ಜೀವ ಉಳಿಸಿಕೊಳ್ಳಲು ಗಂಡನ ಹತ್ಯೆ; ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂಪ್ರಕಾಶ್‌ ಕೊಲೆ ರಹಸ್ಯ ಬಿಚ್ಚಿಟ್ಟ ಪತ್ನಿ ಪಲ್ಲವಿ
ಕನ್ನಡ ಸುದ್ದಿ  /  ಕರ್ನಾಟಕ  /  ಜೀವ ಉಳಿಸಿಕೊಳ್ಳಲು ಗಂಡನ ಹತ್ಯೆ; ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂಪ್ರಕಾಶ್‌ ಕೊಲೆ ರಹಸ್ಯ ಬಿಚ್ಚಿಟ್ಟ ಪತ್ನಿ ಪಲ್ಲವಿ

ಜೀವ ಉಳಿಸಿಕೊಳ್ಳಲು ಗಂಡನ ಹತ್ಯೆ; ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂಪ್ರಕಾಶ್‌ ಕೊಲೆ ರಹಸ್ಯ ಬಿಚ್ಚಿಟ್ಟ ಪತ್ನಿ ಪಲ್ಲವಿ

ಕರ್ನಾಟಕದ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಮುಂದೆ ಕೊಲೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಜೀವ ಉಳಿಸಿಕೊಳ್ಳುವ ಸಲುವಾಗಿ ಕೊಲೆ ಮಾಡಿದ್ದಾಗಿ ಆಕೆ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಜೀವ ಉಳಿಸಿಕೊಳ್ಳಲು ಗಂಡನ ಹತ್ಯೆ; ನಿವೃತ್ತ ಡಿಜಿ ಓಂಪ್ರಕಾಶ್‌ ಕೊಲೆ ರಹಸ್ಯ ಬಿಚ್ಚಿಟ್ಟ ಪತ್ನಿ
ಜೀವ ಉಳಿಸಿಕೊಳ್ಳಲು ಗಂಡನ ಹತ್ಯೆ; ನಿವೃತ್ತ ಡಿಜಿ ಓಂಪ್ರಕಾಶ್‌ ಕೊಲೆ ರಹಸ್ಯ ಬಿಚ್ಚಿಟ್ಟ ಪತ್ನಿ

ಕರ್ನಾಟಕದ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಕೊಲೆ ಪ್ರಕರಣ ಈಗ ರಾಜ್ಯದಾದ್ಯಂತ ಸಂಚಲನ ಮೂಡಿಸಿದೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಪತ್ನಿ ಹಾಗೂ ಮಗಳೊಂದಿಗೆ ವಾಸವಾಗಿದ್ದ ಓಂ ಪ್ರಕಾಶ್ ಭಾನುವಾರ (ಏಪ್ರಿಲ್ 20) ಭೀಕರವಾಗಿ ಕೊಲೆಯಾಗಿದ್ದರು. ಈ ಕೊಲೆಗೆ ಸಂಬಂಧಿಸಿ ಓಂ ಪ್ರಕಾಶ್‌ ಪತ್ನಿ ಹಾಗೂ ಮಗಳ ಮೇಲೆ ಅನುಮಾನ ವ್ಯಕ್ತಪಡಿಸಿರುವ ಪೊಲೀಸರು ಅವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸಿದ್ದಾರೆ.

ಸದ್ಯ ಓಂ ಪ್ರಕಾಶ್‌ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಪೊಲೀಸರ ವಶದಲ್ಲಿದ್ದು, ಇಂದು (ಸೋಮವಾರ 21) ಓಂಪ್ರಕಾಶ್ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಘಟನೆ ಸಂಬಂಧ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿರುವ ಪಲ್ಲವಿ ಕೊಲೆಗೆ ಕಾರಣವನ್ನು ಬಿಚ್ಚಿಟ್ಟಿದ್ದಾರೆ. ಕೌಟುಂಬಿಕ ಕಲಹದ ಕಾರಣದಿಂದ ಇವರ ಕೊಲೆ ನಡೆದಿದೆ ಎಂದು ಮೊದಲೇ ಊಹಿಸಲಾಗಿತ್ತು. ಅದರಂತೆ ಪಲ್ಲವಿ ಹಾಗೂ ಮಗಳನ್ನು ವಶಕ್ಕೆ ಪಡೆಯಲಾಗಿತ್ತು.

ತನಿಖೆಯ ವೇಳೆ ನಮ್ಮ ಜೀವ ಉಳಿಸಿಕೊಳ್ಳಲು ನಾವು ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾರೆ ಪಲ್ಲವಿ. ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು.ಪತಿ ಪದೇ ಪದೇ ಗನ್ ತಂದು ತನಗೂ, ಮಗಳಿಗೂ ಕೊಲೆ ಬೆದರಿಕೆ ಹಾಕುತ್ತಿದ್ದರು. ಶೂಟ್ ಮಾಡುತ್ತೇನೆ ಎಂದು ಹೆದರಿಸುತ್ತಿದ್ದರು. ಭಾನುವಾರ ಬೆಳಿಗ್ಗೆಯಿಂದಲೇ ಬೇರೆ ಬೇರೆ ವಿಚಾರಕ್ಕೆ ಮನೆಯಲ್ಲಿ ಜೋರು ಜಗಳ ನಡೆದಿತ್ತು. ಆ ಸಂದರ್ಭ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಹೆಂಡತಿ, ಮಗಳನ್ನು ಕೊಲೆ ಮಾಡಲು ಪ್ರಯತ್ನಿಸಿದ್ದರು ಓಂಪ್ರಕಾಶ್‌. ಆಗ ಜೀವ ಉಳಿಸಿಕೊಳ್ಳಲು ನಾವು ಹೋರಾಟ ನಡೆಸಿದೆವು. ಅವರ ಮೇಲೆ ಅಡುಗೆ ಎಣ್ಣೆ ಹಾಗೂ ಖಾರದ ಪುಡಿ ಎರಚಿದೆವು. ಕೈ ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದೆವು ಎಂದು ತನಿಖಾಧಿಕಾರಿಗಳ ಮುಂದೆ ಪಲ್ಲವಿ ಹೇಳಿದ್ದಾಗಿ ಟಿವಿ9 ವರದಿ ತಿಳಿಸಿದೆ.

ನಂತರ ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದು ಸಂಜೆ ಹೊತ್ತಿಗೆ ಪಲ್ಲವಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಮಗಳ ವಿಚಾರಣೆ ಕೂಡ ನಡೆಯುತ್ತಿದೆ. ಓಂ ಪ್ರಕಾಶ್ ಅವರ ಮಗ ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆ ತನಿಖೆ ಆರಂಭಿಸಲಾಗಿದೆ. ಆದರೆ ಈವರೆಗೆ ಯಾರನ್ನೂ ಬಂಧಿಸಿಲ್ಲ.

ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.