Dearness Allowance Hike: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ; ತುಟ್ಟಿ ಭತ್ಯೆ ಶೇಕಡಾ 4ರಷ್ಟು ಹೆಚ್ಚಳ
ಕನ್ನಡ ಸುದ್ದಿ  /  ಕರ್ನಾಟಕ  /  Dearness Allowance Hike: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ; ತುಟ್ಟಿ ಭತ್ಯೆ ಶೇಕಡಾ 4ರಷ್ಟು ಹೆಚ್ಚಳ

Dearness Allowance Hike: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ; ತುಟ್ಟಿ ಭತ್ಯೆ ಶೇಕಡಾ 4ರಷ್ಟು ಹೆಚ್ಚಳ

Govt Employees DA Hike: 2023ರ ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31 ರಿಂದ ಶೇಕಡಾ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿದ ಸಿದ್ದರಾಮಯ್ಯ ಸರ್ಕಾರ
ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿದ ಸಿದ್ದರಾಮಯ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಸಿಹಿಸುದ್ದಿ ನೀಡಿದೆ. ತುಟ್ಟಿ ಭತ್ಯೆಯನ್ನು ಶೇಕಡಾ 4ರಷ್ಟು ಹೆಚ್ಚಳ (Dearness Allowance Hike) ಮಾಡಿ ಇಂದು (ಮೇ 30, ಮಂಗಳವಾರ) ಆದೇಶ ಹೊರಡಿಸಿದೆ.

2023ರ ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31 ರಿಂದ ಶೇಕಡಾ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಆದೇಶದ ಪ್ರಮುಖ ಅಂಶಗಳು ಹೀಗಿವೆ..

• 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಸಂಬಳವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದೆ.

• ಜನವರಿ 1, 2023 ರಿಂದ ರಾಜ್ಯ ಪಿಂಚಣಿದಾರರಿಗೆ/ಕುಟುಂಬ ಪಿಂಚಣಿದಾರರಿಗೆ ಹಾಗೂ ಅನುದಾನಿತ ಕುಟುಂಬ ಪಿಂಚಣಿದಾರರಿಗೆ ತುಟ್ಟಿಭತ್ಯೆ ದರಗಳನ್ನು ಅಸ್ತಿತ್ವದಲ್ಲಿರುವ ಮೂಲ ಪಿಂಚಣಿ/ಕುಟುಂಬ ಪಿಂಚಣಿಯ ಶೇ. 31 ರಿಂದ ಶೇ. 35 ಕ್ಕೆ ಸರ್ಕಾರ ಹೆಚ್ಚಿಸಿದೆ.

• ಈ ಆದೇಶಗಳು ಯುಜಿಸಿ / ಎಐಸಿಟಿಇ / ಐಸಿಎಆರ್‌ ವೇತನ ಶ್ರೇಣಿಗಳ ಪಿಂಚಣಿದಾರರಿಗೂ ಅನ್ವಯಿಸುತ್ತವೆ.

• ಈ ಆದೇಶಗಳು ಪೂರ್ಣ ಸಮಯದ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್‌ಗಳ ನೌಕರರು, ನಿಯಮಿತ ಸಮಯದ ವೇತನ ಶ್ರೇಣಿಯಲ್ಲಿ ಕೆಲಸ ನಿರ್ವಹಿಸುವ ನೌಕರರು, ನಿಯಮಿತ ವೇತನ ಶ್ರೇಣಿಯಲ್ಲಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳ ಪೂರ್ಣ ಸಮಯದ ಉದ್ಯೋಗಿಗಳಿಗೆ ಅನ್ವಯಿಸುತ್ತವೆ.

• UGC AICTE ACAR/NJPC ವೇತನ ಶ್ರೇಣಿಗಳ ಉದ್ಯೋಗಿಗಳು ಮತ್ತು NJPC ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ನೀಡಲಾಗುವುದು.

• ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡಬೇಕು ಎಂದೂ ಸೂಚಿಸಲಾಗಿದೆ.

• ತುಟ್ಟಿ ಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ 50 ಪೈಸೆ ಮತ್ತು ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಬೇಕು. 50 ಪೈಸಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ನಿರ್ಲಕ್ಷಿಸಲಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

• ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು, 2023ರ ಮೇ ತಿಂಗಳ ವೇತನ ಬಟವಾಡೆಗೂ (ಸಂಬಳದ ವಿತರಣೆಯ ದಿನಾಂಕ) ಮುನ್ನ ಪಾವತಿಸಬಾರದು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ತುಟ್ಟಿ ಭತ್ಯೆ ಎಂದರೇನು?

ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರಿ ನೌಕರರು ಹಾಗೂ ನಿವೃತ್ತ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ತೊಂದರೆಗೆ ಒಳಗಾಗದೇ ನೆಮ್ಮದಿಯ ಬದುಕು ಸಾಗಿಸುವುದರ ಜೊತೆಗೆ ಸಾರ್ವಜನಿಕರ ಕೆಲಸಗಳನ್ನು ಖುಷಿಯಿಂದ ಮಾಡಲಿ ಎನ್ನುವ ಉದ್ದೇಶದಿಂದ ಸರಕಾರಗಳು ಒದಗಿಸುವ ಆರ್ಥಿಕ ಸೌಲಭ್ಯವೇ ತುಟ್ಟಿ ಭತ್ಯೆ.

ಈ ವರ್ಷ ಮಾರ್ಚ್​ ತಿಂಗಳಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳ ತುಟ್ಟಿಭತ್ಯೆ ಶೇ.4 ರಷ್ಟು ಹೆಚ್ಚಳ ಮಾಡಲಾಗಿತ್ತು.

Whats_app_banner