ಕನ್ನಡ ಸುದ್ದಿ  /  ಕರ್ನಾಟಕ  /  Hd Devegowda: ಕಾಶ್ಮೀರಕ್ಕೆ ಹೋದಾಗಲೂ ನನಗೆ ಮುಸ್ಲಿಮರು ಏನೂ ಮಾಡಲಿಲ್ಲ; ಜೆಡಿಎಸ್ ವರಿಷ್ಠ ಹೆಚ್​​​ಡಿ ದೇವೇಗೌಡ

HD Devegowda: ಕಾಶ್ಮೀರಕ್ಕೆ ಹೋದಾಗಲೂ ನನಗೆ ಮುಸ್ಲಿಮರು ಏನೂ ಮಾಡಲಿಲ್ಲ; ಜೆಡಿಎಸ್ ವರಿಷ್ಠ ಹೆಚ್​​​ಡಿ ದೇವೇಗೌಡ

Karnataka Assembly Elections 2023: ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಿದ್ದು ನಾನೇ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಗೆ (Krishnarajpete) ನೀರು ತಂದು ಕೊಟ್ಟಿದ್ದು ನಾನೇ. ಜನರು ಈ ಬಾರಿ ಜೆಡಿಎಸ್‌ ಅನ್ನು ಬೆಂಬಲಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ್ (HD Devegowda) ಮಂಡ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ
ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ

ಮಂಡ್ಯ: ಕಾಶ್ಮೀರಕ್ಕೆ ಹೋಗಬಾರದು ಎಂದು ಹೇಳಿದ್ದರೂ ನಾನು 3 ಬಾರಿ ಅಲ್ಲಿಗೆ ಹೋಗಿದ್ದೆ. ಆದರೆ ನನ್ನನ್ನು ಯಾವ ಮುಸ್ಲಿಮರೂ ಸಾಯಿಸಲಿಲ್ಲ. ಮುಸ್ಲಿಂ ಬಾಂಧವರು ಯಾವಾಗಲೂ ನನ್ನ ಜೊತೆಯೇ ಇದ್ದಾರೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (Prime Minister HD Devegowda) ಹೇಳಿದರು.

ಟ್ರೆಂಡಿಂಗ್​ ಸುದ್ದಿ

ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಿದ್ದು ನಾನೇ. ಮಂಡ್ಯ ಜಿಲ್ಲೆ (Mandya District) ಕೆಆರ್ ಪೇಟೆಗೆ (Krishnarajpete) ನೀರು ತಂದು ಕೊಟ್ಟಿದ್ದು ನಾನೇ. ಜನರು ಈ ಬಾರಿ ಜೆಡಿಎಸ್‌ (JDS) ಅನ್ನು ಬೆಂಬಲಿಸಬೇಕು. ಮಂಡ್ಯದ ಭದ್ರಕೋಟೆಯಲ್ಲಿ ಜೆಡಿಎಸ್‌ ಜಯಭೇರಿ ಬಾರಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ಕೆಸಿ ನಾರಾಯಣಗೌಡ (KC Narayangowda) ಅವರಿಗೆ ವಲಸೆ ರಾಜಕಾರಣಿ ಎಂದು ಟಾಂಗ್ ಕೊಟ್ಟ ಅವರು, ಜೆಡಿಎಸ್ ಮುಗಿದೆ ಹೋಯ್ತು ಅಂತ ಇತ್ತೀಚೆಗೆ ಒಬ್ಬರು ಹೇಳುತ್ತಿದ್ದರು. ಅವರ ಮಾತನ್ನ ಕೇಳಿದರೆ ನನ್ನ ರಕ್ತ ಕುದಿಯುತ್ತದೆ. ಏನು ಜೆಡಿಎಸ್ ಮುಗಿದೆ ಹೋಯಿತೇ? ನನ್ನ ಮಂಡ್ಯ ಜಿಲ್ಲೆಯಲ್ಲಿ 7 ಸ್ಥಾನದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲೇಬೇಕು. ಕುಮಾರಣ್ಣ ಮುಖ್ಯಮಂತ್ರಿ ಆಗಲೇ ಬೇಕು. ನಮ್ಮ ಅಭ್ಯರ್ಥಿ ಹೆಚ್.ಟಿ ಮಂಜು (HT Manju) ಅವರಿಗೆ ನಿಮ್ಮ ಅಮೂಲ್ಯ ಮತ ನೀಡಿ ಎಂದು ಮನವಿ ಮಾಡಿದರು.

