Karnataka Election: ಮತಯಂತ್ರ ಸಾಗಾಟ ಎಂದು ಭಾವಿಸಿ ಇವಿಎಂ, ವಿವಿಪ್ಯಾಟ್ ಒಡೆದು ಪುಡಿ ಪುಡಿ ಮಾಡಿದ ವಿಜಯಪುರದ ಮಸಬಿನಾಳ ಗ್ರಾಮಸ್ಥರು
ಕನ್ನಡ ಸುದ್ದಿ  /  ಕರ್ನಾಟಕ  /  Karnataka Election: ಮತಯಂತ್ರ ಸಾಗಾಟ ಎಂದು ಭಾವಿಸಿ ಇವಿಎಂ, ವಿವಿಪ್ಯಾಟ್ ಒಡೆದು ಪುಡಿ ಪುಡಿ ಮಾಡಿದ ವಿಜಯಪುರದ ಮಸಬಿನಾಳ ಗ್ರಾಮಸ್ಥರು

Karnataka Election: ಮತಯಂತ್ರ ಸಾಗಾಟ ಎಂದು ಭಾವಿಸಿ ಇವಿಎಂ, ವಿವಿಪ್ಯಾಟ್ ಒಡೆದು ಪುಡಿ ಪುಡಿ ಮಾಡಿದ ವಿಜಯಪುರದ ಮಸಬಿನಾಳ ಗ್ರಾಮಸ್ಥರು

ಮತದಾನ ಸ್ಥಗಿತ ಮಾಡಿದ್ದಾರೆ, ಮತಯಂತ್ರಗಳನ್ನು ಬೇರೆ ಕಡೆಗೆ ಸಾಗಿಸುತ್ತಿದ್ದಾರೆ ಎಂದು ಭಾವಿಸಿ ಮತಯಂತ್ರಗಳನ್ನು ಒಡೆದು ಪುಡಿ ಪುಡಿ ಮಾಡಿರುವ ಘಟನೆ ವಿಜಯಪುರದ ಮಸಬಿನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೆಲವರು ಅಧಿಕಾರಿಗಳ ಕಾರನ್ನು ಪಲ್ಟಿ ಹೊಡಿಸಿದ್ದಾರೆ.

ಮತ ಸ್ಥಗಿತ ಮಾಡಿದ್ದಾರೆ, ಮತಯಂತ್ರಗಳನ್ನು ಬೇರೆ ಕಡೆಗೆ ಸಾಗಿಸುತ್ತಿದ್ದಾರೆ ಎಂದು ಭಾವಿಸಿ ಹೆಚ್ಚುವರಿ ಮತಯಂತ್ರಗಳನ್ನು ಒಡೆದು ಪುಡಿ ಪುಡಿ ಮಾಡಿರುವ ಘಟನೆ ವಿಜಯಪುರದ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.
ಮತ ಸ್ಥಗಿತ ಮಾಡಿದ್ದಾರೆ, ಮತಯಂತ್ರಗಳನ್ನು ಬೇರೆ ಕಡೆಗೆ ಸಾಗಿಸುತ್ತಿದ್ದಾರೆ ಎಂದು ಭಾವಿಸಿ ಹೆಚ್ಚುವರಿ ಮತಯಂತ್ರಗಳನ್ನು ಒಡೆದು ಪುಡಿ ಪುಡಿ ಮಾಡಿರುವ ಘಟನೆ ವಿಜಯಪುರದ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.

