ಕನ್ನಡ ಸುದ್ದಿ  /  ಕರ್ನಾಟಕ  /  Dk Shivakumar: ಕರ್ನಾಟಕ ಚುನಾವಣೆ; ಚುನಾವಣೋತ್ತರ ಕೂಡ ಜೆಡಿಎಸ್‌ನೊಂದಿಗೆ ಕಾಂಗ್ರೆಸ್ ಮೈತ್ರಿ ಇಲ್ಲ; ಡಿಕೆ ಶಿವಕುಮಾರ್ ಸ್ಪಷ್ಟನೆ

DK Shivakumar: ಕರ್ನಾಟಕ ಚುನಾವಣೆ; ಚುನಾವಣೋತ್ತರ ಕೂಡ ಜೆಡಿಎಸ್‌ನೊಂದಿಗೆ ಕಾಂಗ್ರೆಸ್ ಮೈತ್ರಿ ಇಲ್ಲ; ಡಿಕೆ ಶಿವಕುಮಾರ್ ಸ್ಪಷ್ಟನೆ

2018ರ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚಿಸಿದ್ದವು. ಎಚ್ ಜಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆಗೆ ಪೂಜೆ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆಗೆ ಪೂಜೆ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಬೆಂಗಳೂರು: ಹೈವೋಲ್ಟೇಜ್ ಚುನಾವಣಾ ಕಣವಾಗಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಬಹುತೇಕ ಮುಕ್ತಾಯವಾಗುತ್ತಿದ್ದು, ಇನ್ನ ಎಲ್ಲರ ಚಿತ್ತ ಮೇ 13 ರ ಫಲಿತಾಂಶದತ್ತ ನೆಟ್ಟಿದೆ.

ಭಾರತೀಯ ಜನತಾ ಪಾರ್ಟಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ರಾಜಕೀಯ ಪಕ್ಷಗಳ ಅಬ್ಬರದ ಪ್ರಚಾರ ನಡೆಸಿದ್ದವು. ಕೊನೆಯ ಹಂತದವರೆಗೆ ಪ್ರಯತ್ನ ನಡೆಸಿ ಮತಯಾಚನೆ ಮಾಡಿದ್ದವು.

ಮೇ 13 (ಶನಿವಾರ)ರ ಫಲಿತಾಂಶದ ಬಳಿಕ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬುದರ ಚರ್ಚೆ ನಡೆಯುತ್ತಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿದ್ದು, 2023ರ ವಿಧಾನಸಭೆ ಚುನಾವಣೆಯ ನಂತರವೂ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವೇ ಸರ್ಕಾರ ರಚಿಸುತ್ತೇವೆ

ಇವತ್ತು (ಮೇ 10, ಬುಧವಾರ) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಮೈತ್ರಿಯನ್ನು ತಳ್ಳಿಹಾಕಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ. ನಾವೇ ಸರ್ಕಾರ ರಚಿಸುತ್ತೇವೆ ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಯನ್ನು ದೂರವಿಟ್ಟು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದವು. ಆದರೆ ಕೆಲವು ಶಾಸಕರು ಬಂಡಾಯ ಎದಿದ್ದ ಮೈತ್ರಿ ಪಕ್ಷಗಳನ್ನು ತೊರೆಯುವ ಮೂಲಕ ಸರ್ಕಾರವನ್ನು ಪತನಗೊಳಿಸಿದ್ದರು. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 104, ಬಿಜೆಪಿ 78, ಜೆಡಿಎಸ್ 37 ಸ್ಥಾನಗಳನ್ನು ಪಡೆದಿದ್ದವು.

ಈ ಬಾರಿ ಕಾಂಗ್ರೆಸ್ ಹಲವು ವಿಚಾರಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸಿದೆ. ಬೆಲೆ ಏರಿಕೆ, ಭ್ರಷ್ಟಾಚಾರ, ಆಡಳಿತ ವೈಫಲ್ಯ, 40 ಪರ್ಸೆಂಟ್ ಕಮಿಷನ್‌, ಪಿಎಸ್‌ಐ ಹಗರಣ, ಅಡುಗೆ ಅನಿಲ ಬೆಲೆ ಏರಿಕೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸಿದ್ದಾರೆ. ಅಲ್ಲದೆ, ನಮ್ಮ ಗ್ಯಾಸ್ ಸಿಲಿಂಡರ್‌ಗಳನ್ನು ನೋಡಿ ಮತದಾನ ಎಂದು ನಿನ್ನೆಯಷ್ಟೇ ಡಿಕೆ ಶಿವಕುಮಾರ್ ಹೇಳಿದ್ದರು.

