ಸಿವಿಲ್ ಪ್ರಕರಣಗಳಲ್ಲಿ ರಾಜಿ ಸಂಧಾನ ಕಡ್ಡಾಯ, ಕೇಂದ್ರ ಕಾನೂನು ಸಿಪಿಸಿಗೆ ರಾಜ್ಯ ತಿದ್ದುಪಡಿ; ಸಚಿವ ಎಚ್‌ಕೆ ಪಾಟೀಲರು ಹೇಳಿದ 4 ಮುಖ್ಯ ಅಂಶಗಳು
ಕನ್ನಡ ಸುದ್ದಿ  /  ಕರ್ನಾಟಕ  /  ಸಿವಿಲ್ ಪ್ರಕರಣಗಳಲ್ಲಿ ರಾಜಿ ಸಂಧಾನ ಕಡ್ಡಾಯ, ಕೇಂದ್ರ ಕಾನೂನು ಸಿಪಿಸಿಗೆ ರಾಜ್ಯ ತಿದ್ದುಪಡಿ; ಸಚಿವ ಎಚ್‌ಕೆ ಪಾಟೀಲರು ಹೇಳಿದ 4 ಮುಖ್ಯ ಅಂಶಗಳು

ಸಿವಿಲ್ ಪ್ರಕರಣಗಳಲ್ಲಿ ರಾಜಿ ಸಂಧಾನ ಕಡ್ಡಾಯ, ಕೇಂದ್ರ ಕಾನೂನು ಸಿಪಿಸಿಗೆ ರಾಜ್ಯ ತಿದ್ದುಪಡಿ; ಸಚಿವ ಎಚ್‌ಕೆ ಪಾಟೀಲರು ಹೇಳಿದ 4 ಮುಖ್ಯ ಅಂಶಗಳು

ಸಿವಿಲ್ ಪ್ರಕರಣಗಳಲ್ಲಿ ರಾಜಿ ಸಂಧಾನ ಕಡ್ಡಾಯ ಮಾಡಲಾಗಿದ್ದು, ಕೇಂದ್ರ ಕಾನೂನು ಸಿಪಿಸಿಗೆ ರಾಜ್ಯ ತಿದ್ದುಪಡಿಗೆ ರಾಷ್ಟ್ರಪತಿಯವರ ಅಂಕಿತ ಬಿದ್ದಿದೆ ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪ್ರಕರಣ ದಾಖಲಾದ ದಿನ ಅಂತಿಮ ತೀರ್ಪಿನ ದಿನಾಂಕ ನಿರ್ಣಯ ಮಾಡುವ ರೀತಿಯಲ್ಲಿ ಸಿಪಿಸಿಗೆ ಚರಿತ್ರಾರ್ಹ ತಿದ್ದುಪಡಿ ಮಾಡಿರುವುದು ಗಮನಾರ್ಹ ಎಂದರು.

ಸಿವಿಲ್ ಪ್ರಕರಣಗಳಲ್ಲಿ ರಾಜಿ ಸಂಧಾನ ಕಡ್ಡಾಯ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದ ತಿದ್ದುಪಡಿ ಕಾನೂನಿಗೆ ರಾಷ್ಟ್ರಪತಿಯವರು ಅಂಕಿತ ಹಾಕಿದ್ದಾರೆ ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ತಿಳಿಸಿದರು.
ಸಿವಿಲ್ ಪ್ರಕರಣಗಳಲ್ಲಿ ರಾಜಿ ಸಂಧಾನ ಕಡ್ಡಾಯ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದ ತಿದ್ದುಪಡಿ ಕಾನೂನಿಗೆ ರಾಷ್ಟ್ರಪತಿಯವರು ಅಂಕಿತ ಹಾಕಿದ್ದಾರೆ ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ತಿಳಿಸಿದರು.

ಬೆಂಗಳೂರು: ಕೇಂದ್ರದ ಕಾನೂನು ಸಿವಿಲ್ ಪ್ರಕ್ರಿಯಾ ಸಂಹಿತೆಗೆ (ಸಿಪಿಸಿ)ಗೆ ಕರ್ನಾಟಕ ಸರ್ಕಾರ ತಿದ್ದುಪಡಿಗಳನ್ನು ಮಾಡಿದ್ದು, ಈ ತಿದ್ದುಪಡಿಗಳು ರಾಷ್ಟ್ರದ ಕಾನೂನು ಪ್ರಕಾರವೇ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುತ್ತವೆ. ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆಗಾಗಿ ಈ ತಿದ್ದುಪಡಿ ಮಾಡಲಾಗಿದೆ. ಶಾಸಕಾಂಗ ಮಾಡಿದ ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು

