Forest News: ಕಾಡಾನೆ ಇರುವ ಭಾಗದಲ್ಲಿ 24 ಗಂಟೆ ಆನೆ ಎಚ್ಚರಿಕೆ ಸಂದೇಶ ರವಾನೆ, ರೈಲ್ವೆ ಬ್ಯಾರಿಕೇಡ್ ರಾಮನಗರಕ್ಕೂ ವಿಸ್ತರಣೆ
ಕನ್ನಡ ಸುದ್ದಿ  /  ಕರ್ನಾಟಕ  /  Forest News: ಕಾಡಾನೆ ಇರುವ ಭಾಗದಲ್ಲಿ 24 ಗಂಟೆ ಆನೆ ಎಚ್ಚರಿಕೆ ಸಂದೇಶ ರವಾನೆ, ರೈಲ್ವೆ ಬ್ಯಾರಿಕೇಡ್ ರಾಮನಗರಕ್ಕೂ ವಿಸ್ತರಣೆ

Forest News: ಕಾಡಾನೆ ಇರುವ ಭಾಗದಲ್ಲಿ 24 ಗಂಟೆ ಆನೆ ಎಚ್ಚರಿಕೆ ಸಂದೇಶ ರವಾನೆ, ರೈಲ್ವೆ ಬ್ಯಾರಿಕೇಡ್ ರಾಮನಗರಕ್ಕೂ ವಿಸ್ತರಣೆ

Forest News: ಕಾಡಾನೆ ಉಪಟಳ ಇರುವ ಅರಣ್ಯದಂಚಿನ ಗ್ರಾಮಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಸ್‌ಎಂಎಸ್‌ ಎಚ್ಚರಿಕೆ ನೀಡುವ ವ್ಯವಸ್ಥೆಯನ್ನು ಕರ್ನಾಟಕ ಅರಣ್ಯ ಇಲಾಖೆ ಇನ್ನಷ್ಟು ಬಲಪಡಿಸಿ ವಿಸ್ತರಿಸಲು ಮುಂದಾಗಿದೆ.

ಅರಣ್ಯದಂಚಿನ ಗ್ರಾಮ ಹಾಗೂ ಪ್ರದೇಶಗಳಲ್ಲಿ ಕಾಡಾನೆಗಳ ಸಂಚಾರದ ಮಾಹಿತಿ ನೀಡುವ ಎಸ್‌ಎಂಎಸ್‌ ಸೇವೆ ಬಲಗೊಳ್ಳಲಿದೆ.
ಅರಣ್ಯದಂಚಿನ ಗ್ರಾಮ ಹಾಗೂ ಪ್ರದೇಶಗಳಲ್ಲಿ ಕಾಡಾನೆಗಳ ಸಂಚಾರದ ಮಾಹಿತಿ ನೀಡುವ ಎಸ್‌ಎಂಎಸ್‌ ಸೇವೆ ಬಲಗೊಳ್ಳಲಿದೆ.

Forest News: ಆನೆಗಳ ಉಪಟಳ ಇರುವ ಕರ್ನಾಟಕದ ವಿವಿಧ ಭಾಗಗಳಲ್ಲಿ ದಿನದ 24 ಗಂಟೆಯು ಆನೆ ಎಚ್ಚರಿಕೆ ಸಂದೇಶ ರವಾನೆ ಮಾಡುವ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕರ್ನಾಟಕ ಅರಣ್ಯ ಇಲಾಖೆ ಮುಂದಾಗಿದೆ. ಅದರಲ್ಲೂ ಬೆಂಗಳೂರಿಗೆ ಹೊಂದಿಕೊಂಡ ರಾಮನಗರ ಜಿಲ್ಲೆಯಲ್ಲಂತೂ ಕಾಡಾನೆ ಉಪಟಳ ಹೆಚ್ಚಾಗಿದೆ. ರಾಮನಗರ ಜಿಲ್ಲೆಯಲ್ಲಿ ಆನೆ ಸಂಘರ್ಷ ಅತಿ ಹೆಚ್ಚು ಇರುವ ವಿಭಾಗ 85 ಇದ್ದರೆ, ಹೆಚ್ಚಿನ ಸಂಘರ್ಷ ಇರುವ 45 ವಿಭಾಗಗಳಿವೆ ಮತ್ತು ಮಧ್ಯಮ ಸಂಘರ್ಷದ 40 ವಿಭಾಗಗಳಿವೆ ಹೀಗಾಗಿ, ಆನೆಗಳು ಅರಣ್ಯದಿಂದ ಹೊರಗೆ ಬಂದ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಈ ಬಗ್ಗೆ ವಾರದ ಏಳೂದಿನ, ದಿನದ 24 ಗಂಟೆ ಎಚ್ಚರಿಕೆ ಸಂದೇಶ ರವಾನಿಸಲು ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಶಾಸಕರಾದದ ಸಿ.ಪಿ. ಯೋಗೇಶ್ವರ್, ಇಕ್ಬಾಲ್ ಹುಸೇನ್ ಅವರೊಂದಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಕೆಲವು ಸೂಚನೆಗಳನ್ನು ನೀಡಿದರು.

ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ನಿರ್ಮಿಸುವುದಾಗಿ ಘೋಷಿಸಿರುವ ರೀತಿಯಲ್ಲೇ, ರಾಮನಗರ ಜಿಲ್ಲೆಯಲ್ಲಿ ಕೂಡ ಮುತ್ತತ್ತಿ ಅಥವಾ ನೇರಳಹಟ್ಟಿ ಬಳಿ ಆನೆ ವಿಹಾರ ಧಾಮ ಸ್ಥಾಪಿಸುವ ಮೂಲಕ ರಾತ್ರಿಯ ವೇಳೆ ನಾಡಿಗೆ ಬಂದು ಬೆಳೆ ತಿಂದು ರಾತ್ರಿ ಕಾಡಿಗೆ ಹೋಗುವ ಆನೆಗಳ ಹಾವಳಿ ತಪ್ಪಿಸಬೇಕು ಎಂಬ ಶಾಸಕರ ಮನವಿಗೆ ಸ್ಪಂದಿಸಿದ ಈಶ್ವರ ಖಂಡ್ರೆ, ಈ ಸಂಬಂಧ ಪರಿಶೀಲಿಸಿ ಕ್ರಮ ವಹಿಸುವ ಭರವಸೆ ನೀಡಿದರು.

ಅರಣ್ಯ ಪ್ರದೇಶದೊಳಗೆ ಆನೆ ಸೇರಿದಂತೆ ಎಲ್ಲ ವನ್ಯಜೀವಿಗಳಿಗೆ ಕುಡಿಯುವ ನೀರು ಮತ್ತು ಆಹಾರದ ಲಭ್ಯತೆಯ ಖಾತ್ರಿ ಪಡಿಸಲು ಕ್ರಮ ವಹಿಸುವಂತೆ ಸಚಿವರು ಸೂಚಿಸಿದರು. ಬೇಸಿಗೆಯಲ್ಲಿ ಕಾವೇರಿ ವನ್ಯಜೀವಿ ಧಾಮ ಸೇರಿದಂತೆ ಜಿಲ್ಲೆಯ ಎಲ್ಲ ಅರಣ್ಯಗಳಲ್ಲಿರುವ ನೀರು ಗುಂಡಿಗಳಲ್ಲಿ ನೀರು ಇರುವಂತೆ ಕ್ರಮ ವಹಿಸಬೇಕು. ಅಗತ್ಯ ಇರುವ ಕಡೆ ಕೊಳವೆಬಾವಿಗಳಿಗೆ ಸೌರ ಪಂಪ್ ಸೆಟ್ ಅಳವಡಿಸಿ ನಿರಂತರವಾಗಿ ನೀರು ಹಾಯಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

  • ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ತತ್ ಕ್ಷಣವೇ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂ. ಹಣ ಹಂಚಿಕೆ ಮಾಡಲಾಗುವುದು, ಆನೆಗಳು ನಾಡಿಗೆ ಬಂದು ಬೆಳೆಹಾನಿ, ಜೀವಹಾನಿ ಮಾಡುತ್ತಿದ್ದು, ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು .
  • ರಾಮನಗರ ಜಿಲ್ಲೆಗೆ ಒಟ್ಟು 35 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು ಮಾಡಿದ್ದು, ಈಗಾಗಲೇ 25 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
  • ರಾಮನಗರ ಜಿಲ್ಲೆಯಲ್ಲಿ ಆನೆ ಸಂಘರ್ಷ ಅತಿ ಹೆಚ್ಚು ಇರುವ ವಿಭಾಗ 85 ಇದ್ದರೆ, ಹೆಚ್ಚಿನ ಸಂಘರ್ಷ ಇರುವ 45 ವಿಭಾಗಗಳಿವೆ ಮತ್ತು ಮಧ್ಯಮ ಸಂಘರ್ಷದ 40 ವಿಭಾಗಗಳಿವೆ ಹೀಗಾಗಿ, ಆನೆಗಳು ಅರಣ್ಯದಿಂದ ಹೊರಗೆ ಬಂದ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಈ ಬಗ್ಗೆ ವಾರದ ಏಳೂದಿನ, ದಿನದ 24 ಗಂಟೆ ಎಚ್ಚರಿಕೆ ಸಂದೇಶ ರವಾನಿಸಲು ವ್ಯವಸ್ಥೆ ಕಲ್ಪಿಸಲಾಗುತ್ತದೆ.
  • ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಗ್ರಾಮ ಪಂಚಾಯ್ತಿಗಳ ಸಿಬ್ಬಂದಿ, ಜನಪ್ರತಿನಿಧಿಗಳಿಗೆ ಈ ಸಂಬಂಧ ಮಾಹಿತಿ ರವಾನಿಸಲು ಮತ್ತು ಗ್ರಾಮಸ್ಥರಿಗೆ ವಾಟ್ಸ್ ಅಪ್ ಮೂಲಕ ಎಚ್ಚರಿಕೆ ಸಂದೇಶ ರವಾನಿಸಲು ಕ್ರಮ ವಹಿಸಬೇಕು.

Whats_app_banner