ಜನಗಣತಿ, ಜಾತಿಗಣತಿ ಒಕೆ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಇರಲಿ, ಗರಿಷ್ಠ ಮಿತಿ 50 ಸಡಿಲಗೊಳಿಸಿ ; ಸಿಎಂ ಸಿದ್ದರಾಮಯ್ಯ ಆಗ್ರಹ
ಕನ್ನಡ ಸುದ್ದಿ  /  ಕರ್ನಾಟಕ  /  ಜನಗಣತಿ, ಜಾತಿಗಣತಿ ಒಕೆ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಇರಲಿ, ಗರಿಷ್ಠ ಮಿತಿ 50 ಸಡಿಲಗೊಳಿಸಿ ; ಸಿಎಂ ಸಿದ್ದರಾಮಯ್ಯ ಆಗ್ರಹ

ಜನಗಣತಿ, ಜಾತಿಗಣತಿ ಒಕೆ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಇರಲಿ, ಗರಿಷ್ಠ ಮಿತಿ 50 ಸಡಿಲಗೊಳಿಸಿ ; ಸಿಎಂ ಸಿದ್ದರಾಮಯ್ಯ ಆಗ್ರಹ

ಸಿಎಂ ಸಿದ್ದರಾಮಯ್ಯ ಆಗ್ರಹ: ಮೀಸಲಾತಿಯಲ್ಲಿ ಶೇಕಡ 50 ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು ಎಂದು ಕರ್ನಾಟಕ ಮುಖ್ಯಮಂತ್ರಿ ಸಿ.ಎಂ ಸಿದ್ದರಾಮಯ್ಯ ಒತ್ತಾಯಿಸಿದರು.

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಇರಲಿ, ಗರಿಷ್ಠ ಮಿತಿ 50 ಸಡಿಲಗೊಳಿಸಿ ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಇರಲಿ, ಗರಿಷ್ಠ ಮಿತಿ 50 ಸಡಿಲಗೊಳಿಸಿ ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. (CMO)

ಸಿಎಂ ಸಿದ್ದರಾಮಯ್ಯ ಆಗ್ರಹ: ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೀಸಲಾತಿಯಲ್ಲಿ ಶೇಕಡ 50 ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಅದೂ ಅಲ್ಲದೆ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 1) ತಮ್ಮ ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.‌ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು.

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಜನಗಣತಿ, ಜಾತಿಗಣತಿ ಕುರಿತು ಸಿಎಂ ಹೇಳಿದ್ದಿಷ್ಟು

1) ಮುಖ್ಯವಾಹಿನಿಗೆ ತರಲು ಅನುಕೂಲ: ಸಾಮಾಜಿಕವಾಗಿ , ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಆರ್ಥಿಕ , ಶೈಕ್ಷಣಿಕ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದು ಸಿದ್ದರಾಮಯ್ಯಹೇಳಿದರು.

2) ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಸಮೀಕ್ಷೆ: ಈ ರೀತಿಯ 2015 ರಲ್ಲಿಯೇ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ 192 ಕೋಟಿ ವೆಚ್ಚ ಮಾಡಿ 1. 33 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ . ಇದರಿಂದ ಪ್ರೇರಿತವಾಗಿ ಮತ್ತು ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಈಗ ಸಮೀಕ್ಷೆಗೆ ಮುಂದಾಗಿದೆ ಎಂದರು.

3) ಮೀಸಲಾತಿ ಗರಿಷ್ಠ ಮಿತಿ ಸಡಿಲಕ್ಕೆ ಆಗ್ರಹ: 50% ಮೀಸಲಾತಿಯನ್ನು ಬದಲಾಯಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15 ವಿಧಿ, ಕಲಂ (5) ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನು ಪರಿಗಣಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.

4) ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ: ಕೇವಲ ಘೋಷಣೆ ಮಾಡಿದರೆ ಸಾಲದು, ಅದನ್ನು ಜಾರಿಗೆ ತರಬೇಕು. 73-74 ರ ತಿದ್ದುಪಡಿಗಳನ್ನು ಬಿಜೆಪಿ ವಿರೋಧಿಸಿತ್ತು. ಇತಿಹಾಸ ನೋಡಿದರೆ ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ. ಕೂಡಲೇ ಯಾವ ದಿನಾಂಕದಿಂದ ಜನಗಣತಿ, ಜಾರಿ ಗಣತಿ ಮಾಡುತ್ತಾರೆ ಎಂದು ತಿಳಿಸಬೇಕು. ಜಾತಿ ಗಣತಿ ಮಾಡುವಾಗ ಸಾಮಾಜಿಕ ಆರ್ಥಿಕ ಸಮೀಕ್ಷೆ ಕೂಡ ಆಗಬೇಕು. ಇಲ್ಲಿಯವರೆಗೂ ಇದನ್ನು ವಿರೋಧಿಸುತ್ತಿದ್ದವರು ಈಗ ಸಮೀಕ್ಷೆ ನಡೆಸುವ ಘೋಷಣೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

5) ರಾಜ್ಯ ಸರ್ಕಾರವನ್ನು ಅನುಸರಿಸಿದೆ ಕೇಂದ್ರ: ರಾಜ್ಯ ಸರ್ಕಾರಗಳಿಗೆ ಜಾತಿ ಅಥವಾ ಜನಗಣತಿ ಮಾಡಲು ಹಕ್ಕಿಲ್ಲ ಎಂದು ಸಂವಿಧಾನದಲ್ಲಿ ಹೇಳಿದೆಯೇ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರದಲ್ಲಿ ದಲಿತರೂ ಸೇರಿ 51% ಮೀಸಲಾತಿ ಇದೆ. ಹಿಂದೆ ಇದ್ದ ಶೇ 50% ರ ಗರಿಷ್ಠ ಪರಿಮಿತಿಯನ್ನು ಹೆಚ್ಚು ಮಾಡಬೇಕೆಂದಿದೆ. ನಮ್ಮದು ಸಾಮಾಜಿಕ , ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಾಗಿದ್ದು ಕೇಂದ್ರವೂ ಅದನ್ನೇ ಮಾಡಲಿ ಎಂದು ಒತ್ತಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.