ಕನ್ನಡ ಸುದ್ದಿ  /  ಕರ್ನಾಟಕ  /  Narayana Guru: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಿದ ರಾಜ್ಯ ಸರಕಾರ

Narayana Guru: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಿದ ರಾಜ್ಯ ಸರಕಾರ

Shree Narayana Guru Nigama: ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ.

 ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಿದ ರಾಜ್ಯ ಸರಕಾರ
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಿದ ರಾಜ್ಯ ಸರಕಾರ (Online)

ಬೆಂಗಳೂರು: ಪ್ರವರ್ಗ 2ಎಯ ಕ್ರಮಸಂಖ್ಯೆ 4(a)ಯಿಂದ z ವರೆಗೆ ಈಡಿಗ ಬಿಲ್ಲವ ಸೇರಿದಂತೆ ನಮೂದಾಗಿರುವ ಒಟ್ಟು 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಷಾಹೀನ್‌ ಪರ್ವೀನ್‌ ಕೆ. ತಿಳಿಸಿದ್ದಾರೆ. ಅವರು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ಕರ್ನಾಟಕ ಸರಕಾರದ ನಡವಳಿಗಳಲ್ಲಿ ಆದೇಶ ಪ್ರಕಟಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ. ""ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ." ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ವಟ್ಟಿಯನ್ನು ಹೊರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪವರ್ಗ 2ಎ'ಯ ಕ್ರಮಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಪವರ್ಗ 2'ಎ'ರಲ್ಲಿ ಕ್ರಮಸಂಖ್ಯೆ 4(a)ಯಿಂದ (2) ವರೆಗೆ ಈಡಿಗ-ಬಿಲ್ಲವ ಸೇರಿದಂತೆ ನಮೂದಾಗಿರುವ ಒಟ್ಟು 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.

ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಮನ್ನಿಸಿ.. ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇತ್ತೀಚೆಗೆ ಟ್ವೀಟ್‌ ಮಾಡಿದ್ದರು.

ಇತ್ತೀಚೆಗೆ ಮಂಡನೆಯಾದ ಬಜೆಟ್‌ನಲ್ಲಿ ಈಡಿಗ, ಬಿಲ್ಲವ ಸೇರಿದಂತೆ ಇಪ್ಪತ್ತಾರು ಉಪಪಂಗಡಗಳ ಶ್ರೀ ನಾರಾಯಣ ಗುರು ನಿಗಮ ಸ್ಥಾಪನೆ ಕುರಿತು ಉಲ್ಲೇಖಿಸಿರಲಿಲ್ಲ. ಇದರಿಂದ ಈಡಿಗ/ಬಿಲ್ಲವ ಸಮಾಜದಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಇದಕ್ಕೆ ಸಂಬಂಧಪಟ್ಟಂತೆ ಕೆಲವು ದಿನಗಳ ಹಿಂದೆ ಬಿಲ್ಲವ ಸಮಾಜದ ಗಣ್ಯರ ತಂಡವೊಂದು ಇಂಧನ ಸಚಿವ ಸುನಿಲ್‌ ಕುಮಾರ್‌ ಮತ್ತು ಶಾಸಕ ರಘುಪತಿ ಭಟ್‌ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಬೇಟಿಯಾಗಿ ಮನವಿ ಸಲ್ಲಿಸಿತ್ತು. ಬಜೆಟ್‌ನಲ್ಲಿ ಈ ಕುರಿತು ಮಂಡಿಸುವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಆದರೆ, ಮೊನ್ನೆ ಮಂಡಿಸಿದ ಬಜೆಟ್‌ನಲ್ಲಿ ಈ ವಿಚಾರ ಇರಲಿಲ್ಲ. ಇದೀಗ ನಿಗಮ ಸ್ಥಾಪಿಸಿ ಆದೇಶ ಹೊರಡಿಸಲಾಗಿದೆ.

IPL_Entry_Point