ವಕ್ಫ್‌ ಭೂ ವಿವಾದ; ನೋಟಿಸ್‌ ಹಿಂಪಡೆಯಲು ಸರ್ಕಾರದ ಸೂಚನೆ, ಸಿಎಂ ಸಿದ್ದರಾಮಯ್ಯ ಕಟ್ಟಾಜ್ಞೆ ನಂತರ ಹೊರಡಿಸಿದ ಆದೇಶದಲ್ಲಿ ಏನಿದೆ
ಕನ್ನಡ ಸುದ್ದಿ  /  ಕರ್ನಾಟಕ  /  ವಕ್ಫ್‌ ಭೂ ವಿವಾದ; ನೋಟಿಸ್‌ ಹಿಂಪಡೆಯಲು ಸರ್ಕಾರದ ಸೂಚನೆ, ಸಿಎಂ ಸಿದ್ದರಾಮಯ್ಯ ಕಟ್ಟಾಜ್ಞೆ ನಂತರ ಹೊರಡಿಸಿದ ಆದೇಶದಲ್ಲಿ ಏನಿದೆ

ವಕ್ಫ್‌ ಭೂ ವಿವಾದ; ನೋಟಿಸ್‌ ಹಿಂಪಡೆಯಲು ಸರ್ಕಾರದ ಸೂಚನೆ, ಸಿಎಂ ಸಿದ್ದರಾಮಯ್ಯ ಕಟ್ಟಾಜ್ಞೆ ನಂತರ ಹೊರಡಿಸಿದ ಆದೇಶದಲ್ಲಿ ಏನಿದೆ

ವಕ್ಫ್‌ ಭೂ ವಿವಾದ ಕರ್ನಾಟಕದಲ್ಲಿ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಈಗಾಗಲೇ ರೈತರಿಗೆ ನೀಡಿರುವ ಎಲ್ಲಾ ನೋಟಿಸ್‌ಗಳನ್ನು ವಾಪಾಸ್‌ ಪಡೆಯುವಂತೆ ಕಂದಾಯ ಇಲಾಖೆ ಆದೇಶವನ್ನು ಹೊರಡಿಸಿದೆ.

ಕರ್ನಾಟಕದಲ್ಲಿ ತೀವ್ರ ವಿವಾದ ಸ್ವರೂಪ ಪಡೆದಿರುವ ವಕ್ಫ್‌ ಭೂಮಿ ವಿಚಾರವಾಗಿ ನೀಡಿರುವ ನೋಟಿಸ್‌ಗಳನ್ನು ರೈತರಿಂದ ವಾಪಾಸ್‌ ಪಡೆಯಲು ಸರ್ಕಾರ ಆದೇಶಿಸಿದೆ.
ಕರ್ನಾಟಕದಲ್ಲಿ ತೀವ್ರ ವಿವಾದ ಸ್ವರೂಪ ಪಡೆದಿರುವ ವಕ್ಫ್‌ ಭೂಮಿ ವಿಚಾರವಾಗಿ ನೀಡಿರುವ ನೋಟಿಸ್‌ಗಳನ್ನು ರೈತರಿಂದ ವಾಪಾಸ್‌ ಪಡೆಯಲು ಸರ್ಕಾರ ಆದೇಶಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ವಕ್ಫ್‌ ಜಮೀನು ವಿವಾದಕ್ಕೆ ತೆರೆ ಎಳೆಯಲು ಮುಂದಾಗಿರುವ ರಾಜ್ಯ ಸರ್ಕಾರ, ಯಾವುದೇ ಕಾರಣಕ್ಕೂ ವಕ್ಫ್‌ ಭೂಮಿಗೆ ಸಂಬಂಧಿಸಿ ಕಂದಾಯ ಇಲಾಖೆ ಯಾವುದೇ ಚಟುವಟಿಕೆ ನಡೆಸಬಾರದು. ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ಕೂಡಲೇ ವಾಪಾಸ್‌ ಪಡೆಯಬೇಕು. ಗೊಂದಲದಲ್ಲಿರುವ ಜನತೆಗೆ ಇನ್ನಷ್ಟು ಗೊಂದಲ ಉಂಟು ಮಾಡುವುದು ಬೇಡ ಎಂದು ಆದೇಶ ಹೊರಡಿಸಲಾಗಿದೆ.ಈ ಕುರಿತು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಪರ ಕಾರ್ಯದರ್ಶಿ ಎಲ್ಲಾ ಪ್ರಾದೇಶಿಕ ಆಯುಕ್ತರು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದರ ಬೆನ್ನಲ್ಲೇ ಅಧಿಕೃತ ಆದೇಶವೂ ಹೊರಬಿದ್ದಿದೆ.

ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಕೊನೆಗೆ ಮಠ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವವರೆಗ ಹೋಗಿತ್ತು.ಬಿಜೆಪಿ ಇದನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಿತ್ತು.

ಕೇಂದ್ರ ಸಂಸದೀಯ ಜಂಟಿ ಸಮಿತಿ ಕೂಡ ಕರ್ನಾಟಕಕ್ಕೆ ಭೇಟಿ ನೀಡಿತ್ತು. ಬಳಿಕ ರಾಜ್ಯದಲ್ಲಿ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸದ್ಯ ಎಚ್ಚೆತ್ತುಕೊಂಡಿರುವ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್​ನ್ನು ಅಧಿಕೃತವಾಗಿ ವಾಪಾಸ್ ಪಡೆದುಕೊಂಡಿದೆ.

ಸೂಚನೆ ಏನು

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಿರಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದ್ದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಕೆಲಸ ದಿನಗಳ ಹಿಂದೇ ಸೂಚನೆ ನೀಡಿದ್ದರು. ಇದೀಗ ಅಧಿಕೃವಾಗಿ ಆದೇಶ ಹೊರಬಿದ್ದಿದೆ.

ಮ್ಯುಟೇಷನ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಈ ಕುರಿತು ನೀಡಲಾದ ನೋಟೀಸ್‌ಗಳನ್ನ ಹಿಂಪಡೆಯುವುದು, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಕಂದಾಯ ಇಲಾಖೆ ಅಪರ ಪ್ರಧಾನ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.

ವಿವಾದ ಏಕೆ

ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಬೋರ್ಡ್‌ನಿಂದ ಬಂದ ನೋಟಿಸ್ ಶಾಕ್ ನೀಡಿತ್ತು. ತಲತಲಾಂತರಗಳಿಂದ ಉಳುಮೆ ಮಾಡಿಕೊಂಡು ಬಂದಿದ್ದ ರೈತರು ಜಮೀನು ಕಳೆದುಕೊಳ್ಳುವ ಆತಂಕ ಎದುರಿಸಿದ್ದರು. ನೋಟಿಸ್‌ನಲ್ಲಿ ಅವರು ಉಳುಮೆ ಮಾಡುತ್ತಿದ್ದ ಜಮೀನು ವಕ್ಪ್ ಸ್ವತ್ತು ಎಂದು ನಮೂದಿಸಲಾಗಿತ್ತು. ಅಷ್ಟೇ ಅಲ್ಲದೆ ರೈತರ ಪಹಣಿಯಲ್ಲೂ ವಕ್ಫ್ ಜಮೀನು ಎಂದು ಬದಲಾವಣೆ ಮಾಡಲಾಗಿತ್ತು. ಇದು ರೈತರ ಆತಂಕಕ್ಕೆ ಕಾರಣವಾಗಿ ತಾಲ್ಲೂಕು ಕಚೇರಿಗಳಿಗೆ ಎಡತಾಕಿದ್ದರು. ಆನಂತರ ಕರ್ನಾಟಕದ ಹಲವು ಭಾಗಗಳಲ್ಲಿ ಈ ರೀತಿ ಆಗಿರುವುದು ಬಯಲಾಗಿತ್ತು. ಅಲ್ಲದೇ ನೊಟೀಸ್‌ಗಳನ್ನೂ ರೈತರಿಗೆ ನೀಡಲಾಗಿತ್ತು.

