ಕನ್ನಡ ಸುದ್ದಿ  /  ಕರ್ನಾಟಕ  /  Pm Narendra Modi: ಕರ್ನಾಟಕ ಚುನಾವಣೆ; ಏಪ್ರಿಲ್ 28 ರಿಂದ ಮೇ 7ರ ವರೆಗೆ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಚುನಾವಣಾ ಪ್ರಚಾರ

PM Narendra Modi: ಕರ್ನಾಟಕ ಚುನಾವಣೆ; ಏಪ್ರಿಲ್ 28 ರಿಂದ ಮೇ 7ರ ವರೆಗೆ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಚುನಾವಣಾ ಪ್ರಚಾರ

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಿಂದ ಮೇ 7ರ ವರೆಗೆ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರ ಪ್ರಚಾರ ಮಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (PTI)
ಪ್ರಧಾನಿ ನರೇಂದ್ರ ಮೋದಿ (PTI)

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Assembly Elections) ನಾಮಪತ್ರ ಸಲ್ಲಿಸಿಕೆ, ಉಮೇದುವಾರಿಕೆ ವಾಪಸ್ ಪಡೆಯುವ ಎಲ್ಲಾ ಪ್ರಕ್ರಿಯೆಗಳು ಮುಗಿದಿವೆ. ರಣಕಣದಲ್ಲಿರುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಸಿಕ್ಕಿದ್ದು, ಇನ್ನೇನಿದ್ದರೂ ಭರ್ಜರಿ ಪ್ರಚಾರ, ಮೇ 10 ಮತದಾನ ಹಾಗೂ ಮೇ 13 ಫಲಿತಾಂಶ ಮಾತ್ರ ಬಾಕಿ ಉಳಿದಿದೆ.

ಚುನಾವಣೆಗೆ ದಿನಾಂಕ ಘೋಷಣೆಗೂ ಮೊದಲೇ ರಾಜ್ಯಕ್ಕೆ ಆಗಮಿಸಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ, ಶಿವಮೊಗ್ಗ ಏರ್ಪೋರ್ಟ್ ಸೇರಿದಂತೆ ಮಹತ್ವದ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದ್ದ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಮತ್ತೆ ಚುನಾವಣಾ ಪ್ರಚಾರದ (Election campaign) ಅಖಾಡಕ್ಕೆ ಇಳಿಯುತ್ತಿದ್ದಾರೆ.

ಪ್ರಧಾನಿ ಮೋದಿ ಅವರು ಏಪ್ರಿಲ್ 28 ರಿಂದ ಮೇ 7ರ ವರೆಗೆ ಅಂದರೆ 10 ದಿನಗಳ ಅಂತರದಲ್ಲಿ ಹತ್ತು ಹಲವು ಪ್ರಚಾರ, ರೋಡ್ ಶೋ, ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ (BJP Candidates) ಪರ ಮತ ಬೇಟೆಯಾಡಲಿದ್ದಾರೆ.

ಚುನಾವಣೆಯ ಪ್ರಚಾರಕ್ಕೆ ವೇಗವನ್ನು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ 6 ದಿನಗಳಲ್ಲಿ ಸುಮಾರು 15 ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕವನ್ನು ಬಿಜೆಪಿಯ ದಕ್ಷಿಣದ ಹೆಬ್ಬಾಗಿಲು ಎಂದು ಬಣ್ಣಿಸಿರುವ ಕೇಸರಿ ನಾಯಕರು, ಪಕ್ಷವು ಯಾವುದೇ ಕ್ಷೇತ್ರವನ್ನು ಬಿಡದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪಕ್ಷದ ಹಿರಿಯ ನಾಯಕರು ರಾಜ್ಯದಾದ್ಯಂತ ಆಕ್ರಮಣಕಾರಿಯಾಗಿ ಪ್ರಚಾರ ಮಾಡುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಚುನಾವಣೆಯಲ್ಲಿ ಆರು ದಿನಗಳಲ್ಲಿ 12 ರಿಂದ 15 ಸಾರ್ವಜನಿಕ ಸಭೆಗಳು/ರಾಲಿಗಳು ಹಾಗೂ ರೋಡ್ ಶೋಗಳನ್ನು ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28, ಏಪ್ರಿಲ್ 29, ಮೇ 3, ಮೇ 4, ಮೇ 6 ಹಾಗೂ ಮೇ 7 ರಂದು ಪ್ರಚಾರ ನಡೆಸಲಿದ್ದಾರೆ. ಈ ಅವಧಿಯಲ್ಲಿ ನಮೋ 12 ರಿಂದ 15 ರಾಲಿಗಳು / ಸಾರ್ವಜನಿಕ ಸಭೆಗಳು ಹಾಗೂ ರೋಡ್ ಶೋಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ರಣತಂತ್ರಗಳನ್ನು ರೂಪಿಸುತ್ತಿದೆ. ಇದಕ್ಕಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಈಗಾಗಲೇ ತಮ್ಮ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಸುಮಾರು ಒಂದು ವಾರದ ನಂತರ ಕೋವಿಡ್‌ನಿಂದ ಚೇತರಿಸಿಕೊಂಡಿರುವ ರಾಜನಾಥ್ ಸಿಂಗ್ ಕೂಡ ಕ್ಯಾಂಪೇನ್ ತಂಡದಲ್ಲಿ ಸೇರಿಕೊಂಡಿದ್ದಾರೆ.

ಪ್ರಧಾನಿ ಆಗಮದಿಂದ ಬಿಜೆಪಿಯ ಪರವಾಗಿ ವಾತಾವರಣವನ್ನು ಸೃಷ್ಟಿಯಾಗಲಿದೆ. ಭಾರತೀಯ ಜನತಾ ಪಕ್ಷವು ಮೋದಿಯವರ ಕಾರ್ಯಕ್ರಮದ ಬಗ್ಗೆ ಉತ್ಸುಕವಾಗಿದೆ ಅಂತಲೂ ಹೇಳಲಾಗಿದೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಏಕೈಕ ರಾಜ್ಯ ಕರ್ನಾಟಕ. ಹೀಗಾಗಿ ಈ ರಾಜ್ಯವನ್ನು ಉಳಿಸಿಕೊಳ್ಳಲು ಇಡೀ ದೆಹಲಿ ಬಿಜೆಪಿ ನಾಯಕರು ಇಲ್ಲಿ ಅಬ್ಬರ ಪ್ರಚಾರ ಮಾಡಿ ಮತಯಾಚನೆ ಮಾಡುತ್ತಿದ್ದಾರೆ.

ಕರ್ನಾಟಕ ಚುನಾವಣೆಯನ್ನು 2024 ರ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದು ಕೇಸರಿ ನಾಯಕರು ಪರಿಗಣಿಸಿದಂತಿದೆ. ಆದ್ದರಿಂದಲೇ ಬಿಜೆಪಿ ಇತರ ರಾಜ್ಯಗಳಿಗಿಂತ ಕರ್ನಾಟಕದ ಮೇಲೆ ಹೆಚ್ಚಿನ ಗಮನವನ್ನು ತೋರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

IPL_Entry_Point