ಕೋವಿಡ್ ಪ್ರಕರಣಗಳ ಹೆಚ್ಚಳದ ಮೇಲೆ ರಾಜ್ಯ ನಿಗಾ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕನ್ನಡ ಸುದ್ದಿ  /  ಕರ್ನಾಟಕ  /  ಕೋವಿಡ್ ಪ್ರಕರಣಗಳ ಹೆಚ್ಚಳದ ಮೇಲೆ ರಾಜ್ಯ ನಿಗಾ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕೋವಿಡ್ ಪ್ರಕರಣಗಳ ಹೆಚ್ಚಳದ ಮೇಲೆ ರಾಜ್ಯ ನಿಗಾ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಳದ ಬಗ್ಗೆ ಕರ್ನಾಟಕ ಸರ್ಕಾರವು ಕೋವಿಡ್ -19 ಪರೀಕ್ಷೆಯನ್ನು ಹೆಚ್ಚಿಸಿ, ನಿಗಾ ವಹಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಳದ ಬಗ್ಗೆ ಕರ್ನಾಟಕ ಸರ್ಕಾರ ನಿಗಾ ವಹಿಸುತ್ತಿದೆ
ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಳದ ಬಗ್ಗೆ ಕರ್ನಾಟಕ ಸರ್ಕಾರ ನಿಗಾ ವಹಿಸುತ್ತಿದೆ (AFP)

ಬೆಂಗಳೂರು: ಕೋವಿಡ್ -19 ಪರೀಕ್ಷೆಗಳ ಹೆಚ್ಚಳ ಮತ್ತು ಬೆಂಗಳೂರಿನಲ್ಲಿ ಇತ್ತೀಚೆಗೆ ವೃದ್ಧರೊಬ್ಬರ ಸಾವಿನ ಬಳಿಕ ಪರಿಸ್ಥಿತಿಯನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಪ್ರಸ್ತುತ ಯಾವುದೇ ಸಾರ್ವಜನಿಕ ನಿರ್ಬಂಧಗಳು ಅಥವಾ ಎಚ್ಚರಿಕೆಯ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್‌ನ ನಿವಾಸಿ 84 ವರ್ಷದ ವೃದ್ಧರು ಬಹು ಅಂಗಾಂಗ ವೈಫಲ್ಯದಿಂದ ಮೇ 17 ರಂದು ನಿಧನರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ತೆಗೆದುಕೊಂಡ ಕೋವಿಡ್ -19 ಪರೀಕ್ಷೆಯು ಅವರ ಸಾವಿನ ನಂತರ ಪಾಸಿಟಿವ್ ಎಂದು ಬಂದಿದ್ದರೂ, ವ್ಯಕ್ತಿಯು ಹೃದ್ರೋಗ, ಕ್ಷಯ ಮತ್ತು ದೀರ್ಘಕಾಲದ ನಿಶ್ಚಲತೆ ಸೇರಿದಂತೆ ಅನೇಕ ಗಂಭೀರ ಆರೋಗ್ಯ ಪರಿಸ್ಥಿತಿಗಳನ್ನು ಹೊಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಸಾವಿಗೆ ಕೋವಿಡ್ ಮಾತ್ರ ನೇರ ಕಾರಣವಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದಲ್ಲಿ 38 ಸಕ್ರಿಯ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ವರದಿಯಾಗಿದೆ. ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷಾ ಕಿಟ್‌ಗಳನ್ನು ನಿಯೋಜಿಸುತ್ತಿದೆ ಮತ್ತು ಎಸ್ಎಆರ್‌ಐ ಅಥವಾ ಐಎಲ್ಐ ರೋಗಲಕ್ಷಣಗಳನ್ನು ತೋರಿಸುವವರನ್ನು ಹೆಚ್ಚಿನ ಪರೀಕ್ಷೆ ಮತ್ತಿ ನಿಗಾದ ಆದ್ಯತೆ ನೀಡುತ್ತಿದೆ. ವಯಸ್ಸಾದ ಜನರು ಮತ್ತು ಮಕ್ಕಳಲ್ಲಿ ತೀವ್ರವಾದ ಉಸಿರಾಟದ ಸೋಂಕು ಪ್ರಕರಣಗಳು ಮತ್ತು ಇನ್ಫ್ಲುಯೆನ್ ತರಹದ ಅನಾರೋಗ್ಯ ಪ್ರಕರಣಗಳನ್ನು ವಿಶೇಷವಾಗಿ ಪರಿಗಣಿಸಲಾಗುತ್ತಿದೆ. ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಇದು ಕಡ್ಡಾಯವಾಗಿದೆ" ಎಂದು ಸಚಿವರು ಹೇಳಿದ್ದಾರೆ.

ಕೋವಿಡ್ ತಡೆಗಟ್ಟುವ ಕ್ರಮಗಳನ್ನು ತ್ವರಿತವಾಗಿ ತೆಗೆದುಕೊಳ್ಳಲಾಗುತ್ತಿದೆ ಎಂದು ಪ್ರತಿಪಾದಿಸಿದ ಸಚಿವ ದಿನೇಶ್ ಗುಂಡೂರಾವ್, ಯಾವುದೇ ನಿರ್ಲಕ್ಷ್ಯದ ಪ್ರಶ್ನೆಯೇ ಇಲ್ಲ, ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಮತ್ತು ರಾಜ್ಯ, ಇಡೀ ದೇಶ ಮತ್ತು ಇತರ ರಾಜ್ಯಗಳು ಏನು ಮಾಡುತ್ತಿವೆ ಎಂಬ ಎಲ್ಲಾ ಅಂಶಗಳನ್ನು ಪರಿಗಣಿಸಿ, ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಮತ್ತು ನಮ್ಮ ಅಧಿಕಾರಿಗಳು ಕೇಂದ್ರದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in