ಬಿಜೆಪಿಯ ಜನಾಕ್ರೋಶ ಯಾತ್ರೆ ವಿರುದ್ಧ ಸಿಎಂ ಸಿದ್ಧರಾಮಯ್ಯ ಗರಂ; ಬೆಲೆ ಏರಿಕೆ ಬಗ್ಗೆ ಸ್ಪಷ್ಟನೆ
ಕನ್ನಡ ಸುದ್ದಿ  /  ಕರ್ನಾಟಕ  /  ಬಿಜೆಪಿಯ ಜನಾಕ್ರೋಶ ಯಾತ್ರೆ ವಿರುದ್ಧ ಸಿಎಂ ಸಿದ್ಧರಾಮಯ್ಯ ಗರಂ; ಬೆಲೆ ಏರಿಕೆ ಬಗ್ಗೆ ಸ್ಪಷ್ಟನೆ

ಬಿಜೆಪಿಯ ಜನಾಕ್ರೋಶ ಯಾತ್ರೆ ವಿರುದ್ಧ ಸಿಎಂ ಸಿದ್ಧರಾಮಯ್ಯ ಗರಂ; ಬೆಲೆ ಏರಿಕೆ ಬಗ್ಗೆ ಸ್ಪಷ್ಟನೆ

ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಜನ ಆಕ್ರೋಶ ಯಾತ್ರೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಟೀಕಿಸಿದ್ದಾರೆ. ಬಿಜೆಪಿ ನಾಯಕರಿಗೆ ಘನತೆ ಅಥವಾ ಸಭ್ಯತೆಯ ಕೊರತೆ ಇದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ
ಮುಖ್ಯಮಂತ್ರಿ ಸಿದ್ಧರಾಮಯ್ಯ (ಸಂಗ್ರಹ ಚಿತ್ರ - PTI)

ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಜನ ಆಕ್ರೋಶ ಯಾತ್ರೆಯನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ನಾಯಕರಿಗೆ ಘನತೆ ಅಥವಾ ಸಭ್ಯತೆಯ ಕೊರತೆ ಇದೆ ಎಂದು ಹೇಳಿದ್ದಾರೆ. ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಗೆ ಯಾರು ಹೊಣೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಬಿಜೆಪಿ ನೇರ ಹೊಣೆ ಎಂದು ಅವರು ಹೇಳಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ "ಬಿಜೆಪಿ ನಾಯಕರಿಗೆ ಘನತೆ, ಗೌರವವಿಲ್ಲ. ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಗೆ ಯಾರು ಹೊಣೆ? ಈ ಬೆಲೆ ಏರಿಕೆಗೆ ಬಿಜೆಪಿ ನಾಯಕರ ಬಳಿ ಯಾವ ಉತ್ತರಗಳಿವೆ? ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಬಿಜೆಪಿ ನೇರ ಹೊಣೆ ಎಂದಿದ್ದಾರೆ. ಹೆಚ್ಚಿನ ತೆರಿಗೆ ಸಂಗ್ರಹದ ಬಗ್ಗೆಯೂ ಮಾತನಾಡಿದ್ಧಾರೆ.

ಹಾಲಿನ ಬೆಲೆ ಏರಿಕೆಯಿಂದ ಸರ್ಕಾರದ ಖಜಾನೆಗೆ ಹಣ ಬರುವುದಿಲ್ಲ. ಅದು ರೈತರಿಗೆ ಹೋಗುತ್ತದೆ ಎಂದು ಹೇಳಿದ್ದಾರೆ. ಪೆಟ್ರೋಲ್ ಬೆಲೆಗಳು ಕಚ್ಚಾ ತೈಲ ದರಗಳನ್ನು ಅವಲಂಬಿಸಿವೆ. ಯುಪಿಎ ಸರ್ಕಾರದ ಸಮಯವನ್ನು ನೆನಪಿಸಿಕೊಂಡ ಅವರು, ಆ ಸಮಯದಲ್ಲಿ ಕಚ್ಚಾ ತೈಲವು ಬ್ಯಾರೆಲ್‌ಗೆ 120 ಡಾಲರ್‌ಗಳಷ್ಟಿತ್ತು, ಆದರೆ ಇಂದು ಅದು ಬ್ಯಾರೆಲ್‌ಗೆ 55 ಡಾಲರ್‌ಗಳಷ್ಟಿದೆ ಎಂದು ತಿಳಿಸಿದ್ದಾರೆ. ಆದರೂ, ಪೆಟ್ರೋಲ್ ಬೆಲೆಗಳು ಹೆಚ್ಚಾಗುತ್ತಲೇ ಇವೆ ಇದಕ್ಕೆ ಕೇಂದ್ರ ಸರ್ಕಾರವೇ ಉತ್ತರಿಸಬೇಕು ಎಂದಿದ್ದಾರೆ.

