Excise Depart Transfers: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ, ಕನಿಷ್ಠ ಸೇವಾವಧಿ ನಿಗದಿ ಸೇರಿ ಕೆಲವು ಮುಖ್ಯ ಅಂಶಗಳ ವಿವರ
ಕನ್ನಡ ಸುದ್ದಿ  /  ಕರ್ನಾಟಕ  /  Excise Depart Transfers: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ, ಕನಿಷ್ಠ ಸೇವಾವಧಿ ನಿಗದಿ ಸೇರಿ ಕೆಲವು ಮುಖ್ಯ ಅಂಶಗಳ ವಿವರ

Excise Depart Transfers: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ, ಕನಿಷ್ಠ ಸೇವಾವಧಿ ನಿಗದಿ ಸೇರಿ ಕೆಲವು ಮುಖ್ಯ ಅಂಶಗಳ ವಿವರ

Karnataka Excise Dept Transfers: ಅಬಕಾರಿ ಇಲಾಖೆ ಉದ್ಯೋಗಿಗಳ ವರ್ಗಾವಣೆ ವ್ಯವಸ್ಥೆಯಲ್ಲಿ ಹೊಸ ಚೌಕಟ್ಟು ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ಸಿಕ್ಕಿದ್ದು, ಅಂತಿಮ ನಿಯಮ ಜಾರಿಗೊಂಡರೆ ಕನಿಷ್ಠ ಸೇವಾವಧಿ ಜಾರಿಗೆ ಬರಲಿದೆ.

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ, ಕನಿಷ್ಠ ಸೇವಾವಧಿ ನಿಗದಿ ಸೇರಿ ಕೆಲವು ಮುಖ್ಯ ಅಂಶಗಳ ವಿವರವನ್ನು ಸರ್ಕಾರ ಪ್ರಕಟಿಸಿದೆ.
ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ, ಕನಿಷ್ಠ ಸೇವಾವಧಿ ನಿಗದಿ ಸೇರಿ ಕೆಲವು ಮುಖ್ಯ ಅಂಶಗಳ ವಿವರವನ್ನು ಸರ್ಕಾರ ಪ್ರಕಟಿಸಿದೆ.

Karnataka Excise Dept Transfers: ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರಂತೆ, ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ. ಇದರೊಂದಿಗೆ ಅಬಕಾರಿ ಇಲಾಖೆ ಉದ್ಯೋಗಿಗಳ ವರ್ಗಾವಣೆ ವ್ಯವಸ್ಥೆಯಲ್ಲಿ ಹೊಸ ಚೌಕಟ್ಟು ರೂಪಿಸಲ್ಪಟ್ಟಂತಾಗಿದೆ. ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಸಚಿವರು ವಿವರಿಸಿದರು.

ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು 2025 ಅನುಮೋದನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ನಿನ್ನೆ (ಜನವರಿ 16) ನಡೆದಿದ್ದು, ಅದರಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ಸಿಕ್ಕಿದೆ. ಇದರ ಅನುಬಂಧದಲ್ಲಿ ನೀಡಲಾದ ಕರಡು ವಿವರವನ್ನು ಪ್ರಕಟಿಸಿ, ಸ್ವೀಕೃತವಾಗಬಹುದಾದ ಆಕ್ಷೇಪಣೆ ಮತ್ತು ಸಲಹೆಗಳನ್ನು ಸ್ವೀಕರಿಸಿ, ಅರ್ಹ ಸಲಹೆಗಳನ್ನು ಪರಿಗಣಿಸಿ, ನಿಯಮ ಪರಿಷ್ಕರಿಸಿ ಅಂತಿಮಗೊಳಿಸಲಾಗುತ್ತದೆ. ಅಂತಿಮ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ರೂಪಿಸಿಕೊಂಡು ಸಂಪುಟದ ಅನುಮೋದನೆ ಪಡೆದು ವಿಧಾನ ಮಂಡಲದಲ್ಲಿ ಮಂಡಿಸಲು ಸಿದ್ದತೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ; ಕನಿಷ್ಠ ಸೇವಾವಧಿ ಸೇರಿ 3 ಮುಖ್ಯ ಅಂಶಗಳು

1) ವರ್ಗಾವಣೆಗೆ ಕೌನ್ಸಿಲಿಂಗ್‌: ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳನ್ನು ಕಾರ್ಯ ನಿರ್ವಾಹಕ ಮತ್ತು ಕಾರ್ಯನಿರ್ವಾಹಕೇತರ ಎಂದು ವಿಂಗಡಿಸಿ, ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿ‌ ಮುಖ್ಯ ಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲು ನಿರ್ಧರಿಸಲಾಗಿದೆ.

2) ಕಡ್ಡಾಯ ವರ್ಗಾವಣೆ: ಒಬ್ಬ ಅಧಿಕಾರಿ/ಸಿಬ್ಬಂದಿಯನ್ನು ಸತತವಾಗಿ ಎರಡಕ್ಕಿಂತ ಹೆಚ್ಚು ಅವಧಿಗೆ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ ಹಾಗೂ ಅಬಕಾರಿ ಅಧಿಕಾರಿಗಳ ಕಡ್ಡಾಯ ವರ್ಗಾವಣೆಗೆ ಹೊಸ ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ.

3) ಬೆಂಗಳೂರಿನಿಂದ ಇತರೆಡೆಗೆ ವರ್ಗಾವಣೆ: ಕಳೆದ 05 ವರ್ಷಗಳಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು ಮತ್ತು ಉಪ ನಿರೀಕ್ಷಕರುಗಳನ್ನು ಸದರಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ವರ್ಗಾಯಿಸುವ ವಿಚಾರ ಹೊಸ ನಿಯಮದಲ್ಲಿ ಉಲ್ಲೇಖಿಸಲಾಗಿದೆ.

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ, ಕನಿಷ್ಠ ಸೇವಾವಧಿ ನಿಗದಿ
ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ, ಕನಿಷ್ಠ ಸೇವಾವಧಿ ನಿಗದಿ

ಅಬಕಾರಿ ಇಲಾಖೆಯು ಸಮವಸ್ತ್ರಾಧಾರಿತ ಮತ್ತು ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮ ಇಲಾಖೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಅನುಕೂಲವಾಗಲಿದೆ. ಜೊತೆಗೆ ಇಲಾಖೆಯಲ್ಲಿ ಪಾರದರ್ಶಕತೆ ವ್ಯವಸ್ಥೆ ಜಾರಿಯಾಗುವುದಿಂದ ಭ್ರಷ್ಟಾಚಾರಕ್ಕೆ ಆಸ್ಪದ ಇರುವುದಿಲ್ಲ. ಕರ್ನಾಟಕ ಸರ್ಕಾರಕ್ಕೆ ಆದಾಯ ಕೂಡ ಹೆಚ್ಚಾಗಲಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ.

Whats_app_banner