Kannada News  /  Karnataka  /  Karnataka Covid Cases Jump 65 Percent In 24 Hours
ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ (ಪೋಟೋ-PTI)
ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ (ಪೋಟೋ-PTI)

Karnataka Covid cases: ರಾಜ್ಯದಲ್ಲಿ ಒಂದೇ ದಿನ ಕೋವಿಡ್ ಪ್ರಕರಣಗಳ ಸಂಖ್ಯೆ ಶೇ.65ರಷ್ಟು ಏರಿಕೆ

18 March 2023, 18:00 ISTHT Kannada Desk
18 March 2023, 18:00 IST

ರಾಜ್ಯದಲ್ಲಿ ಒಂದೇ ದಿನ ಕೋವಿಡ್ ಪ್ರಕರಣ ಸಂಖ್ಯೆ ಶೇ.65 ರಷ್ಟು ಏರಿಕೆಯಾಗಿದೆ. ಶುಕ್ರವಾರ ಒಂದೇ ದಿನ 127 ಹೊಸ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು: ಮೇ ವೇಳೆಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರ ನಡುವೆಯೇ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದು ಕೊಂಚ ತಲೆನೋವಾಗಿ ಪರಿಣಮಿಸಿದಂತಿದೆ.

ಟ್ರೆಂಡಿಂಗ್​ ಸುದ್ದಿ

ನಿನ್ನೆ (ಮಾರ್ಚ್ 17, ಶುಕ್ರವಾರ) ರಾಜ್ಯದಲ್ಲಿ 127 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಹಿಂದಿನ ದಿನಕ್ಕೆ ಹೋಲಿಸಿದರೆ ಶೇ.65 ರಷ್ಟು ಕೇಸ್ ಗಳ ಸಂಖ್ಯೆ ಹೆಚ್ಚಾಗಿದೆ. ಗುರುವಾರ ಕೇವಲ 77 ಮಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು.

ಬೆಂಗಳೂರು ಒಂದರಲ್ಲೇ ನಿನ್ನೆ 77 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ತಿಳಿದು ಬಂದಿದೆ. 130 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 584 ಇದ್ದು, ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40.75 ಲಕ್ಷ ಇದೆ. ಪಾಸಿಟಿವ್ ದರವು ಶೇಕಡಾ 3.28 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 3,866 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಸುಮಾರು 117 ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲಿ ಪರೀಕ್ಷಿಸಲಾಗಿದೆ. ಜಿಲ್ಲೆಗಳ ಪೈಕಿ, ಕಲಬುರಗಿಯಲ್ಲಿ 12 ಪ್ರಕರಣಗಳು ಮತ್ತು ಉತ್ತರ ಕನ್ನಡದಿಂದ ಆರು ಪ್ರಕರಣಗಳು ವರದಿಯಾಗಿವೆ, ಇದು ಬೆಂಗಳೂರಿನ ನಂತರ ಅತಿ ಹೆಚ್ಚು ಹೊಸ ಪ್ರಕರಣಗಳನ್ನು ಹೊಂದಿರುವ ಜಿಲ್ಲೆಗಳಾಗಿವೆ. ಇದರ ನಡುವೆ ಕರ್ನಾಟಕದ ಸುಮಾರು 16 ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ.

ಶುಕ್ರವಾರ ರಾಜ್ಯದಿಂದ ಯಾವುದೇ ಸಾವುಗಳು ವರದಿಯಾಗಿಲ್ಲ, ಆದರೆ ಇದಕ್ಕೂ ಹಿಂದಿನ ದಿನ ಕೋವಿಡ್ ಸೋಂಕಿತ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದ. ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ 40 ಪ್ರಕರಣಗಳು ಪತ್ತೆಯಾಗಿದ್ದವು. ಮೊನ್ನೆಗೆ ಹೋಲಿಸಿದರೆ ನಿನ್ನೆ ಹೊಸ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ನಗರದಲ್ಲಿ 108 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 352 ಕ್ಕೆ ತಲುಪಿದೆ.

ವಿಭಾಗ