Karnataka Vidhya Nidhi Scholarships: ಮೀನುಗಾರರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಗಳಿಗೆ ಅರ್ಜಿ ಆಹ್ವಾನ, ಏನೆಲ್ಲಾ ಸೌಲಭ್ಯಗಳಿವೆ
Karnataka Vidhya Nidhi Scholarships ಕರ್ನಾಟಕ ಸರ್ಕಾರದ ಮೀನುಗಾರಿಕೆ ಇಲಾಖೆಯು ಮೀನುಗಾರರು ಹಾಗೂ ಮೀನು ಕೃಷಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನಗಳನ್ನು ನೀಡಲಿದ್ದು, ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಬೆಂಗಳೂರು: ಸರ್ಕಾರದ ಆದೇಶದಂತೆ 2022-23 ನೇ ಸಾಲಿನಿಂದ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮವನ್ನು ಮೀನುಗಾರರ, ಮೀನು ಕೃಷಿಕರ ಮಕ್ಕಳಿಗೂ ವಿಸ್ತರಿಸಿದ್ದು, ದಕ್ಷಿಣ, ಉತ್ತರ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಕರ್ನಾಟಕದ ಸಕ್ರಿಯ ಮೀನುಗಾರರು/ ಮೀನುಕೃಷಿಕರ ಮಕ್ಕಳ 8 ರಿಂದ 10ನೇ ತರಗತಿವರೆಗೆ (ಹೆಣ್ಣು ಮಕ್ಕಳಿಗೆ ಮಾತ್ರ) ಮತ್ತು ಎಸ್‍ಎಲ್‍ಎಲ್‍ಸಿ ಪಿಯುಸಿ ಮತ್ತು ನಂತರದ ಕೋರ್ಸ್‌ಗಳಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು, ಮುಖ್ಯಮಂತ್ರಿ ಮೀನುಗಾರರ ವಿದ್ಯಾನಿಧಿ ಯೋಜನೆಯಡಿ(Karnataka Vidhya Nidhi Scholarships) ವಿದ್ಯಾರ್ಥಿವೇತನ ಪಡೆಯಲು STATE SCHOLARSHIP PORTAL ನಲ್ಲಿ ಹೆಸರು ನೋಂದಾಯಿಸಿ ಅರ್ಜಿ ಸಲ್ಲಿಸಬೇಕು.
ಶಿಷ್ಟವೇತನ ಯೋಜನೆಯ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲೆಗಳು ಹಾಗೂ ತಾಲ್ಲೂಕು ಕೇಂದ್ರಗಳಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ರೈತರ, ಮೀನುಗಾರರಿಗೆ ಮತ್ತು ನೇಕಾರ ಸಮುದಾಯಗಳ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ 2 ಸಾವಿರದಿಂದ 11 ಸಾವಿರದವರೆಗೆ ವಿದ್ಯಾರ್ಥಿ ವೇತನ ನೀಡಲಿದೆ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ 080 22864681 ಸಂಪರ್ಕಿಸಬಹುದು.
ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧನ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 16 ಕೊನೆಯ ದಿನವಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಭಾವಚಿತ್ರ, ದ್ವಿತೀಯ ಪಿಯುಸಿ ಅಂಕಪಟ್ಟಿ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ ಇರಬೇಕು.
ಪದವಿ/ಸ್ನಾತಕೋತ್ತರ ಪದವಿ/ಕೃಷಿ/ಪಶುಸಂಗೋಪನೆ, ಎಂಜಿನಿಯರಿಂಗ್/ ಮೆಡಿಕಲ್ ವಿದ್ಯಾರ್ಥಿಗಳಿಗೆ ಅಭ್ಯರ್ಥಿಯ ಭಾವಚಿತ್ರ, ಎಲ್ಲಾ ಸೆಮ್‍ಗಳ ಅಂಕಪಟ್ಟಿ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ.
ವಿದ್ಯಾರ್ಥಿಗಳು www.sw.kar.nic.in ನಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್‍ಫ್ರೀ ದೂ.ಸಂ. 080-22634300, 080-22353757 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.