ಕೇಂದ್ರ ಕಾನೂನು ಸಿಪಿಸಿಗೆ ರಾಜ್ಯ ತಿದ್ದುಪಡಿ; ಸಚಿವ ಎಚ್‌ಕೆ ಪಾಟೀಲರು ಹೇಳಿದ 4 ಮುಖ್ಯ ಅಂಶಗಳು

1). ದೇಶದಲ್ಲಿಯೇ ಮೊದಲ ಬಾರಿ ಕರ್ನಾಟಕದಲ್ಲಿ ಶೀಘ್ರ ನ್ಯಾಯದಾನಕ್ಕೆ ದಿಟ್ಟ ಹೆಜ್ಜೆ

2). ಕರ್ನಾಟಕದಲ್ಲಿ ಬಡ ಕಕ್ಷಿದಾರರಿಗೆ ಶೀಘ್ರ ನ್ಯಾಯ ದೊರಕಿಸಲು ಸಿಪಿಸಿ ಕಾನೂನಿನಲ್ಲಿ ಮಹತ್ವದ ಬದಲಾವಣೆ

3). ಕರ್ನಾಟಕದ ಕಕ್ಷಿದಾರರಲ್ಲಿ ರಾಜಿ ಸಂಧಾನದ ಮುಖಾಂತರ ನ್ಯಾಯ ಬಗೆಹರಿಸಲು ಅನುಕೂಲಿಸಲು ದೇಶದಲ್ಲಿಯೇ ಮೊದಲ ಬಾರಿಗೆ ಸಿಪಿಸಿ ಕಾನೂನಿಗೆ ಮಹತ್ವದ ಬದಲಾವಣೆ

4). ಕರ್ನಾಟಕದಲ್ಲಿ ನಿರ್ದಿಷ್ಟ ಸಮಯ ಪಾಲನೆ ಯೊಂದಿಗೆ ಸಿವಿಲ್ ಪ್ರಕರಣಗಳ ಇತ್ಯರ್ಥಕ್ಕೆ ಸಿಪಿಸಿ ಕಾನೂನಿನಲ್ಲಿ ದೇಶದಲ್ಲಿಯೇ ಮೊದಲ ಬಾರಿ ಮಹತ್ತರ ಬದಲಾವಣೆ

ಸಿವಿಲ್ ಪ್ರಕರಣಗಳಲ್ಲಿ ರಾಜಿ ಸಂಧಾನ ಕಡ್ಡಾಯ, ಐತಿಹಾಸಿಕ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಸಿವಿಲ್ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣ ಇತ್ಯರ್ಥವಾಗುವುದಕ್ಕೆ ದಶಕಗಳ ಕಾಲ ಕಾಯುವ ಅಥವಾ ವಿಳಂಬ ಕೊನೆಗೊಳಿಸುವುದಕ್ಕೆ ಕರ್ನಾಟಕದ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಸಿವಿಲ್ ಪ್ರಕ್ರಿಯಾ ಸಂಹಿತೆಗೆ ಕರ್ನಾಟಕ ಸರ್ಕಾರ ಮಾಡಿರುವ ಕ್ರಾಂತಿಕಾರಕ ತಿದ್ದುಪಡಿಗೆ ರಾಷ್ಟ್ರಪತಿಯವರ ಅಂಕಿತ ಸಿಕ್ಕಿದೆ. ಇದು ಐತಿಹಾಸಿಕ ತಿದ್ದುಪಡಿ. ಇದು ಈ ಕೂಡಲೇ ಜಾರಿಗೆ ಬರಲಿದೆ.

ಇದರಂತೆ, ಸಿವಿಲ್ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವುದಕ್ಕೆ ಕಡ್ಡಾಯವಾಗಿ ಪ್ರಯತ್ನಿಸಬೇಕು. ಎರಡು ತಿಂಗಳ ಒಳಗಾಗಿ ರಾಜಿ ಸಂಧಾನ ಪ್ರಯತ್ನ ತಾರ್ಕಿಕ ಅಂತ್ಯ ಕಾಣಬೇಕು. ಸಾಧ್ಯವಾಗದೇ ಇದ್ದರೆ ಮಾತ್ರವೇ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗೆ ಎತ್ತಿಕೊಳ್ಳಬೇಕು ಎಂಬ ಅಂಶ ತಿದ್ದುಪಡಿಯಲ್ಲಿದೆ ಎಂದು ಸಚಿವ ಎಚ್‌ಕೆ ಪಾಟೀಲ ವಿವರಿಸಿದರು.

