ಕನ್ನಡ ಸುದ್ದಿ  /  Karnataka  /  Karnataka Election Results Sudeep Is Not Politician It Is Not Right To Blame Him For The Defeat Says Bommai Rmy

Basavaraj Bommai: ಕರ್ನಾಟಕ ಚುನಾವಣೆ ಫಲಿತಾಂಶ; ಸುದೀಪ್ ರಾಜಕಾರಣಿ ಅಲ್ಲ; ಸೋಲಿಗೆ ಅವರನ್ನ ಹೊಣೆ ಎನ್ನುವುದು ಸರಿಯಲ್ಲ‌ ಎಂದ ಬೊಮ್ಮಾಯಿ

ಕರ್ನಾಟಕದಲ್ಲಿ ಬಿಜೆಪಿಗೆ ಆದ ಹಿನ್ನಡೆಯ ಜವಾಬ್ದಾರಿಯನ್ನು ನಾನೇ ಹೊರುತ್ತೇನೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಟ ಕಿಚ್ಚ ಸುದೀಪ್ (ಫೋಟೋ-ಫೈಲ್)
ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಟ ಕಿಚ್ಚ ಸುದೀಪ್ (ಫೋಟೋ-ಫೈಲ್)

ಬೆಂಗಳೂರು: ಜನರ ತೀರ್ಪನ್ನು ಗೌರವಯುತವಾಗಿ ಒಪ್ಪಿಕೊಂಡಿದ್ದೇವೆ. ಪಕ್ಷಕ್ಕೆ ಆದ ಹಿನ್ನೆಡೆಯ ಜವಬ್ದಾರಿ ನಾನೇ ಹೊರುತ್ತೇನೆ. ಈ ಚುನಾವಣೆ ಸೋಲಿಗೆ ನಟ ಸುದೀಪ್ ರಾಜಕಾರಣಿ ಅಲ್ಲ. ಹೀಗಾಗಿ ಅವರನ್ನು ಹೊಣೆ ಎನ್ನುವುದು ಸರಿಯಲ್ಲ‌ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ನಿನ್ನೆ (ಮೇ 13, ಶನಿವಾರ) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡದೇ ಜನರ ಕಲ್ಯಾಣ ಆಗಲಿ. ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ. ವಿರೋಧ ಪಕ್ಷದಲ್ಲಿದ್ದು ಸಮರ್ಪಕವಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಜನರ ತೀರ್ಪನ್ನು ಗೌರವಯುತವಾಗಿ ಒಪ್ಪಿಕೊಂಡಿದ್ದೇವೆ. ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ. ಕಳೆದ ಬಾರಿ ನನಗೆ 104 ಸೀಟು ಬಂದಿತ್ತು. ಈ ಬಾರಿ ಪರ್ಸೆಂಟೇಜ್ ಜಾಸ್ತಿ ಬಂದರು, ಕಡಿಮೆ ಸೀಟು ಬಂದಿವೆ. ಏನೇ ಆಗಲಿ ಸೋಲು ಸೋಲೇ. ನಾವು ಇದರ ಬಗ್ಗೆ ಆತ್ಮವಲೋಕನ ಮಾಡಿ, ಎಲ್ಲಿ ತಪ್ಪು ಆಗಿದೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಮ್ಮದು ಒಂದು ರಾಷ್ಟ್ರೀಯ ಪಕ್ಷ. ನಾವು ಕೇವಲ ಚುನಾವಣಗೆ ಮಾತ್ರ ಕೆಲಸ ಮಾಡಲ್ಲ. ರಾಷ್ಟ್ರದ ನಿರ್ಮಾಣಕ್ಕೆ ಕೆಲಸ ಮಾಡುತ್ತೇವೆ. ಇನ್ನೇನು ಕೇವಲ 8 ರಿಂದ 10 ತಿಂಗಳಲ್ಲಿ ಲೋಕಸಭೆ ಚುನಾವಣೆ ಬರುತ್ತಿದೆ. ಆ ಚುನಾವಣೆಗೆ ಪಕ್ಷ ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ. ಈ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದು ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.

ನಾವು ಹಿಂದೆ ಎಷ್ಟೋ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ನೋಡಿದ್ದೇವೆ. ಸೋಲಿಗೆ ಹಲವಾರು ರೀತಿಯ ಕಾರಣಗಳು ಇವೆ. ಅವುಗಳನ್ನು ಎಲ್ಲವನ್ನೂ ಕುಳಿತು ಚರ್ಚೆ ಮಾಡುತ್ತೇವೆ. ಏನು ವ್ಯತ್ಯಾಸ ಆಗಿದೆ, ಎಲ್ಲಿ ಏನಾಗಿದೆ ಎಂದು ಚರ್ಚಿಸಿ, ಆಗಿದ್ದ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ವಿವರಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಗೆ ನಡೆದ ಮತದಾನ ನಡೆದ ಬಳಿಕ ಪ್ರಕಟವಾಗಿದ್ದ ಮತಗಟ್ಟೆ ಸಮೀಕ್ಷೆಯಲ್ಲಿ ಇಂಡಿಯಾ ಟುಡೇ -ಆಕ್ಸಿಸ್‌ ಮೈ ಇಂಡಿಯಾ ಪ್ರಕಟಿಸಿದ ಸಮೀಕ್ಷೆ ಪ್ರಕಾರ ಬಿಜೆಪಿಗೆ 62-80, ಕಾಂಗ್ರೆಸ್‌ 122-140, ಜೆಡಿಎಸ್‌ಗೆ 20-25 ಮತ್ತು ಇತರೆ 0-3 ಬರಬಹುದು ಎಂದು ಅಂದಾಜಿಸಲಾಗಿತ್ತು.

ಬಹುತೇಕ ಸಮೀಕ್ಷೆಗಳ ಪೈಕಿ ಈವೊಂದು ಸಮೀಕ್ಷೆಯು ತುಂಬಾ ಅತ್ತಿರದ ಭವಿಷ್ಯ ನುಡಿದಿತ್ತು ಎಂಬುದು ನಿನ್ನೆ (ಮೇ 13, ಶನಿವಾರ) ಫಲಿತಾಂಶದಿಂದ ಗೊತ್ತಾಗಿದೆ.

ರಾಜ್ಯದ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 65 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದೆ. ಕಾಂಗ್ರೆಸ್‌ 136 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಜೆಡಿಎಸ್‌ 19 ಸ್ಥಾನಗಳನ್ನು ಗೆದ್ದು ಕೊಂಡಿದೆ. ಇತರರು ನಾಲ್ಕು ಸ್ಥಾನಗಳಲ್ಲಿ ವಿಜಯಮಾಲೆ ಧರಿಸಿದ್ದಾರೆ.

ಇದನ್ನು ಗಮನಿಸಿದಾಗ ಇಂಡಿಯಾ ಟುಡೇ- ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಫಲಿತಾಂಶಕ್ಕೆ ಹತ್ತಿರ ಇರುವುದು ಸ್ಪಷ್ಟವಾಗಿದೆ. ಉಳಿದಂತೆ ಯಾವುದೇ ಸಮೀಕ್ಷೆಯೂ ನಿಖರವಾಗಿ ಹೇಳಿಲ್ಲ. ರಾಜ್ಯ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆದಿತ್ತು.