ವಿಜಯಪುರ: ರಾಜ್ಯ ವಿಧಾನಸಭೆ ಚುನವಣೆ (Karnataka Election) ಬಹುತೇಕ ಶಾಂತಿಯುತವಾಗಿ ನಡೆಯುತ್ತಿದ್ದು, ಅಲ್ಲಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗಿವೆ. ಕಾಯ್ದಿರಿಸಿದ ಮತಯಂತ್ರಗಳನ್ನು ವಾಪಾಸ್ಸು ಒಯ್ಯುವ ಸಂದರ್ಭದಲ್ಲಿ ಇವಿಎಂ ಮಷಿನ್ ಸಾಗಾಟ ಮಾಡಲಾಗುತ್ತದೆ ಎಂದು ತಪ್ಪಾಗಿ ಭಾವಿಸಿದ ಗ್ರಾಮಸ್ಥರು ಕಾಯ್ದಿಟ್ಟ ಮತಯಂತ್ರಗಳನ್ನು ಒಡೆದು ಪುಡಿ ಪುಡಿ ಮಾಡಿರುವ ಘಟನೆ ಬಸವನಬಾಗೇವಾಡಿ ಕ್ಷೇತ್ರದ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.

ಘಟನೆಯಿಂದ ಮಸಬಿನಾಳ ಗ್ರಾಮದಲ್ಲಿ ಕೆಲಕಾಲ ಮತದಾನ ಸ್ಥಗಿತಗೊಂಡಿದ್ದು, ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹೆಚ್ಚುವರಿ ಮತಯಂತ್ರಗಳನ್ನು ಮಸಬಿನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ.

ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿ, ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ, ವಿವಿಪ್ಯಾಟ್ ‌ಮಷಿನ್‌ಗಳು ವಾಪಸ್ ತರುವುದನ್ನು ಗಮನಿಸಿದ ಗ್ರಾಮದ ಕೆಲವರು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ.

ಆದರೆ ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ, ತಪ್ಪು ಕಲ್ಪನೆ ಮೂಡಿಸಿಕೊಂಡ ಗ್ರಾಮಸ್ಥರು ಸಿಪಿಐ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯಪುರ ಮಾತ್ರವಲ್ಲದೆ, ರಾಜ್ಯ ರಾಜಧಾನಿ ಬೆಂಗಳೂರು, ಕಲಬುರಗಿ ಹಾಗೂ ಚಿಕ್ಕಮಗಳೂರಿನಲ್ಲಿ ಗಲಾಟೆಗಳು ವರದಿಯಾಗಿವೆ.

ಬೆಂಗಳೂರಿನ ಆರ್ ಟಿ ನಗರದಲ್ಲಿ ತಮ್ಮ ಪಕ್ಷಕ್ಕೆ ಮತ ನೀಡುವಂತೆ ಜೆಡಿಎಸ್ ಕಾರ್ಯಕರ್ತರು ಮತದಾರರನ್ನು ಮನವೊಲಿಸುತ್ತಿದ್ದ ಆರೋಪ ಕೇಳಿಬಂದಿದ್ದು, ಇದೇ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಭೈರತಿ ಬಸವರಾಜ್ ಕೂಡ ಮತಗಟ್ಟೆ ಬಳಿ ನಿಯಮ ಉಲ್ಲಂಘಿಸಿದ್ದೀರಿ ಅಂತ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಗರಂ ಆಗಿದ್ದಾರೆ ಎಂದು ವರದಿಯಾಗಿದೆ.

ಚಿಕ್ಕಮಗಳೂರಿನಲ್ಲೂ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಧರಿಸಿ ಬಂದ ಹಿನ್ನೆಲೆಯಲ್ಲಿ ಕೈ ಕಾರ್ಯಕರ್ತರು ಇದನ್ನು ಪ್ರಶ್ನಿಸಿದ್ದಾಗ ಎರಡು ಗುಂಡಿನ ನಡುವೆ ಗಲಾಡೆ ನಡೆದಿದೆ. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಇತ್ತ ಕೋಟೆನಾಡು ಚಿತ್ರದುರ್ಗದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿರುವ ವರದಿಯಾಗಿದೆ. ಕಾಂಗ್ರೆಸ್‌ಗೆ ಮತಹಾಕದಂತೆ ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲೂ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಉಮೇಶ್ ಗೌಡ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ಉಮೇಶ್‌ ತಲೆಗೆ ಕಲ್ಲೇಟು ಬಿದ್ದ ಕಾರಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Whats_app_banner