ಇದನ್ನೂ ಓದಿರಿ: ನರೇಗಾ ಖಾತರಿ ಯೋಜನೆ: ಆನ್‌ಲೈನ್​ನಲ್ಲೂ ಸಲ್ಲಿಸಿ ಬೇಡಿಕೆ, ಕ್ಯೂ ಆರ್ ಕೋಡ್ ಬಳಸಿ ನಮೂದಿಸಿ ಹೆಸರು!

ಆದೇಶದಲ್ಲಿ ನೀಡಿರುವ ಸೂಚನೆ ಹೀಗಿದೆ

  • ವಕ್ಪ್‌ ಜಮೀನಿಗೆ ಸಂಬಂಧಿಸಿದಂತೆ ಮ್ಯೂಟೇಷನ್‌ ಮಾಡಲು ಯಾವುದೇ ಕಛೇರಿ ಅಥವಾ ಯಾವುದೇ ಪ್ರಾಧಿಕಾರದಿಂದ ನೀಡಲಾದ ನಿರ್ದೇಶನಗಳನ್ನು ತತ್‌ಕ್ಷಣದಿಂದಲೇ ಹಿಂಪಡೆಯುವುದು. ಮ್ಯುಟೇಷನ್‌ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತ ಮಾಡಬೇಕು.
  • ಈ ಕುರಿತು ನೀಡಲಾಗಿರುವ ಎಲ್ಲಾ ನೋಟಿಸ್‌ಗಳನ್ನು ಕೂಡಲೇ ಹಿಂಪಡೆಯುವುದು.
  • ನೋಟಿಸ್‌ ನೀಡಲಾಗಿರುವ ಜಮೀನುಗಳಲ್ಲಿ ವ್ಯವಸಾಯ ಮಾಡುತ್ತಿರುವ ರೈತರ ವಿರುದ್ದ ಯಾವುದೇ ಕ್ರಮವನ್ನು ಜರುಗಿಸಬಾರದು
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಅನ್ವಯ ಸರ್ಕಾರ ಈ ಹಿಂದೆ ನೀಡಿದ್ದ ಎಲ್ಲಾ ಆದೇಶಗಳನ್ನು ವಾಪಾಸ್‌ ಪಡೆಯಲಾಗಿದೆ.
  • ಮುಖ್ಯಮಂತ್ರಿ ಆದೇಶವಿದ್ದಾಗ್ಯೂ ಮೇಲಾಧಿಕಾರಿಗಳ ಅನುಮತಿ, ಅನುಮೋದನೆ ಪಡೆಯದೇ ಆದೇಶ ಹೊರಡಿಸಿದ ಅಧಿಕಾರಿಯ ವಿರುದ್ದ ಸೂಕ್ತ ಶಿಸ್ತು ಕ್ರಮವನ್ನೂ ಕೈಗೊಳ್ಳಲಾಗುವುದು. ಈ ಕುರಿತು ಮುಖ್ಯಮಂತ್ರಿಗಳು ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

ವಕ್ಫ್‌ ಆಸ್ತಿ ವಿಚಾರವಾಗಿ ಕರ್ನಾಟಕ ಕಂದಾಯ ಇಲಾಖೆ ಹೊರಡಿಸಿರುವ ಆದೇಶ
ವಕ್ಫ್‌ ಆಸ್ತಿ ವಿಚಾರವಾಗಿ ಕರ್ನಾಟಕ ಕಂದಾಯ ಇಲಾಖೆ ಹೊರಡಿಸಿರುವ ಆದೇಶ
Whats_app_banner