Karnataka Election: ಐವರು ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ವಕ್ಫ್ ಬೋರ್ಡ್
ಕನ್ನಡ ಸುದ್ದಿ  /  ಕರ್ನಾಟಕ  /  Karnataka Election: ಐವರು ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ವಕ್ಫ್ ಬೋರ್ಡ್

Karnataka Election: ಐವರು ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ವಕ್ಫ್ ಬೋರ್ಡ್

Waqf Board Karnataka: ಮುಸ್ಲಿಂ ಶಾಸಕರಿಗೆ ಮಂತ್ರಿಗಿರಿ ಹಾಗೂ ಡಿಸಿಎಂ ಸ್ಥಾನ ನೀಡಬೇಕೆಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಬೇಡಿಕೆ ಮುಂದಿಟ್ಟಿದ್ದಾರೆ.

ಡಿಕೆ ಶಿವಕುಮಾರ್‌, ಸಿದ್ದರಾಮಯ್ಯರಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲದ ನಡುವೆಯೇ ಸರಕಾರದಲ್ಲಿ ವಿವಿಧ ಹುದ್ದೆಗಳಿಗೆ ಬೇಡಿಕೆಗಳೂ ಕೇಳಿಬರುತ್ತಿದೆ.
ಡಿಕೆ ಶಿವಕುಮಾರ್‌, ಸಿದ್ದರಾಮಯ್ಯರಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲದ ನಡುವೆಯೇ ಸರಕಾರದಲ್ಲಿ ವಿವಿಧ ಹುದ್ದೆಗಳಿಗೆ ಬೇಡಿಕೆಗಳೂ ಕೇಳಿಬರುತ್ತಿದೆ. (PTI)

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಬಹುಮತ ಬಂದ ಹಿನ್ನೆಲೆ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಮುಸ್ಲಿಂ ಶಾಸಕರಿಗೆ ಮಂತ್ರಿಗಿರಿ ಹಾಗೂ ಡಿಸಿಎಂ ಸ್ಥಾನ ನೀಡಬೇಕೆಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಬೇಡಿಕೆ ಮುಂದಿಟ್ಟಿದ್ದಾರೆ.

224 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಮುಸ್ಲಿಮರು ಎಲೆಕ್ಷನ್ ಗೆ ನಿಂತಿದ್ದರು. ಅದರಲ್ಲಿ 9 ಜನರು ಗೆದ್ದಿದ್ದಾರೆ. ಮಾತ್ರವಲ್ಲದೆ, ರಾಜ್ಯದಲ್ಲಿ 73 ಶಾಸಕರು ಗೆಲ್ಲಲು ಮುಸ್ಲಿಮರು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಹೇಳಿದ ಶಾಫೀ ಸಅದಿ, ನಾವು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಲು ಎಲ್ಲಾ ಮಸೀದಿಗಳಲ್ಲಿ ಅಭಿಯಾನ, ಜಾಗೃತಿ ಮಾಡಿದ್ದೆವು ಎಂದು ತಿಳಿಸಿದರು.

ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಸರ್ಕಾರದಲ್ಲಿ ಮುಸ್ಲಿಂ ಸಮುದಾಯದಿಂದ ಆಯ್ಕೆಯಾದ ಐದು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಹಾಗಾಗಿ ಈ ಬಾರಿಯ ಸರ್ಕಾರದಲ್ಲೂ ಐವರಿಗೆ ಸಚಿವ ಸ್ಥಾನ ಮತ್ತು ಒಂದು ಡಿಸಿಎಂ ಹುದ್ದೆ ನೀಡಬೇಕು. ನಾವು ಮುಖ್ಯಮಂತ್ರಿ ಸ್ಥಾನ ಕೇಳುತ್ತಿಲ್ಲ, ಕರ್ನಾಟಕ ಇತಿಹಾಸದಲ್ಲಿ ಮುಸ್ಲಿಂ ಮುಖ್ಯಮಂತ್ರಿ ಆಗಿಲ್ಲ ಎಂದರು.

ನಮ್ಮಲ್ಲಿ ಒಂಬತ್ತು ಜನ ಮುಸ್ಲಿಂ ಶಾಸಕರಿದ್ದಾರೆ ಅದರಲ್ಲಿ ಯಾರು ಸೂಕ್ತ ಎಂದು ನೋಡಿಕೊಂಡು ಕಾಂಗ್ರೆಸ್ ಪಾರ್ಟಿ ಡಿಸಿಎಂ ಸ್ಥಾನ ನೀಡಲಿ. ಒಂಬತ್ತು ಜನರಲ್ಲಿ ಯಾರಿಗಾದರೂ ಕೊಡಲಿ ಎಂದು ಆಗ್ರಹ ಮಾಡುತ್ತೇವೆ. ಹಳೆ ಮೈಸೂರು ಭಾಗದಲ್ಲಿ ಎಲ್ಲಾ ಮುಸ್ಲಿಂ ಮುಖಂಡರು ಜೆಡಿಎಸ್ ಪಕ್ಷಕ್ಕೆ ಹೋಗಿದ್ದರು. ಆದರೂ ಮುಸ್ಲಿಮರು ಶೇ 88 ರಷ್ಟು ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ವೋಟ್ ಹಾಕಿದ್ದಾರೆ ಎಂದರು. ಹಿಜಾಬ್ ಮತ್ತು ಸಾಕಷ್ಟು ವಿಚಾರದಲ್ಲಿ ಮುಸ್ಲಿಮರು ಭಯಬೀತರಾಗಿದ್ದರು. ಆ ಹಿನ್ನೆಲೆಯಲ್ಲಿ ಎಲ್ಲಾ ಮುಸ್ಲಿಮರು ಕಾಂಗ್ರೆಸ್ ಪಾರ್ಟಿಗೆ ಮತ ನೀಡಿ ಗೆಲ್ಲಿಸಿದ್ದಾರೆ ಎಂದರು. (ವರದಿ: ಎಚ್​ ಮಾರುತಿ)

ಕಾಂಗ್ರೆಸ್​ ಶಾಸಕಾಂಗ ಸಭೆಗೂ ಮುನ್ನ ಸಿದ್ದರಾಮಯ್ಯ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಬಣದ ಬೆಂಬಲಿಗರು ರಹಸ್ಯ ಸಭೆ ನಡೆಸಿದ್ದು, ಸಿದ್ದರಾಮಯ್ಯಗೆ ಸಿಎಂ ಹುದ್ದೆ ಸಿಗುವಂತೆ ಮಾಡಲು ರಣತಂತ್ರ ರೂಪಿಸಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಶಾಸಕ ಭೈರತಿ ಸುರೇಶ್ ಅಪಾರ್ಟ್‌ಮೆಂಟ್‌ನಲ್ಲಿ ರಹಸ್ಯ ಮೀಟಿಂಗ್ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವರಾದ ಎಂಬಿ ಪಾಟೀಲ್, ದಿನೇಶ್ ಗುಂಡೂರಾವ್, ಕೆಜೆ ಜಾರ್ಜ್, ಭೈರತಿ ಸುರೇಶ್, ಜಮೀರ್ ಅಹ್ಮದ್ ಸೇರಿ ಹಲವರು ನಾಯಕರು ಭಾಗಿಯಾಗಿದ್ದರು. ತಮ್ಮ ನಾಯಕ ಸಿದ್ದರಾಮಯ್ಯ ಅವರನ್ನೇ ಮುಂದಿನ ಮುಖ್ಯಮಂತ್ರಿ ಮಾಡುವಂತೆ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಪೂರ್ತಿ ವರದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

Whats_app_banner