Bidadi: ಬಿಡದಿ ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ; ಸ್ಟೇಷನ್‌ನ ಇಂಚಿಂಚು ಶೋಧಿಸಿದ ಬಾಂಬ್ ನಿಷ್ಕ್ರೀಯ ದಳ
ಕನ್ನಡ ಸುದ್ದಿ  /  ಕರ್ನಾಟಕ  /  Bidadi: ಬಿಡದಿ ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ; ಸ್ಟೇಷನ್‌ನ ಇಂಚಿಂಚು ಶೋಧಿಸಿದ ಬಾಂಬ್ ನಿಷ್ಕ್ರೀಯ ದಳ

Bidadi: ಬಿಡದಿ ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ; ಸ್ಟೇಷನ್‌ನ ಇಂಚಿಂಚು ಶೋಧಿಸಿದ ಬಾಂಬ್ ನಿಷ್ಕ್ರೀಯ ದಳ

Bidadi Bomb Threat: ಬಿಡದಿ ರೈಲು ನಿಲ್ದಾಣದಲ್ಲಿ ಬಾಂಬ್ ಇರುವುದಾಗಿ ಕರೆ ಬಂದಿದ್ದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ್ದ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ, ರೈಲ್ವೆ ಪೊಲೀಸರು ರೈಲು ನಿಲ್ದಾಣದಲ್ಲಿ ಶೋಧ ಕಾರ್ಯ ನಡೆಸಿದರು.

ಬಿಡದಿ ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ
ಬಿಡದಿ ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ (PC: India Rail Info)

ರಾಮನಗರ: ಬಿಡದಿ ರೈಲು ನಿಲ್ದಾಣದಲ್ಲಿ ಬಾಂಬ್‌ ಇರುವುದಾಗಿ ಅಪರಿಚಿತರೊಬ್ಬರು ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದರು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ, ರೈಲ್ವೆ ಪೊಲೀಸರು ರೈಲು ನಿಲ್ದಾಣದಲ್ಲಿ ಶೋಧ ಕಾರ್ಯ ನಡೆಸಿದರು.

ಆದರೆ ಇದೊಂದು ಹುಸಿ ಬಾಂಬ್ ಕರೆಯಾಗಿದ್ದು, ಒಂದಿಷ್ಟು ಕಾಲ ಆತಂಕಕ್ಕೆ ಕಾರಣವಾಗಿತ್ತು. ಮಧ್ಯರಾತ್ರಿ 12ರ ಸುಮಾರಿಗೆ ರೈಲ್ವೆ ನಿಯಂತ್ರಣ ಕೊಠಡಿಗೆ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ರೈಲು ನಿಲ್ದಾಣದಲ್ಲಿ ಬಾಂಬ್ ಇರುವುದಾಗಿ ಹೇಳಿ ಕಾಲ್ ಕಟ್ ಮಾಡಿದ್ದ. ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ರಾತ್ರಿಯೇ ಹುಡುಕಾಟ ನಡೆಸಿದ್ದರು. ಆದರೆ ಆಗ ಏನೂ ಸಿಕ್ಕಿರಲಿಲ್ಲ. ನಂತರ ಬೆಳಿಗ್ಗೆ ಬಾಂಬ್ ನಿಷ್ಕ್ರೀಯ ದಳ, ಶ್ವಾನದಳ ರೈಲ್ವೆ ಪೊಲೀಸರು ಸಂಪೂರ್ಣ ನಿಲ್ದಾಣದಲ್ಲಿ ಹುಡುಕಾಟ ನಡೆಸಿದ್ದರು. ಆದರೆ ಬಾಂಬ್ ಪತ್ತೆಯಾಗಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಿಡದಿ ರೈಲು ನಿಲ್ದಾಣದಲ್ಲಿ ಬಾಂಬ್ ಇರುವುದಾಗಿ ಕಿಡಿಗೇಡಿಯೊಬ್ಬ ಹುಸಿ ಕರೆ ಮಾಡಿದ್ದಾನೆ. ಆದರೆ ಆ ಕರೆ ಎಲ್ಲಿಂದ ಬಂದಿದೆ, ಮಾಡಿದವರು ಯಾರು, ಯಾವ ಕಾರಣಕ್ಕಾಗಿ ಈ ರೀತಿ ಹೇಳಿದ ಎಂಬ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರ್ ಮೂಲಗಳು ಹೇಳಿದ್ದಾಗಿ ಪ್ರಜಾವಾಣಿ ವರದಿ ತಿಳಿಸಿದೆ.

Reshma

TwittereMail
ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner