರಾಮಚಂದ್ರನ್ ಅವರಿಗೆ ಹೆಚ್ಚುವರಿ ಕಾರ್ಯಭಾರ ನೀಡಲಾಗಿದೆ. ಕಂದಾಯ ಇಲಾಖೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮಹಾನಿರೀಕ್ಷಕರ ಹೆಚ್ಚುವರಿ ಕಾರ್ಯಭಾರವನ್ನು ವಹಿಸಲಾಗಿದೆ. ಐಎಫ್ಎಸ್ ಅಧಿಕಾರಿಯಾಗಿರುವ ಎಂಎಸ್‌ಐಎಲ್ ಎಂಡಿ ಮನೋಜ್ ಕುಮಾರ್ ಅವರಿಗೆ ರೇರಾ ಕಾರ್ಯದರ್ಶಿಯಾಗಿ ಹೆಚ್ಚುವರಿ ಕಾರ್ಯಭಾರ ನೀಡಲಾಗಿದೆ.
ಹಿರಿಯ ಐಎಎಸ್ ಅಧಿಕಾರಿ ಐಎಂಎದ ವಿಶೇಷ ಅಧಿಕಾರಿಯಾಗಿರುವ ಅಮ್ಲಾನ್ ಆದಿತ್ಯ ಬಿಸ್ವಾಸ್‌ಅವರನ್ನು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಿಯೋಜಿಸಲಾಗಿದೆ. ಈ ಹುದ್ದೆಯ ಹೆಚ್ಚುವರಿ ಕಾರ್ಯಭಾರದಲ್ಲಿದ್ದ ಮತ್ತೊಬ್ಬ ಹಿರಿಯ ಐಎಎಸ್ ಅಧಿಕಾರಿ ಎಸ್.ಸೆಲ್ವಕುಮಾರ್ ಅವರನ್ನು ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.
ಹಿರಿಯ ಐಎಎಸ್ ಅಧಿಕಾರಿ ಕರ್ನಾಟಕ ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್‌ರಾಜ್ ಸಿಂಗ್ ಅವರನ್ನು ಯುವಜನ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ.ಅನ್ಬುಕುಮಾರ್ ಅವರನ್ನು ವಸತಿ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇದಲ್ಲದೇ ಅನ್ಬುಕುಮಾರ್‌ಅವರನ್ನು ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿ ಹುದ್ದೆಯನ್ನೂ ಹೆಚ್ಚುವರಿಯಾಗಿ ವಹಿಸಲಾಗಿದೆ.
ರಜೆಯಲ್ಲಿದ್ದ ಐಎಎಸ್ ಅಧಿಕಾರಿ ಸಮೀರ್‌ಶುಕ್ಲ ಅವರನ್ನು ಎಂಎಸ್ಎಂಇ ಹಾಗೂ ಗಣಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಯ ಹೆಚ್ಚುವರಿ ಕಾರ್ಯಭಾರತದಲ್ಲಿದ್ದ ರಮಣದೀಪ್ ಚೌಧರಿ ಅವರನ್ನು ಆ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.
ಯುವಜನ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿಯಾಗಿದ್ದ ಡಿ.ರಣದೀಪ್ ಅವರನ್ನು ವರ್ಗ ಮಾಡಲಾಗಿದ್ದು, ಪರಿಶಿಷ್ಟ ಪಂಗಡಗಳ ಇಲಾಖೆ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿದ್ದ ರಮಣದೀಪ್ ಚೌಧರಿ ಅವರನ್ನು ವರ್ಗ ಮಾಡಲಾಗಿದ್ದು ಅವರನ್ನು ಯೋಜನೆ, ಕಾರ್ಯಕ್ರಮ ನಿರ್ವಹಣೆ, ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಕಂದಾಯ ಇಲಾಖೆ ಆಯುಕ್ತರಾಗಿರುವ ಪೊಮ್ಮಲ ಸುನೀಲ್‌ಕುಮಾರ್ ಅವರಿಗೆ ನೋಂದಣಿ, ಮುದ್ರಾಂಕ ಇಲಾಖೆಯ ಮಹಾನಿರೀಕ್ಷಿಕರಾಗಿ ಹೆಚ್ಚುವರಿ ಕಾರ್ಯಭಾರವನ್ನು ವಹಿಸಲಾಗಿದೆ.
ಸದ್ಯ ಬಿಎಂಟಿಸಿ ಎಂಡಿಯಾಗಿರುವ ಆರ್.ರಾಮಚಂದ್ರನ್ ಅವರಿಗೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಂಡಿ ಹುದ್ದೆಯನ್ನು ನೀಡಲಾಗಿದೆ.
ನೋಂದಣಿ ಮುದ್ರಾಂಕ ಇಲಾಖೆ ಮಹಾನಿರೀಕ್ಷಕರಾಗಿದ್ದ ಕೆ.ಎ.ದಯಾನಂದ ಅವರನ್ನು ಕರ್ನಾಟಕ ಗೃಹ ಮಂಡಳಿ ಆಯುಕ್ತರಾಗಿ ನೇಮಿಸಲಾಗಿದೆ.
ಕರ್ನಾಟಕ ರಿಯಲ್ ಎಸ್ಟೇಟ್ ನಿರ್ವಹಣಾ ಪ್ರಾಧಿಕಾರ( ರೇರಾ)ದ ಕಾರ್ಯದರ್ಶಿಯಾಗಿದ್ದ ಇಬ್ರಾಹಿಂ ಮೈಗೂರು ಅವರನ್ನು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಐಟಿ ವಿಭಾಗದ ನಿರ್ದೇಶಕರಾಗಿ ನಿಯೋಜಿಸಲಾಗಿದೆ.
ಕರ್ನಾಟಕ ರಿಯಲ್ ಎಸ್ಟೇಟ್ ನಿರ್ವಹಣಾ ಪ್ರಾಧಿಕಾರ( ರೇರಾ)ದ ಕಾರ್ಯದರ್ಶಿಯಾಗಿ ಎಂಎಸ್ಐಎಲ್ ಎಂಡಿಯಾಗಿರುವ ಹಿರಿಯ ಐಎಫ್‌ಎಸ್ ಅಧಿಕಾರಿ ಮನೋಜ್‌ಕುಮಾರ್ ಅವರಿಗೆ ಹೆಚ್ಚುವರಿ ಕಾರ್ಯಭಾರ ನೀಡಲಾಗಿದೆ.
ವಿಭಾಗ