ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ 3ಕ್ಕೆ ಪ್ರಕಟ ಸಾಧ್ಯತೆ; ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಿಳಿದಿರಬೇಕಾದ ಮಾಹಿತಿಯಿದು
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ 3ಕ್ಕೆ ಪ್ರಕಟ ಸಾಧ್ಯತೆ; ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಿಳಿದಿರಬೇಕಾದ ಮಾಹಿತಿಯಿದು

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ 3ಕ್ಕೆ ಪ್ರಕಟ ಸಾಧ್ಯತೆ; ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಿಳಿದಿರಬೇಕಾದ ಮಾಹಿತಿಯಿದು

2024-2025ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವು ಮೇ 3 ರಂದು ಪ್ರಕಟವಾಗುವ ಸಾಧ್ಯತೆ ಇದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಕಟಿಸುವ ಎಸ್‌ಎಸ್‌ಎಲ್‌ಸಿ ರಿಸಲ್ಟ್ ನೋಡುವುದು ಹೇಗೆ ಎಂಬ ವಿವರ ಇಲ್ಲಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ 3ಕ್ಕೆ ಪ್ರಕಟ ಸಾಧ್ಯತೆ; ರಿಸಲ್ಟ್ ನೋಡುವುದು ಹೀಗೆ  (ಸಾಂಕೇತಿಕ ಚಿತ್ರ)
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ 3ಕ್ಕೆ ಪ್ರಕಟ ಸಾಧ್ಯತೆ; ರಿಸಲ್ಟ್ ನೋಡುವುದು ಹೀಗೆ (ಸಾಂಕೇತಿಕ ಚಿತ್ರ)

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2024–25ನೇ ಸಾಲಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವು ಮೇ 3 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಈ ಬಾರಿ 8 ಲಕ್ಷದಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಮಕ್ಕಳು ಸೇರಿದಂತೆ ಪೋಷಕರು ಹಾಗೂ ಶಿಕ್ಷಕರು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಫಲಿತಾಂಶ ದಿನಾಂಕದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿಸಿಲ್ಲ.

ಈ ಬಾರಿ ಮಾರ್ಚ್ 21 ರಿಂದ ಏಪ್ರಿಲ್ 4ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿದ್ದು, ಈಗಾಗಲೇ ಮೌಲ್ಯಮಾಪನ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದೆ. ಬಾಕಿ ಉಳಿದಿರುವ ಕ್ರಮಗಳು ಮುಗಿದ ಕೂಡಲೇ ಫಲಿತಾಂಶ ಪ್ರಕಟವಾಗಲಿದೆ. ಮೇ 3 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದು ಎಂದು ಹೇಳಲಾಗುತ್ತಿದೆ.

ಒಟ್ಟು 2818 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 8 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆ ಬರೆದಿದ್ದರು. ಎಸ್‌ಎಸ್‌ಎಲ್‌ಸಿ ಎನ್ನುವುದು ವಿದ್ಯಾರ್ಥಿಗಳ ಪಾಲಿನ ಪ್ರಮುಖ ಘಟ್ಟವಾಗಿದ್ದು, ಹಲವರು ವಿದ್ಯಾರ್ಥಿಗಳು ರಿಸಲ್ಟ್ ಏನಾಗಿರಬಹುದು ಎಂದು ಕುತೂಹಲದಿಂದ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾದ ಕೂಡಲೇ ಆನ್‌ಲೈನ್‌ನಲ್ಲಿ ರಿಸಲ್ಟ್ ನೋಡಬಹುದು. ರಿಸಲ್ಟ್ ನೋಡುವುದು ಹೇಗೆ ಎನ್ನುವ ವಿವರ ಇಲ್ಲಿದೆ.

2025 ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ನೋಡುವುದು

https://karresults.nic.in/ ಹಾಗೂ kseab.karnataka.gov.in ರಿಸಲ್ಟ್ ನೋಡಲು ಇರುವ ಅಧಿಕೃತ ವೆಬ್‌ಸೈಟ್‌ಗಳಾಗಿವೆ.

* ಈ ವೆಬ್‌ಸೈಟ್‌ಗೆ ಭೇಟಿ ಅಲ್ಲಿ SSLC Result 2025 ಎಂದಿರುವಲ್ಲಿ ಕ್ಲಿಕ್ ಮಾಡಿ.

* ನಿಮ್ಮ ರಿಜಿಸ್ಟರ್ ನಂಬರ್ ಅನ್ನು ಎಂಟ್ರಿ ಮಾಡಿ

* ನಂತರ ಸಬ್‌ಮಿಟ್ ಕೊಡಿ

* ಈಗ ನಿಮ್ಮ ರಿಸಲ್ಟ್ ಹಾಗೂ ಅಂಕಗಳು ಪರದೆ ಮೇಲೆ ಕಾಣಿಸುತ್ತದೆ.

* ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಆಯ್ಕೆಯೂ ಇರುತ್ತದೆ. ನಂತರ ಅದನ್ನು ನೀವು ಪ್ರಿಂಟ್ ತೆಗೆದು ಇರಿಸಿಕೊಳ್ಳಬಹುದು.

ಆಫ್‌ಲೈನ್‌ನಲ್ಲಿ ರಿಸಲ್ಟ್ ನೋಡುವುದು

ಆನ್‌ಲೈನ್‌ನಲ್ಲಿ ರಿಸಲ್ಟ್ ನೋಡಲು ಸಾಧ್ಯವಾಗದೇ ಇರುವವರಿಗೆ ಆಫ್‌ಲೈನ್‌ನಲ್ಲೂ ರಿಸಲ್ಟ್ ನೋಡುವುದ ಅವಕಾಶವಿದೆ. ನಿಮಗೆ ಅನ್‌ಲೈನ್‌ನಲ್ಲಿ ರಿಸಲ್ಟ್ ನೋಡಲು ಸಾಧ್ಯವಾಗದೇ ಇದ್ದರೆ ನಿಮ್ಮ ರಿಜಿಸ್ಟರ್ ಸಂಖ್ಯೆಯನ್ನು 56263 ನಂಬರ್‌ಗೆ ಕಳುಹಿಸುವ ಮೂಲಕವೂ ಫಲಿತಾಂಶ ತಿಳಿದುಕೊಳ್ಳಬಹುದು.

Reshma

TwittereMail
ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.