ತಮ್ಮ ಹಳೆಯ ನೆನಪುಗಳನ್ನ ಮೆಲುಕು ಹಾಕಿದ ಹೆಚ್.ಡಿ.ದೇವೆಗೌಡ, 1982 ರಲ್ಲಿ ಕೆ.ಆರ್ ಪೇಟೆಯ ಕೆರೆ ಹೊಡೆದು ಹೋಗಿತ್ತು. ಬೆಳೆದ ಫಸಲುಗಳು ಮಣ್ಣು ಪಾಲಾಗಿ ಹೋಯ್ತು. ರಾತ್ರಿ 8 ಗಂಟೆಗೆ ದೆಹಲಿಯಿಂದ ಓಡೋಡಿ ಬಂದೆ. ಕೆ.ಆರ್ ಪೇಟೆಯಲ್ಲಿ ಒಂದು ಬ್ರಿಡ್ಜ್ ಕಟ್ಟಲು ನಾನೇ ಬೇಕಾಯ್ತು ಎಂದು ವಿವರಿಸಿದರು.

ಇಂದಿನ ರಾಜಕೀಯ ಪ್ರಮುಖ ಸುದ್ದಿ

Siddaramaiah: ಬಿಜೆಪಿ 40 ಪರ್ಸೆಂಟ್ ಭ್ರಷ್ಟಾಸುರನನ್ನು ಸುಟ್ಟಿದ್ದೇವೆ, ಮೇ 10ರಂದು ಮತದಾರರಿಂದ ಅಸ್ಥಿ ವಿಸರ್ಜನೆ; ಸಿದ್ದರಾಮಯ್ಯ ವಾಗ್ದಾಳಿ

ಭಾರತೀಯ ಜನತಾ ಪಾರ್ಟಿ (BJP) ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು (Chief Minister Siddaramaiah) ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮುಕ್ತ ಕರ್ನಾಟಕ ಮಾಡಲು ಹೊರಟಿರುವ ಕಾಂಗ್ರೆಸ್ (Congress)​, 40% ಸರ್ಕಾರವನ್ನು ಸುಟ್ಟು ಹಾಕಬೇಕೆಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್​ ಮೂಲಕ ಸಿದ್ಧರಾಮಯ್ಯ ಕಿಡಿ ಕಾರಿದ್ದಾರೆ. ಈ ಕುರಿತ ಸಂಪೂರ್ಣ ಸುದ್ದಿಗಾಗಿ ಈ ಲಿಂಕ್​ ಮೇಲೆ ಕ್ಲಿಕ್​ ಮಾಡಿ.

CM Bommai in Shiggaon: ನಿಮ್ಮ ಮತಕ್ಕೆ ಮುಖ್ಯಮಂತ್ರಿ ಮಾಡುವ ಶಕ್ತಿಯಿದೆ; ಮತ್ತೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಬೊಮ್ಮಾಯಿ

ಹಾವೇರಿ (ಶಿಗ್ಗಾಂವಿ): ನಿಮ್ಮ ಆಶೀರ್ವಾದದಿಂದ ನಾನು ಮುಖ್ಯಮಂತ್ರಿಯಾಗಿದ್ದೇನೆ. ನಿಮ್ಮ ಮತಕ್ಕೆ ಮುಖ್ಯಮಂತ್ರಿ ಮಾಡುವ ಶಕ್ತಿಯಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Chief Minister Basavaraj Bommai) ಅವರು ಮತ್ತೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಈ ಕುರಿತ ಸಂಪೂರ್ಣ ಸುದ್ದಿಗಾಗಿ ಈ ಲಿಂಕ್​ ಮೇಲೆ ಕ್ಲಿಕ್​ ಮಾಡಿ.

ಟಿ20 ವರ್ಲ್ಡ್‌ಕಪ್ 2024