ಕನ್ನಡ ಸುದ್ದಿ  /  ಕರ್ನಾಟಕ  /  Karnataka Elections: ಮುಂದುವರೆದ ವಲಸೆ, ರಘು ಆಚಾರ್, ದೊಡ್ಡಪ್ಪ ಗೌಡ ಪಾಟೀಲ್, ಗುರುಲಿಂಗಪ್ಪ ಗೌಡ, ಗುರು ಪಾಟೀಲ್ ಜೆಡಿಎಸ್‌ಗೆ ಸೇರ್ಪಡೆ

Karnataka Elections: ಮುಂದುವರೆದ ವಲಸೆ, ರಘು ಆಚಾರ್, ದೊಡ್ಡಪ್ಪ ಗೌಡ ಪಾಟೀಲ್, ಗುರುಲಿಂಗಪ್ಪ ಗೌಡ, ಗುರು ಪಾಟೀಲ್ ಜೆಡಿಎಸ್‌ಗೆ ಸೇರ್ಪಡೆ

ಚಿತ್ರದುರ್ಗದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, ಗುರು ಪಾಟೀಲ್, ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅನೇಕ ಪ್ರಮುಖ ನಾಯಕರು ಜೆಡಿಎಸ್‌ ಸೇರಿದ್ದಾರೆ.

Karnataka Elections: ಮುಂದುವರೆದ ವಲಸೆ, ರಘು ಆಚಾರ್, ದೊಡ್ಡಪ್ಪ ಗೌಡ ಪಾಟೀಲ್, ಗುರುಲಿಂಗಪ್ಪ ಗೌಡ, ಗುರು ಪಾಟೀಲ್ ಜೆಡಿಎಸ್‌ಗೆ ಸೇರ್ಪಡೆ
Karnataka Elections: ಮುಂದುವರೆದ ವಲಸೆ, ರಘು ಆಚಾರ್, ದೊಡ್ಡಪ್ಪ ಗೌಡ ಪಾಟೀಲ್, ಗುರುಲಿಂಗಪ್ಪ ಗೌಡ, ಗುರು ಪಾಟೀಲ್ ಜೆಡಿಎಸ್‌ಗೆ ಸೇರ್ಪಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ ಹೊಸ್ತಿಲಲ್ಲಿ ರಾಜಕೀಯ ಪಕ್ಷಗಳ ನಾಯಕರ ಪಕ್ಷ ಬದಲಾವಣೆ ಮುಂದುವರೆದಿದೆ. ಇಂದು ಚಿತ್ರದುರ್ಗದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, ಗುರು ಪಾಟೀಲ್, ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅನೇಕ ಪ್ರಮುಖ ನಾಯಕರು ಶುಕ್ರವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಜೆಡಿಎಸ್‌ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಬೃಹತ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೇರಿದಂತೆ ಪಕ್ಷದ ಹಿರಿಯ ನಾಯಕರು ಜೆಡಿಎಸ್ ಶಾಲು ಹಾಕಿ, ಪಕ್ಷದ ಬಾವುಟ ನೀಡಿ ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಕಾರವಾರದ ಚೈತ್ರ ಕೊಡೇಕರ್, ಪಾವಗಡದ ಶ್ರೀರಾಮ್, ಮಾಯಕೊಂಡದ ಸವಿತಾ ಬಾಯಿ, ಪುತ್ತೂರಿನ ದಿವ್ಯಾ ಪುತ್ತೂರು, ದಿವ್ಯಪ್ರಭಾ ಗೌಡ, ಸಲಾಂ ವಿಟ್ಲ ಸೇರಿದಂತೆ ನೂರಾರು ಪ್ರಮುಖ ನಾಯಕರು ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

"ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ದಿನ ದೊಡ್ಡ ಪ್ರಮಾಣದಲ್ಲಿ ನಾಯಕರು ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ನಮ್ಮ ಪಕ್ಷದ ಶಕ್ತಿ ಏನು ಎಂಬುದು ಎಲ್ಲರಿಗೂ ಮನವರಿಕೆ ಆಗುತ್ತಿದೆ" ಎಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಚುನಾವಣೆಗೆ ಇಂದು ನಡೆದ ಪಕ್ಷ ಸೇರ್ಪಡೆ ಒಂದು ದಿಕ್ಸೂಚಿಯಾಗಿದೆ. ಕಲ್ಬುರ್ಗಿ, ಕಾರವಾರ, ಮಂಗಳೂರು, ಚಿತ್ರದುರ್ಗ ಜಿಲ್ಲೆಗಳ ನಾಯಕರು ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ನಮಗೆ ಶಕ್ತಿ ಇಲ್ಲ ಎಂದು ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದರು. ಆ ಭಾಗದಲ್ಲಿ ಕನಿಷ್ಠ 25-30 ಸ್ಥಾನ ಅಲ್ಲಿ ಗೆಲ್ಲುತ್ತೇವೆ ಎಂದು ಹೇಳಲಾಗುತ್ತಿತ್ತು. ಈಗ ನೋಡಿದರೆ 40 ಸ್ಥಾನದ ಮೇಲೆ ಗೆದ್ದರೂ ಆಶ್ಚರ್ಯವಿಲ್ಲ. ಪಕ್ಷವನ್ನು ಸಧೃಡ ಮಾಡಲು ಕಾರ್ಯಕರ್ತರು ಶ್ರಮ ಹಾಕಿದ್ದಾರೆ. ಇದರ ಮೂಲಕ ಫಲ ದೊರಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.

ಇವತ್ತು ಸೇರ್ಪಡೆ ಆದವರನ್ನು ನಾನು ಕಾಂಗ್ರೆಸ್, ಬಿಜೆಪಿಯವರು ಎಂದು ಹೇಳಲ್ಲ. ಏಕೆಂದರೆ, ಅವರೆಲ್ಲಾ ಒಂದಲ್ಲ ಒಂದು ಕಡೆ ಜೆಡಿಎಸ್ ಪರಿವಾರಕ್ಕೆ ಸೇರಿದವರೇ. 2023ಕ್ಕೆ ಜನತಾ ದಳವನ್ನು ಜನ ಬೆಂಬಲಿಸಲಿದ್ದಾರೆ. 123 ಕ್ಷೇತ್ರಗಳ ಗುರಿ ಇಟ್ಟು ಹೊರಾಟ ಮಾಡುತ್ತಿದ್ದೇವೆ. ಇನ್ನೂ ಅನೇಕರು ಪಕ್ಷಕ್ಕೆ ಬರುವವರಿದ್ದಾರೆ ಎಂದು ಅವರು ತಿಳಿಸಿದರು.

" ಜೆಡಿಎಸ್ ಎಲ್ಲಿದೆ ಎಂದು ಕೇಳುತ್ತಿದ್ದವರಿಗೆ ಈಗ ಉತ್ತರ ಸಿಕ್ಕಿದೆ. ನಾನು ಮೊದಲೇ ಹೇಳಿದ್ದೇ, ಬೇರೆ ಪಕ್ಷಗಳ ನಾಯಕರು ದೊಡ್ಡ ಪ್ರಮಾಣದಲ್ಲಿ ಜೆಡಿಎಸ್ ಪಕ್ಷ ಸೇರುತ್ತರೆಂದು. ಈಗ ಆ ಮಾತು ಸತ್ಯವಾಗಿದೆ" ಎಂದು ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಜನತಾ ದಳ (ಜಾತ್ಯತೀತ) ಪಕ್ಷದ ಹಲವು ಪ್ರಮುಖ ನಾಯಕರು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ಬಿಜೆಪಿಗೆ ಸೇರಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಎಎಪಿಯ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹರೆಡ್ಡಿ ಸೇರಿದಂತೆ ವಿವಿಧ ಪಕ್ಷಗಳ ಬೆಂಬಲಿಗರು ಕೇಸರಿ ಪಕ್ಷಕ್ಕೆ ಸೇರ್ಪಡೆಯಾದ ಪ್ರಮುಖರಾಗಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿಯ ಮುಖಂಡರು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತ ಸುದ್ದಿ ಇಲ್ಲಿದೆ ಓದಿ

IPL_Entry_Point