Congress Candidates 5th List: ಕಾಂಗ್ರೆಸ್‌ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ; ಮುಂದುವರೆದಿದೆ ಕೋಲಾರ ಅಭ್ಯರ್ಥಿ ಯಾರೆಂಬ ಸಸ್ಪೆನ್ಸ್‌
ಕನ್ನಡ ಸುದ್ದಿ  /  ಕರ್ನಾಟಕ  /  Congress Candidates 5th List: ಕಾಂಗ್ರೆಸ್‌ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ; ಮುಂದುವರೆದಿದೆ ಕೋಲಾರ ಅಭ್ಯರ್ಥಿ ಯಾರೆಂಬ ಸಸ್ಪೆನ್ಸ್‌

Congress Candidates 5th List: ಕಾಂಗ್ರೆಸ್‌ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ; ಮುಂದುವರೆದಿದೆ ಕೋಲಾರ ಅಭ್ಯರ್ಥಿ ಯಾರೆಂಬ ಸಸ್ಪೆನ್ಸ್‌

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪ್ರತಿಪಕ್ಷ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡಗಡೆ ಮಾಡಿದೆ. ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಆದರೆ ಇಡೀ ರಾಜ್ಯ ಕಾತರದಿಂದ ಕಾಯುತ್ತಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿಯನ್ನು ಕಾಂಗ್ರೆಸ್‌ ಇನ್ನೂ ಘೋಷಿಸಿಲ್ಲ.

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ (PTI)

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪ್ರತಿಪಕ್ಷ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡಗಡೆ ಮಾಡಿದೆ. ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಆದರೆ ಇಡೀ ರಾಜ್ಯ ಕಾತರದಿಂದ ಕಾಯುತ್ತಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿಯನ್ನು ಕಾಂಗ್ರೆಸ್‌ ಇನ್ನೂ ಘೋಷಿಸಿಲ್ಲ.

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಇಂತಿದೆ

1. ಶಿಗ್ಗಾಂವಿ- ಯಾಸಿರ್‌ ಅಹ್ಮದ್‌ ಪಠಾಣ್‌

2. ಮುಳಬಾಗಿಲು ಎಸ್‌ಸಿ- ಡಾ. ಬಿ.ಸಿ. ಮುದ್ದುಗಂಗಾಧರ

3. ಕೆಆರ್‌ ಪುರ-ಡಿ.ಕೆ. ಮೋಹನ್‌

4. ಪುಲಕೇಶಿನಗರ ಎಸ್‌ಸಿ- ಎ.ಸಿ. ಶ್ರೀನಿವಾಸ

ಕಾಂಗ್ರೆಸ್‌ ಇಂದು (ಏ.19) ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ, ಪುಲಕೇಶಿನಗರ ಎಸ್‌ಸಿ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಅವರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿರುವುದು ತೀವ್ರ ಗಮನ ಸೆಳೆದಿದೆ.

ಈ ಮೊದಲು ಅಖಂಡ ಶ್ರೀನಿವಾಸ ಅವರಿಗೆ ಟಿಕೆಟ್‌ ದೊರೆಯುವುದು ಅನುಮಾನ ಎಂದೇ ಹೇಳಲಾಗಿತ್ತು. ಆದರೆ ಅಂತಿಮ ಹಂತದಲ್ಲಿ ಅವರಿಗೆ ಪಕ್ಷ ಟಿಕೆಟ್‌ ನೀಡಿರುವುದು ಇದೀಗ ಚರ್ಚೆಗೆ ಗ್ರಾಸ ಒದಗಿಸಿದೆ.

ಕಾಂಗ್ರೆಸ್‌ ಪಕ್ಷ ಇದುವರೆಗೂ ಒಟ್ಟು 159 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಕೋಲಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟು ಮುಂದುವರೆದಿರುವುದು ವಿಶೇಷ.

ಇತ್ತೀಚಿಗಷ್ಟೇ ರಾಹುಲ್‌ ಗಾಂಧಿ ಅವರು ಕೋಲಾರದಲ್ಲಿ ಪಕ್ಷದ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ್ದಾರೆ. ರಾಹುಲ್‌ ಗಾಂಧಿ ಕೋಲಾರ ಭೇಟಿಗೂ ಮೊದಲೇ, ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸುವುದು ಪಕ್ಷದ ಉದ್ದೇಶವಾಗಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ.

