ಕನ್ನಡ ಸುದ್ದಿ  /  Karnataka  /  Karnataka Govt Employees Strike Ends After Cm Bommai Announces 17 Percent Salary Hike

Karnataka Govt Employees Strike: ಶೇಕಡ 17 ವೇತನ ಹೆಚ್ಚಳಕ್ಕೆ ಸ್ವಾಗತ, ಮುಷ್ಕರ ಹಿಂಪಡೆದ ಕರ್ನಾಟಕದ ಸರಕಾರಿ ನೌಕರರು

ಕರ್ನಾಟಕ ಸರಕಾರವು ಶೇಕಡ 17ರಷ್ಟು ವೇತನ ಹೆಚ್ಚಳ ಮಾಡಿರುವ ಆದೇಶವನ್ನು ಒಪ್ಪಿಕೊಂಡಿರುವ ಸರಕಾರಿ ನೌಕರರು ಮುಷ್ಕರ ಹಿಂಪಡೆದಿದ್ದಾರೆ.

ವಿಧಾನಸೌಧ
ವಿಧಾನಸೌಧ

ಬೆಂಗಳೂರು: ಕರ್ನಾಟಕ ಸರಕಾರವು ಶೇಕಡ 17ರಷ್ಟು ವೇತನ ಹೆಚ್ಚಳ ಮಾಡಿರುವ ಆದೇಶವನ್ನು ಒಪ್ಪಿಕೊಂಡಿರುವ ಸರಕಾರಿ ನೌಕರರು ಮುಷ್ಕರ ವಾಪಸ್‌ ಪಡೆದಿದ್ದಾರೆ.

"ನೌಕರರ ವೇತನ ಶೇಕಡ 17ರಷ್ಟು ಹೆಚ್ಚಳ ಮಾಡುವ ಕುರಿತು ಸರಕಾರದಿಂದ ಆದೇಶ ಪಡೆದಿದ್ದೇವೆ. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ನಡೆಸಲಾಗಿತ್ತು. ಸರಕಾರ ಇದೀಗ ಆದೇಶ ನೀಡಿದೆ. ಹೀಗಾಗಿ, ಮುಷ್ಕರ ಕೈಬಿಡಲು ನಿರ್ಧರಿಸಿದ್ದೇವೆ" ಎಂದು ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ.

ಇವರು ಮೊದಲು ವಿಧಾನಸೌಧದದಲ್ಲಿ ಅಧಿಕಾರಿಗಳನ್ನು ಭೇಟಿಯಾಗಿ ಆದೇಶ ಪಡೆದುಕೊಂಡಿದ್ದಾರೆ. ಬಳಿಕ ಕಬ್ಬನ್‌ ಪಾರ್ಕ್‌ನಲ್ಲಿರುವ ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮುಷ್ಕರ ಕೈಬಿಟ್ಟಿರುವ ವಿಷಯ ತಿಳಿಸಿದ್ದಾರೆ. ಎಲ್ಲರೂ ಕರ್ತವ್ಯಕ್ಕೆ ಹಾಜರಾಗುವಂತೆಯೂ ಈ ಸಂದರ್ಭದಲ್ಲಿ ಸೂಚಿಸಿದ್ದಾರೆ.

ಏಳನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಇಂದು ಸರಕಾರಿ ನೌಕರರು ಮುಷ್ಕರ ನಡೆಸಿದ್ದರು. ಇದರಿಂದ ರಾಜ್ಯ ಸರಕಾರಿ ಕಚೇರಿಗಳ ಸೇವೆಯಲ್ಲಿ ವ್ಯತ್ಯಯವಾಗಿತ್ತು.

ಸರ್ಕಾರಿ ನೌಕರರಿಗೆ ಶೇ 17 ರಷ್ಟು ವೇತನ ಹೆಚ್ಚಳಕ್ಕೆ ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ 17 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.