“ಹಾಲಿನ ಬೆಲೆ ಏರಿಕೆಯಿಂದ ಸರ್ಕಾರದ ಖಜಾನೆಗೆ ಹಣ ಬರುವುದಿಲ್ಲ. ಅದು ರೈತರಿಗೆ ಹೋಗುತ್ತದೆ. ರೈತರಿಗೆ ಹಣ ನೀಡುವುದನ್ನು ಬಿಜೆಪಿ ಪ್ರತಿಭಟಿಸಿದರೆ, ಅವರು ರೈತ ವಿರೋಧಿಗಳೇ?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಗೆ ಪ್ರತಿಭಟಿಸುವ ನೈತಿಕ ಹಕ್ಕಿಲ್ಲ

“ಬಿಜೆಪಿಗೆ ಪ್ರತಿಭಟಿಸುವ ನೈತಿಕ ಹಕ್ಕಿಲ್ಲ. ಈ ಎಲ್ಲಾ ಬೆಲೆ ಏರಿಕೆಗಳು ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿವೆ. ಈಗಿನ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪರಿಶೀಲಿಸಿ ಮತ್ತು ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಅದು ಹೇಗಿತ್ತು? ಎಂಬುದನ್ನೂ ಒಮ್ಮೆ ಗಮನಿಸಿ ಎಂದು ಹೇಳಿದ್ದಾರೆ. ಆದರೆ ಮಾಧ್ಯಮಗಳು ಈ ಪ್ರಶ್ನೆಗಳನ್ನು ಯಾರಲ್ಲೂ ಕೇಳುವುದಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರ ದಿವಾಳಿಯಾಗಿದೆ ಎಂಬ ಬಿಜೆಪಿಯ ಆರೋಪಗಳನ್ನು ಸಿದ್ದರಾಮಯ್ಯ ಪ್ರಶ್ನಿಸಿದರು. ನಿವೃತ್ತಿ ಸೌಲಭ್ಯಗಳು, ಸಂಬಳ ಮತ್ತು ಪಿಂಚಣಿಗಳು ಸ್ಥಗಿತಗೊಂಡಿವೆಯೇ ಎಂದು ಅವರು ಕೇಳಿದರು. ಇಂದು ಕರ್ನಾಟಕ ದಿವಾಳಿಯಾಗಿದೆಯಾದರೆ, ಅದಕ್ಕೆ ಬಿಜೆಪಿಯೇ ಕಾರಣ ಎಂದು ಅವರು ಆರೋಪಿಸಿದರು. ಈ ಬಾರಿ 4 ಲಕ್ಷ ಕೋಟಿಗೂ ಹೆಚ್ಚು ಬಜೆಟ್ ಮಂಡಿಸಲಾಗಿದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಅಧಿಕಾರದಲ್ಲಿ ಹೆಚ್ಚಾಗಿದೆ ಸಾಲ

ನರೇಂದ್ರ ಮೋದಿ ಅಧಿಕಾರದಲ್ಲಿ ಇಲ್ಲದಿದ್ದಾಗ ಭಾರತದ ಒಟ್ಟು ಸಾಲ 53.11 ಲಕ್ಷ ಕೋಟಿ ಇತ್ತು, ಇಂದು 200 ಲಕ್ಷ ಕೋಟಿ ಇದೆ ಎಂಬ ವಿಚಾರ ಪ್ರಸ್ತಾಪವಾಗಿದೆ. ಸಂಬಳ, ಪಿಂಚಣಿ ಮತ್ತು ನಿವೃತ್ತಿ ಸೌಲಭ್ಯಗಳನ್ನು ನಿಲ್ಲಿಸಲಾಗಿದೆಯೇ? ಹೇಳಿ ನೋಡೋಣ. ಬಿಜೆಪಿ ಅವಧಿಯಲ್ಲಿ, ಹಣವಿಲ್ಲ ಎಂದು ಹೇಳಿಕೊಂಡ ನಂತರವೂ ಟೆಂಡರ್‌ಗಳನ್ನು ನೀಡಿ ಹಣವನ್ನು ದುರುಪಯೋಗಪಡಿಸಿಕೊಂಡರು. ಈಗ ಅವರು ನಮಗೆ ಪಾಠ ಹೇಳಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಇಂದು ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದ್ದರೆ, ಬಿಜೆಪಿ ನೇರ ಹೊಣೆ. ಇದು ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪ ಅವರ ಕಾಲದಲ್ಲೇ ದಿವಾಳಿ ಆಗಿದೆ. ಈ ವರ್ಷ ನಾವು 4,09,500 ಕೋಟಿ ಬಜೆಟ್ ಮಂಡಿಸಿದ್ದೇವೆ. ಕಳೆದ ವರ್ಷ ನಾವು 3.71 ಲಕ್ಷ ಕೋಟಿ ಬಜೆಟ್ ಮಂಡಿಸಿದ್ದೇವೆ. ರಾಜ್ಯ ದಿವಾಳಿಯಾಗಿದ್ದರೆ, ನಾವು ಬಜೆಟ್ ಹೆಚ್ಚಳ ಮಾಡಲು ಸಾಧ್ಯವಿರಲಿಲ್ಲ ಎಂದು ಹೇಳಿದ್ದಾರೆ.

Suma Gaonkar

eMail
Whats_app_banner