ನ್ಯಾಯಾಲಯಗಳ ಕಲಾಪಗಳಲ್ಲಿ ವಿಳಂಬವಾಗುವುದನ್ನು ತಪ್ಪಿಸುವುದಕ್ಕಾಗಿ ಮತ್ತು ನ್ಯಾಯದಾನ ಪ್ರಕ್ರಿಯೆಯಲ್ಲಿ ಚರಿತ್ರಾರ್ಹ ಸುಧಾರಣೆ ತರುವುದಕ್ಕಾಗಿ ಶಾಸನಾತ್ಮಕ ಅಂಕುಶ ಹೊಂದಿರುವ ಈ ತಿದ್ದುಪಡಿ ತರಲಾಗಿದೆ. ಇದರಂತೆ, ಪ್ರಕರಣ ದಾಖಲಾದ ದಿನಾಂಕದಿಂದ 24 ತಿಂಗಳ ಒಳಗೆ ಯಾವುದೇ ಸಿವಿಲ್ ಪ್ರಕರಣ ಇತ್ಯರ್ಥವಾಗಿ ತಾರ್ಕಿಕ ಅಂತ್ಯಕಾಣಬೇಕು.

ಕಳೆದ ಬೆಳಗಾವಿ ಅಧಿವೇಶನದಲ್ಲಿ ಅಂದರೆ 2024ರ ಡಿಸೆಂಬರ್ 17 ರಂದು ವಿಧಾನಸಭೆ ಅಧಿವೇಶನದಲ್ಲಿ, ಡಿಸೆಂಬರ್ 18 ರಂದು ವಿಧಾನ ಪರಿಷತ್‌ ಅಧಿವೇಶನದಲ್ಲಿ ಈ ಕಾನೂನು ಅಂಗೀಕರಿಸಲಾಗಿತ್ತು. ಅದಾದ ನಂತರದಲ್ಲಿ ಕರ್ನಾಟಕದ ರಾಜ್ಯಪಾಲರು ಈ ವಿಧೇಯಕವನ್ನು ಸಂವಿಧಾನದ ಅನುಚ್ಛೇದ 200 ಮತ್ತು 254 ರ ಪ್ರಕಾರ ರಾಷ್ಟ್ರಪತಿಯವರ ಅಂಕಿತಕ್ಕೆ ಕಳುಹಿಸಿದ್ದರು. ಅವರು ಈ ತಿದ್ದುಪಡಿ ಮಸೂದೆಗೆ ಮೇ 19 ರಂದು ತಮ್ಮ ಅಂಕಿತ ಹಾಕಿದ್ದಾರೆ.

ಸಿಪಿಸಿ ತಿದ್ದುಪಡಿಯಲ್ಲಿ ಏನೇನು ಅಂಶಗಳು

ಪರಿಷ್ಕೃತ ಕಾನೂನು ಪ್ರಕಾರ, ಲಿಖಿತ ಹೇಳಿಕೆ, ಸಾಕ್ಷ್ಯ ಸಂಗ್ರಹ ಎಲ್ಲದಕ್ಕೂ ಕಾಲಮಿತಿ ನಿಗದಿಪಡಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಯಾವುದೇ ಹಂತದಲ್ಲಿ ಒಂದು ತಿಂಗಳಲ್ಲಿ ಕೇವಲ 3 ಮುಂದೂಡಿಕೆ ಅಥವಾ 3 ದಿನಾಂಕಗಳ ವಾಯಿದೆಗೆ ಮಾತ್ರ ಅವಕಾಶ. ಯಾವುದೇ ಹಂತದಲ್ಲಿ ಅರ್ಜಿದಾರ-ಪ್ರತಿವಾದಿ ಈ ಅವಕಾಶದಲ್ಲಿ ಸಲ್ಲಿಸದಿದ್ದರೆ, ಅಂಥವರ ಹೇಳಿಕೆಗಳನ್ನು ಶೂನ್ಯವೆಂದು ಪರಿಗಣಿಸಲಾಗುತ್ತದೆ.

ಪ್ರಕರಣ ನಿರ್ವಹಣೆಯನ್ನು ಮರುವ್ಯಾಖ್ಯಾನಿಸಲಾಗಿದ್ದು, ಸಾಕ್ಷ್ಯಗಳ ವಿಚಾರಣೆಗಳನ್ನು ನಿಗದಿತ ದಿನಾಂಕದಂದು ಕೈಗೊಳ್ಳಲು ಮತ್ತು ದೈನಂದಿನ ಅಥವಾ ಸಾಪ್ತಾಹಿಕ ಆಧಾರದಲ್ಲಿ ನಿರ್ವಹಿಸಬೇಕು. ಹೀಗಾಗಿ, ಯಾವುದೇ ಪ್ರಕರಣ ಅನಿರ್ದಿಷ್ಟಕಾಲ ಮುಂದೂಡಲಾಗದು. ಈಗ ಈ ಕಾನೂನು ಜನಪರವಾಗಿ ರೂಪುಗೊಂಡಿದೆ ಎಂದು ಸಚಿವ ಎಚ್‌ಕೆ ಪಾಟೀಲ ಹೇಳಿದರು.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.