ಬಿಜೆಪಿ ಶಾಸಕ ಮುನಿರತ್ನ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ; ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಕನ್ನಡ ಸುದ್ದಿ  /  ಕರ್ನಾಟಕ  /  ಬಿಜೆಪಿ ಶಾಸಕ ಮುನಿರತ್ನ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ; ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬಿಜೆಪಿ ಶಾಸಕ ಮುನಿರತ್ನ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ; ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

BJP MLA Munirathna: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚಿಸಿ ಆದೇಶ ಹೊರಡಿಸಿದೆ.

ಬಿಜೆಪಿ ಶಾಸಕ ಮುನಿರತ್ನ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ
ಬಿಜೆಪಿ ಶಾಸಕ ಮುನಿರತ್ನ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ (BJP MLA Munirathna) ವಿರುದ್ಧ ದಾಖಲಾದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಗೆ ಸಂಬಂಧಿಸಿ ಎಸ್​ಐಟಿ (Special Investigation Team) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಜೆಪಿ ಮುಖಂಡನ ವಿರುದ್ಧ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣ ಮತ್ತು ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅತ್ಯಾಚಾರ, ಹನಿಟ್ರ್ಯಾಪ್ ಪ್ರಕರಣದ ನಡೆಸಲು ಸಿಐಡಿಯ ವಿಶೇಷ ಎಸ್ಐಟಿ ತಂಡಕ್ಕೆ ಜವಾಬ್ದಾರಿ ನೀಡಲಾಗಿದೆ.

ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಪ್ರಕರಣಗಳನ್ನು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ದಾಖಲಿಸಿದ್ದರೆ, ಅತ್ಯಾಚಾರ ಪ್ರಕರಣವನ್ನು ಬಿಜೆಪಿ ಕಾರ್ಯಕರ್ತೆಯೊಬ್ಬರು ದಾಖಲಿಸಿದ್ದಾರೆ. ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಲದಿಂದ ಜಾಮೀನು ಸಿಕ್ಕಿದ್ದರೂ ರೇಪ್​ ಕೇಸ್​​​ನಲ್ಲಿ ಮುನಿರತ್ನ ಕಗ್ಗಲಿಪುರ ಪೊಲೀಸರ ವಶದಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಇದರ ಮಧ್ಯೆ ಮುನಿರತ್ನ ಅವರದ್ದು ಎನ್ನಲಾದ ಆಡಿಯೋದಲ್ಲಿ ಒಕ್ಕಲಿಗ ಸಮುದಾಯ ಮತ್ತು ದಲಿತರನ್ನು ನಿಂದಿಸಿದ್ದ ಹಿನ್ನೆಲೆಯಲ್ಲಿ ಎಐಟಿ ರಚನೆಗೆ ಕಾಂಗ್ರೆಸ್​​ನ ಒಕ್ಕಲಿಗ ಸಮುದಾಯದ ಶಾಸಕರು, ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು.

ಇದೀಗ ರಾಜ್ಯ ಸರ್ಕಾರ ಎಸ್​ಐಟಿ ರಚಿಸಿ ಮಹತ್ವದ ಆದೇಶ ಹೊರಡಿಸಿದ್ದು, ಮುನಿರತ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳು ಸಮಗ್ರ ತನಿಖೆಗೆ ಒಳಪಡಲಿದೆ. ಪ್ರಸ್ತುತ ಸಿಐಡಿ ಆರ್ಥಿಕ ಅಪರಾಧಗಳ ಅಪರ ಪೊಲೀಸ್ ಮಹಾ ನಿರ್ದೇಶಕ ಬಿಕೆ ಸಿಂಗ್ ನೇತೃತ್ವದಲ್ಲಿ ಎಸ್​ಐಟಿಯನ್ನು ರಚಿಸಲಾಗಿದೆ.

ಎಸ್​ಐಟಿಯಲ್ಲಿ ಯಾರೆಲ್ಲಾ ಇದ್ದಾರೆ?

ಬಿಕೆ ಸಿಂಗ್: (ಅಪರ ಪೊಲೀಸ್ ಮಹಾ ನಿರ್ದೇಶಕರು, ಆರ್ಥಿಕ ಅಪರಾಧಗಳು ಸಿಐಡಿ) - ಎಸ್​ಐಟಿ ಮುಖ್ಯಸ್ಥರು

ಲಭುರಾಮ್: ಐಪಿಎಸ್ (ಪೊಲೀಸ್ ಮಹಾ ನಿರ್ದೇಶಕರು ಕೆಂದ್ರ ವಲಯ), ಸದಸ್ಯರು

ಸೌಮ್ಯಲತಾ: ಐಪಿಎಸ್ ( ಪೊಲೀಸ್ ಅಧೀಕ್ಷಕರು ರೈಲ್ವೇಸ್) - ಸದಸ್ಯರು

ಸಿಎ ಸೈಮನ್: (ಪೊಲೀಸ್ ಅಧೀಕ್ಷಕರು ) - ಸದಸ್ಯರು

Whats_app_banner