Karnataka CET 2025: ಕರ್ನಾಟಕ ಯುಜಿ ಸಿಇಟಿ ಪರೀಕ್ಷೆಗೆ ಅಣಿಯಾಗುತ್ತೀದ್ದೀರಾ, ಈ ಸೂಚನೆಗಳನ್ನು ಗಮನಿಸಿ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Cet 2025: ಕರ್ನಾಟಕ ಯುಜಿ ಸಿಇಟಿ ಪರೀಕ್ಷೆಗೆ ಅಣಿಯಾಗುತ್ತೀದ್ದೀರಾ, ಈ ಸೂಚನೆಗಳನ್ನು ಗಮನಿಸಿ

Karnataka CET 2025: ಕರ್ನಾಟಕ ಯುಜಿ ಸಿಇಟಿ ಪರೀಕ್ಷೆಗೆ ಅಣಿಯಾಗುತ್ತೀದ್ದೀರಾ, ಈ ಸೂಚನೆಗಳನ್ನು ಗಮನಿಸಿ

Karnataka CET 2025: ಕರ್ನಾಟಕ ಸಿಇಟಿ ಪರೀಕ್ಷೆಗಳು ಏಪ್ರಿಲ್‌ 16 ಹಾಗೂ 17ರಂದು ನಡೆಯಲಿದ್ದು, ಇದಕ್ಕಾಗಿ ಎಲ್ಲೆಡೆ ಸಿದ್ದತೆಗಳು ಆಗಿವೆ. ಇದರ ವಿವರಗಳು ಇಲ್ಲಿವೆ.

ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಗೆ ಸೂಚನೆಗಳನ್ನು ನೀಡಲಾಗಿದೆ.
ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಗೆ ಸೂಚನೆಗಳನ್ನು ನೀಡಲಾಗಿದೆ.

Karnataka CET 2025: ಈ ಬಾರಿಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಮುಕ್ತಾಯವಾಗಿದ್ದು, ಇನ್ನೇನು ಸಿಇಟಿ ಪರೀಕ್ಷೆಗಳು ಆರಂಭವಾಗಲಿವೆ. ಏಪ್ರಿಲ್ 16 ರಂದು ಬೆಳಗ್ಗೆ 10.30 ಗಂಟೆಯಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನ ಶಾಸ್ತ್ರ, ಏಪ್ರಿಲ್, 17 ರಂದು ಬೆಳಗ್ಗೆ 10.30 ಯಿಂದ 11.50 ರವರೆಗೆ ಗಣಿತ ಮತ್ತು ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಸಿಇಟಿ ಪರೀಕ್ಷೆ ನಡೆಯಲಿವೆ. ಇದಕ್ಕಾಗಿ ಬಹುತೇಕ ಕರ್ನಾಟಕದ ಎಲ್ಲಾ ಜಿಲ್ಲಾಡಳಿತಗಳೂ ಸಿದ್ದತೆಯನ್ನು ಮಾಡಿಕೊಂಡಿವೆ. ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು. ಪರೀಕ್ಷಾ ಸೇವೆಯಲ್ಲಿ ತೊಡಗುವ ಅಧ್ಯಾಪಕರು, ಸಿಬ್ಬಂದಿ ಹಾಗೂ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸರಿಗೂ ಕೆಲವು ಸೂಚನೆಗಳನ್ನು ಆಯಾ ಜಿಲ್ಲಾಡಳಿತದಿಂದ ನೀಡಲಾಗಿದೆ.

  • ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಇರಬೇಕು. ಪರೀಕ್ಷಾ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ, ಸ್ವಚ್ಛತೆ, ಶೌಚಾಲಯ ಇರಬೇಕು. ಸಿಇಟಿ ಪರೀಕ್ಷೆ ಸಂಬಂಧ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು
  • ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಸುಗಮವಾಗಿ ಪರೀಕ್ಷೆ ನಡೆಸಬೇಕು. ಪೊಲೀಸರ ನಿಯೋಜನೆ, ರೂಟ್ ಅಧಿಕಾರಿಗಳು ಮತ್ತು ಮೇಲ್ವಿಚಾರಕರ ನಿಯೋಜನೆ ಮತ್ತಿತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು
  • ಪರೀಕ್ಷೆ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ನಿರಂತರವಾಗಿರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವೈದ್ಯರು/ ಶ್ರುಶ್ರೂಷಕರನ್ನು ನಿಯೋಜಿಸಬೇಕು.
  • ಸಿಇಟಿ ಪರೀಕ್ಷಾ ದಿನಗಳಂದು ಸಮಯ ಪಾಲನೆಯಿಂದ ಅತಿಮುಖ್ಯವಾಗಿದ್ದು, ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಸಿಇಟಿ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಬೇಕು.,
  • ಸಿಇಟಿ ಪರೀಕ್ಷೆ ಸಂಬಂಧ ನೋಡಲ್ ಅಧಿಕಾರಿಗಳು, ವಿಶೇಷ ಜಾಗೃತ ದಳ, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ಹೀಗೆ ವಿವಿಧ ಹಂತದ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ
  • ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಯನ್ನು ಕೊಂಡೊಯ್ಯಲು ತಹಶೀಲ್ದಾರ್ ಬಿ.ಇ.ಒ ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ,
  • ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ, ಪರೀಕ್ಷೆ ಕೇಂದ್ರದ ಸುತ್ತ ಸೆಕ್ಷನ್ 144 ಜಾರಿಗೊಳಿಸಿ ನಿಷೇಧಾಜ್ಞೆ ಹೊರಡಿಸಲಾಗುವುದು,
  • ನಿಷೇಧಾಜ್ಞೆ ಜಾರಿಯನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ
  • ಸಿ.ಇ.ಟಿ ಪರೀಕ್ಷೆ ಬರೆಯಲು ಬರುವ ಮಕ್ಕಳಿಗೆ ಕುಡಿಯುವ ನೀರು, ಸೂಕ್ತ ಆಸನಗಳು, ಕೊಠಡಿಯಲ್ಲಿ ಗಡಿಯಾರ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು, ಪರೀಕ್ಷಾ ಕೊಠಡಿಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಬೇಕು .
  • 24 ವಿದ್ಯಾರ್ಥಿಗಳಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿದೆ, ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು, ವಿದ್ಯುತ್ ವ್ಯತ್ಯಯ ಉಂಟಾಗದಂತೆ ಪ್ರತಿ ಕೇಂದ್ರಕ್ಕೂ ಇಬ್ಬರು ಲೈನ್ ಮ್ಯಾನ್ ನಿಯೋಜಿಸಲಾಗುವುದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪಗಳಾಗದಂತೆ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.̇
  • ಸಿಇಟಿ ಪರೀಕ್ಷೆ ನಡೆಯುವ 15 ಕೇಂದ್ರಗಳಲ್ಲೂ ಸಿಸಿಟಿವಿ ಕಡ್ಡಾಯ, ಎಲ್ಲಾ ಕೊಠಡಿಯ ವಿಡಿಯೋಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರದರ್ಶನ ಗೊಳ್ಳುತ್ತಿರುತ್ತವೆ ಆದ್ದರಿಂದ ಕೊಠಡಿ ಮೇಲ್ವಿಚಾರಕರು ಜಾಗೃತೆಯಿಂದ ಕಾರ್ಯನಿರ್ವಹಿಸಬೇಕು.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.
Whats_app_banner