ಕೆಪಿಸಿಸಿ ಕಚೇರಿಯಲ್ಲಿ ಸಿಲಿಂಗಡರ್‌ಗೆ ಪೂಜೆ ಮಾಡಿದ್ದ ಅವರು, ಕನ್ನಡಿಗರೇ ನೀವು ಮತದಾನಕ್ಕೆ ಹೋಗುವ ಮೊದಲು, ಈ ಪೂಜೆಯನ್ನು ಮಾಡಲು ಮರೆಯದಿರಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.

ಎಲ್ಲಾ ಬೂತ್ ಬಳಿ ಖಾಲಿ ಅಡುಗೆ ಅನಿಲ ಸಿಲಿಂಡರ್ ಇಟ್ಟು ಪೂಜೆ ಮಾಡಿ ಮತದಾನ ಮಾಡುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದ್ದೇನೆ. ಪ್ರಧಾನಿ ಅವರ ಮಾರ್ಗದರ್ಶನದಂತೆ ಈ ಸೂಚನೆ ನೀಡಿದ್ದೇನೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆರವು ನೀಡಲು ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆ ಘೋಷಿಸಿದೆ. ಇಂದು ರಾಜ್ಯದಲ್ಲಿ ಬದಲಾವಣೆ ಮಾಡಿಕೊಳ್ಳುವ ದಿನ. ನಮ್ಮ ಭವಿಷ್ಯ ನಾವೇ ಬರೆದುಕೊಳ್ಳುವ ದಿನ. ನಮ್ಮ ಗ್ಯಾರಂಟಿ ಯೋಜನೆಗಳಿಗೆ ಮುದ್ರೆ ಒತ್ತುವ ದಿನ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನನ್ನ ಪುತ್ರ ಹಾಗೂ ಪುತ್ರಿ ಇಬ್ಬರೂ ಈ ಬಾರಿ ಮೊದಲ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಹೊಸ ಮತದಾರರಿಗೆ ಮತದಾನದ ಉಮ್ಮಸ್ಸು ಇರುತ್ತದೆ. ರಾಜ್ಯದ ಎಲ್ಲಾ ಯುವ ಮತದಾರರಿಗೆ ಶುಭ ಕೋರಿ, ರಾಜ್ಯಕ್ಕೆ ದೊಡ್ಡ ಬದಲಾವಣೆ ತರುವ ಜವಾಬ್ದಾರಿ ಇದ್ದು ಅದನ್ನು ಸಮರ್ಥವಾಗಿ ನಿಭಾಯಿಸುವಂತೆ ಸಲಹೆ ನೀಡುತ್ತೇನೆ.

ಯುವ ಮತದಾರರು ಪ್ರಜ್ಞಾವಂತರಾಗಿದ್ದು, ಈ ದುರಾಡಳಿತವನ್ನು ಕೊನೆಗಾಣಿಸುತ್ತಾರೆ ಎಂದು ಭಾವಿಸಿದ್ದೇನೆ. ಈ ಯುವಕರಿಗೆ ಮತದಾನದ ಹಕ್ಕು ನೀಡಿದ್ದು ರಾಜೀವ್ ಗಾಂಧಿ ಅವರು. ಈ ಯುವ ಮತದಾರರು ಪ್ರಜಾಪ್ರಭುತ್ವದ ಆಚರಣೆ ಮಾಡಲಿ.

ಸಚಿವ ಅಶೋಕ್ ನಿಮ್ಮ ವಿರುದ್ಧ ಸ್ಪರ್ಧೆ ಮಾಡಿದ್ದು, ಎಷ್ಟು ಅಂತರದಿಂದ ಗೆಲುವು ಸಾಧಿಸುತ್ತೀರಿ ಎಂದು ಕೇಳಿದಾಗ, ಅಶೋಕ್ , ಮುಖ್ಯಮಂತ್ರಿ ಬೊಮ್ಮಾಯಿ ಅವರು ಇಲ್ಲಿ ಬಂದು ಪ್ರಚಾರ ಮಾಡಿದ್ದಾರೆ. ಇದು ಗುಪ್ತ ಮತದಾನ, ಯಾರು ಗೆಲ್ಲುತ್ತಾರೆ ಎಂದು 13ರಂದು ನೋಡೋಣ ಎಂದಿದ್ದಾರೆ.

IPL_Entry_Point