“ಈ ಕುರಿತು ತಕ್ಷಣವೇ ಆದೇಶ ಹೊರಬೀಳಲಿದೆ. ಎನ್.ಪಿ.ಎಸ್ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ಇದೆ, ಅದರ ಆರ್ಥಿಕ ಪರಿಣಾಮ ಇವುಗಳ ಕುರಿತು ಅಧ್ಯಯನ ಕೈಗೊಂಡು ವರದಿ ನೀಡಲು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು” ಎಂದರು.

ಸರ್ಕಾರಿ ನೌಕರರು ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದ್ದರು.

ಇದೀಗ ಆದೇಶ ಹೊರಡಿಸಲಾಗಿದ್ದು, ಸರಕಾರಿ ನೌಕರರು ಮುಷ್ಕರ ಕೈಬಿಟ್ಟಿದ್ದಾರೆ.

ಸರ್ಕಾರಿ ನೌಕರರ ಜೊತೆ ಸೌಹಾರ್ದಯುತ ಸಭೆ ನಡೆದಿದ್ದು ಸೌಹಾರ್ದಯುತವಾಗಿ ಸಮಸ್ಯೆ ಬಗೆ ಹರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿನ್ನೆ ಹೇಳಿದ್ದರು.

ನಮ್ಮ ಹಿರಿಯ ಅಧಿಕಾರಿಗಳ ಜೊತೆ ಹಾಗೂ ನೌಕರರ ಸಂಘದವರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದೇವೆ. ಅವರು ಹಲವಾರು ವಿಷಯ ಪ್ರಸ್ತಾಪ ಮಾಡಿದ್ದಾರೆ. ಸಾಕಷ್ಟು ವಿಷಯ ಚರ್ಚೆಯಾಗಿದೆ. ಅವರು ಯಾವುದಾದರೂ ಒಂದು ತೀರ್ಮಾನಕ್ಕೆ ಬಂದ‌ಮೇಲೆ ನಮ್ಮ ಹಣಕಾಸಿನ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಲಿದೆ. ನಮ್ಮ ಮಾತುಕತೆಯ ಆಧಾರದ ಮೇಲೆ ಮಾತುಕತೆ ಸೌಹಾರ್ದಯುತವಾಗಿ ಮುಕ್ತಾಯವಾಗುವ ವಿಶ್ಬಾಸ ಇದೆ ಎಂದು ಅವರು ಹೇಳಿದ್ದರು.

ಅವರು ಪದಾಧಿಕಾರಿಗಳ ಜೊತೆ ಚರ್ಚಿಸಿ ನಿರ್ಣಯ ತಿಳಿಸುವುದಾಗಿ ಹೇಳಿದ್ದಾರೆ. ಅವರ ನಿರ್ಣಯದ ಆಧಾರದ ಮೇಲೆ ನಾವು ಮಿರ್ಣಯ ಕೈಗೊಳ್ಳುತ್ತೇವೆ. ವೇತನ ಆಯೋಗಕ್ಕೆ ಆದಷ್ಟು ಬೇಗ ಮಧ್ಯಂತರ ವರದಿ ನೀಡುವಂತೆ ಕೇಳಿದ್ದೇವೆ. ಆದಷ್ಟು ಬೇಗ ವರದಿ ಬರುವ ವಿಶ್ವಾಸ ಇದೆ ಎಂದು ಹೇಳಿದರು. ಕೊವಿಡ್ ಸಮಯದಲ್ಲಿ ಸರ್ಕಾರ ಅವರ ಸಂಬಳ ಕಡಿತ ಮಾಡಿಲ್ಲ. ಅಲ್ಲದೇ 24 ಗಂಟೆಯಲ್ಲಿ ಡಿಎ ಹೆಚ್ಚಳ ಮಾಡಿದ್ದೇವೆ. ಅದನ್ನು ಅವರು ಅಪ್ರಿಸಿಯೇಟ್ ಮಾಡಿದ್ದಾರೆ. ಮಾತುಕತೆಯ ಆಧಾರದಲ್ಲಿ ಅವರ ನಿರ್ಣಯದ ಆಧಾರದ ಮೇಲೆ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಲಿದೆ ಎಂದಿದ್ದರು.

IPL_Entry_Point