ಈ ಕುರಿತು ಸ್ಪಷ್ಟನೆ ನೀಡಿದ್ದ ರಾಜ್ಯ ಕಾಂಗ್ರೆಸ್‌ ಘಟಕ, ರಾಹುಲ್‌ ಗಾಂಧಿ ಭೇಟಿ ನಂತರ ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಪ್ರಕಟಿಸುವುದಾಗಿ ಹೇಳಿತ್ತು. ಆದರೆ ಇಂದು ಬಿಡುಗಡೆಗೊಂಡ ಐದನೇ ಪಟ್ಟಿಯಲ್ಲೂ, ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡದಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡುವುದು, ಕಾಂಗ್ರೆಸ್‌ಗೆ ಕಗ್ಗಂಟಾಗಿ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಇದು ಪಕ್ಷದ ಚುನಾವಣಾ ರಣತಂತ್ರವೂ ಇರಬಹುದು ಎಂದು ಕೆಲವು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.

ಅಂತಿಮ ಹಂತದಲ್ಲಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಪ್ರಕಟಿಸುವುದು ಕಾಂಗ್ರೆಸ್‌ನ ಉದ್ದೇಶವಾಗಿರಬಹುದು ಎಂದು ಊಹಿಸಲಾಗಿದೆ. ಏಕೆಂದರೆ ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಈ ಕ್ಷೇತ್ರದ ಅಭ್ಯರ್ಥಿಯಾಗಲು ಬಯಸಿದ್ದು, ಹೈಕಮಾಂಡ್‌ ಇದುವರೆಗೂ ಸಿದ್ದರಾಮಯ್ಯ ಅವರ ಬೇಡಿಕೆಯನ್ನು ತಿರಸ್ಕರಿಸುತ್ತಲೇ ಬಂದಿದೆ.

ಆದರೆ ಅಂತಿಮ ಹಂತದಲ್ಲಿ ಸಿದ್ದರಾಮಯ್ಯ ಅವರನ್ನೇ ಕೋಲಾರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪ್ರಕಟಿಸಿದರೆ ಅಚ್ಚರಿಯಲ್ಲ ಎಂದು ಹೇಳುವವರಿಗೇನೂ ಕಮ್ಮಿಯಿಲ್ಲ.

ಅಂತಿಮ ಹಂತದಲ್ಲಿ ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಿ, ಈ ಮೂಲಕ ಆಡಳಿತಾರೂಢ ಬಿಜೆಪಿಗೆ ಶಾಕ್‌ ಕೊಡುವುದು ಕಾಂಗ್ರೆಸ್‌ ಇರಾದೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಕುರಿತು ಖಚಿತ ಮಾಹಿತಿ ಮಾತ್ರ ಇದುವರೆಗೂ ದೊರೆತಿಲ್ಲ.

ಆದರೆ ಕೋಲಾರ ಸಸ್ಪೆನ್ಸ್‌ ಮುಂದುವರೆಸುವುದು ಪಕ್ಷಕ್ಕೆ ಮುಳುವಾಗಬಹುದು ಎಂಬುದು ಪಕ್ಷದಲ್ಲೇ ಕೆಲವರ ಅಭಿಪ್ರಾಯವಾಗಿದೆ. ಅಭ್ಯರ್ಥಿ ಘೋಷಣೆ ವಿಳಂಬ ಕ್ಷೇತ್ರದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಲಿದೆ ಎಂಬುದು ಕೆಲವು ಕಾಂಗ್ರೆಸ್‌ ನಾಯಕರ ಅಳಲಾಗಿದೆ.

ಸಂಬಂಧಿತ ಸುದ್ದಿ

JDS Candidates 3rd List: ಜೆಡಿಎಸ್‌ ಮೂರನೇ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್‌; ಸಿಪಿಎಂ, ಆರ್‌ಪಿಐಗೆ ಬಾಹ್ಯಬೆಂಬಲ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಜಾತ್ಯಾತೀತ ಜನತಾದಳ(ಜೆಡಿಎಸ್)‌ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡಗಡೆ ಮಾಡಿದೆ. ಒಟ್ಟು 59 ಕ್ಷೇತ್ರಗಳಿಗೆ ಜೆಡಿಎಸ್‌ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಇದೇ ವೇಳೆ ಪಕ್ಷವು ಬಾಹ್ಯ ಬೆಂಬಲ ನೀಡಿರುವ ಸಿಪಿಎಂ ಮತ್ತು ಆರ್‌ಪಿಐ ಅಭ್ಯರ್ಥಿಗಳ ಪಟ್ಟಿಯನ್ನೂ ಜೆಡಿಎಸ್‌ ಬಿಡುಗಡೆ ಮಾಡಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

Whats_app_banner