ಕನ್ನಡ ಸುದ್ದಿ  /  Karnataka  /  Karnataka Congress Candidates Final List 2023 Soon, Out Of 1230 Aspirants Who Will Get Chance?

Congress Candidates: ಸದ್ಯದಲ್ಲಿಯೇ ರಾಜ್ಯ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ, 1230 ಆಕಾಂಕ್ಷಿಗಳಲ್ಲಿ ಯಾರಿಗೆ ಅವಕಾಶ?

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಿಂದ 120 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸದ್ಯದಲ್ಲಿಯೇ ಪ್ರಕಟಿಸುವ ನಿರೀಕ್ಷೆಯಿದೆ.

Congress Candidates: ಸದ್ಯದಲ್ಲಿಯೇ ರಾಜ್ಯ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ, 1230 ಆಕಾಂಕ್ಷಿಗಳಲ್ಲಿ ಯಾರಿಗೆ ಅವಕಾಶ? (ANI Photo)
Congress Candidates: ಸದ್ಯದಲ್ಲಿಯೇ ರಾಜ್ಯ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ, 1230 ಆಕಾಂಕ್ಷಿಗಳಲ್ಲಿ ಯಾರಿಗೆ ಅವಕಾಶ? (ANI Photo) (Arunkumar Rao)

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಿಂದ 120 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸದ್ಯದಲ್ಲಿಯೇ ಪ್ರಕಟಿಸುವ ನಿರೀಕ್ಷೆಯಿದೆ. ಕೆಲವು ಮೂಲಗಳ ಪ್ರಕಾರ ಇದೇ ಮಾರ್ಚ್‌ 20ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳ್ಳಬಹುದು.

‘ಮಾ.16 ರಂದು ಇಲ್ಲಿ ಒಂದು ಸಭೆ ಕರೆದಿದ್ದು, ಮಾ.17ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಅಂತಿಮ ತೀರ್ಮಾನವಾಗಲಿದೆ’ ಎಂದು ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಪಟ್ಟಿ ಅಂತಿಮ ಯಾವಾಗ? ಎಂಬ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದಲ್ಲಿ ಈ ಬಾರಿ ಸೀಟು ಪಡೆಯಲು ಸಾವಿರಕ್ಕಿಂತ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಟಿಕೆಟ್‌ಗಾಗಿ 1230 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳನ್ನು ಪರಿಶೀಲಿಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್‌ ತಯಾರಿಸಿದೆ. ಇದರಲ್ಲಿ ಇನ್ನೊಂದಿಷ್ಟು ಜನರನ್ನು ತೆಗೆಯುವ ಅಥವಾ ಸೇರಿಸುವ ಪ್ರಕ್ರಿಯೆಯೂ ನಡೆಯಬೇಕಿದೆ.

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿಸಲು ಮಾರ್ಚ್‌ 16 ಮತ್ತು ಮಾರ್ಚ್‌ 17ರಂದು ಕಾಂಗ್ರೆಸ್‌ ಸಭೆ ನಡೆಸಲಿದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನಾ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮುಂತಾದವರು ಭಾಗವಹಿಸಲಿದ್ದಾರೆ.

ಈಗಾಗಲೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಮೋಹನ್‌ ಪ್ರಕಾಶ್‌ ನೇತೃತ್ವದಲ್ಲಿ ಪರಿಶೀಲನಾ ಸಮಿತಿ ಪರಿಶೀಲಿಸಿದೆ. ಈ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಮುಂದಿನ ಸಭೆಯಲ್ಲಿ ನಿರ್ಣಯಿಸಿದ ಬಳಿಕ ಮಾರ್ಚ್‌ 20ರಂದು ಅಂತಿಮ ಪಟ್ಟಿ ಹೊರಬೀಳುವ ನಿರೀಕ್ಷೆಯಿದೆ.

ಧೃವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡುವ ಆಲೋಚನೆ ಇದೆಯೇ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್‌ ಉತ್ತರಿಸಿದ್ದಾರೆ. ‘ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಧೃವನಾರಾಯಣ ಅವರ ಕುಟುಂಬಕ್ಕೆ ಆಪ್ತರಾಗಿದ್ದಾರೆ. ಇನ್ನು ಪಕ್ಷದ ಟಿಕೆಟ್ ಹಂಚಿಕೆ ವಿಚಾರವಾಗಿ ಅವರು ಅಂತಿಮ ತೀರ್ಮಾನ ಮಾಡಲಿದ್ದಾರೆ. ಪಕ್ಷದ ನಿಷ್ಠಾವಂತ ನಾಯಕರಾದ ಧೃವನಾರಾಯಣ ಅವರ ವಿಚಾರದಲ್ಲಿ ನಾನು ಪ್ರಾಮಾಣಿಕವಾಗಿ ನಮ್ಮ ನಾಯಕರಿಗೆ ಯಾವ ಸಲಹೆ ನೀಡಬೇಕೋ ನೀಡಿದ್ದೇನೆ. ಧೃವನಾರಾಯಣ ಅವರಂತಹ ಕಾರ್ಯಾಧ್ಯಕ್ಷರನ್ನು ಕಳೆದುಕೊಂಡಿರುವುದು ಇಡೀ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಆ ಆಘಾತದಿಂದ ನಾವಿನ್ನೂ ಹೊರಬರಲು ಸಾಧ್ಯವಾಗಿಲ್ಲ. ಸಂಘಟನೆ ಶಕ್ತಿ, ತಾಳ್ಮೆ, ನಿಷ್ಠೆ, ಸೌಮ್ಯ ವ್ಯಕ್ತಿತ್ವಕ್ಕೆ ಮತ್ತೊಂದು ಹೆಸರು ಧೃವನಾರಾಯಣ ಅವರು. ಅವರ ಆತ್ಮಕ್ಕೆ ಶಾಂತಿ ಸಿಗುವಂತಹ ಕೆಲಸವನ್ನು ಪಕ್ಷ ಮಾಡಲಿದೆ’ ಎಂದು ತಿಳಿಸಿದ್ದಾರೆ.

ರಾಜಾಜಿನಗರದ ಆಕಾಂಕ್ಷಿಗಳು ತಮ್ಮನ್ನು ಭೇಟಿ ಮಾಡಿ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡುವುದು ಬೇಡ ಎಂಬ ಬೇಡಿಕೆ ಇಟ್ಟಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನಾವು ಅವರಿಗೆ ಟಿಕೆಟ್ ನೀಡುತ್ತಿದ್ದೇವೆ ಎಂದು ಯಾರು ಹೇಳಿದರು? ಪಕ್ಷದ ಅನುಕೂಲಕ್ಕೆ ತಕ್ಕಂತೆ ಪಕ್ಷ ತೀರ್ಮಾನ ಮಾಡಲಿದೆ. ಯಾರ ಬೆದರಿಕೆಗೂ ಕಾಂಗ್ರೆಸ್ ಪಕ್ಷ ಬಗ್ಗುವುದಿಲ್ಲ. ಪಕ್ಷ ಈ ವಿಚಾರವಾಗಿ ಯಾವ ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ’ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

IPL_Entry_Point