ಕನ್ನಡ ಸುದ್ದಿ  /  Karnataka  /  Karnataka Hc Orders Dcs To Appear In Court For False Info On Burial Grounds

Court News: ಪ್ರತಿ ಗ್ರಾಮದಲ್ಲಿ ಸ್ಮಶಾನಕ್ಕೆ ಜಮೀನು; ಸುಳ್ಳು ಮಾಹಿತಿ ನೀಡಿದ ಡಿಸಿಗಳಿಗೆ ಈಗ ಸಂಕಷ್ಟ- ಕೋರ್ಟ್‌ಗೆ ಹಾಜರಾಗಲು ಸೂಚನೆ

Court News: ಸುಳ್ಳು ಮಾಹಿತಿ ನೀಡಿದ ಡಿಸಿಗಳ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡುವುದು ನ್ಯಾಯಾಂಗ ನಿಂದನೆ ಮತ್ತು ವಂಚನೆಯಾಗಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಅಲ್ಲದೆ, ಅರ್ಜಿಯ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದೆ.

ಕರ್ನಾಟಕ ಹೈಕೋರ್ಟ್‌
ಕರ್ನಾಟಕ ಹೈಕೋರ್ಟ್‌ (HT)

ಬೆಂಗಳೂರು: ಪ್ರತಿ ಗ್ರಾಮದಲ್ಲಿ ಸ್ಮಶಾನಕ್ಕೆ ಭೂಮಿ ಒದಗಿಸಿದ ಬಗ್ಗೆ ಸುಳ್ಳು ಮಾಹಿತಿ ನೀಡಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈಗ ಸಂಕಷ್ಟ ಎದುರಾಗಿದೆ. ಈ ರೀತಿ ಸುಳ್ಳು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು ಮಾರ್ಚ್‌ 17ರಂದು ಕೋರ್ಟ್‌ಗೆ ಹಾಜರಾಗಬೇಕು ಎಂದು ಕರ್ನಾಟಕ ಹೈಕೋರ್ಟ್‌ ಗುರುವಾರ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಬಿ ವೀರಪ್ಪ ಮತ್ತು ಟಿ ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ನೀಡಿದೆ.

ಮೊಹಮ್ಮದ್ ಇಕ್ಬಾಲ್ ಎಂಬುವವರು ಸಲ್ಲಿಸಿರುವ ನಾಗರಿಕ ನಿಂದನೆ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದ್ದ ವೇಳೆ ಈ ನಿರ್ದೇಶನ ನೀಡಿದೆ. ಹೈಕೋರ್ಟ್‌ 2019ರಲ್ಲಿ ನೀಡಿದ ಆದೇಶ ಪ್ರಕಾರ ಆರು ವಾರಗಳಲ್ಲಿ ಕರ್ನಾಟಕದ ಎಲ್ಲ ಗ್ರಾಮಗಳಲ್ಲೂ ಸ್ಮಶಾನಕ್ಕೆ ಭೂಮಿ ಒದಗಿಸಬೇಕಾಗಿತ್ತು. ಆದರೆ ರಾಜ್ಯ ಸರ್ಕಾರ ಇದನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಇಕ್ಬಾಲ್‌ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ಹಿಂದಿನ ವಿಚಾರಣೆ ಜನವರಿಯಲ್ಲಿ ನಡೆದಾಗ, ರಾಜ್ಯದ 29,616 ಗ್ರಾಮಗಳ ಪೈಕಿ 27,903 ಗ್ರಾಮಗಳಿಗೆ ಈಗಾಗಲೇ ಸ್ಮಶಾನ ಭೂಮಿಯನ್ನು ಒದಗಿಸಲಾಗಿದೆ ಮತ್ತು 319 ಗ್ರಾಮಗಳಿಗೆ ಮಾತ್ರ ಭೂಮಿಯನ್ನು ನೀಡಬೇಕಾಗಿದೆ. 56 ಗ್ರಾಮಗಳಲ್ಲಿ ಸ್ಮಶಾನದ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ. 1,394 ಗ್ರಾಮಗಳಲ್ಲಿ ಜನವಸತಿಯಿಲ್ಲ ಎಂದು ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ಅಫಿಡವಿಟ್‌ ಸಲ್ಲಿಸಿದ್ದರು.

ಆದರೆ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಈ ಸಲ್ಲಿಕೆಗಳನ್ನು ಪರಿಶೀಲಿಸಿದ್ದು, ಸರ್ಕಾರವು ಸುಳ್ಳು ಮಾಹಿತಿ ನೀಡಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

ಕೆಎಸ್‌ಎಲ್‌ಎಸ್‌ಎ ಪ್ರಕಾರ, ಒಟ್ಟು 2,041 ಗ್ರಾಮಗಳಿಗೆ ಇನ್ನೂ ಸ್ಮಶಾನಕ್ಕೆ ಭೂಮಿ ನೀಡಬೇಕಿದೆ. ಆದರೆ ಪ್ರತಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನೀಡಿದ ಮಾಹಿತಿಯನ್ನು ಕೋರ್ಟ್‌ಗೆ ಸಲ್ಲಿಸಿರುವಂಥದ್ದು ಎಂದು ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದರು.

ಸುಳ್ಳು ಮಾಹಿತಿ ನೀಡಿದ ಡಿಸಿಗಳ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡುವುದು ನ್ಯಾಯಾಂಗ ನಿಂದನೆ ಮತ್ತು ವಂಚನೆಯಾಗಿದೆ ಎಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಅಲ್ಲದೆ, ಅರ್ಜಿಯ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದೆ.‌

ಗಮನಿಸಬಹುದಾದ ಸುದ್ದಿಗಳು

ಅಕ್ರಮ ಹಣ ವರ್ಗಾವಣೆ ಕೇಸ್;‌ ED ದೆಹಲಿ ಕಚೇರಿಗೆ ಹಾಜರಾದ ಜಮೀರ್‌ ಅಹ್ಮದ್

Money laundering case:‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಕಾಂಗ್ರೆಸ್ ಶಾಸಕ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಗುರುವಾರ ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ಕಚೇರಿಗೆ ಹಾಜರಾಗಿದ್ದರು. ಕಳೆದ ವರ್ಷ, ಕಾಂಗ್ರೆಸ್ ಶಾಸಕರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ಇಡಿ ವರದಿಯ ಆಧಾರದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಸಕರಿಗೆ ಸೇರಿದ ಐದು ಸ್ಥಳಗಳಲ್ಲಿ ಶೋಧ ನಡೆಸಿತ್ತು. ವಿವರ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

ಎರಡನೇ ಪತ್ನಿಯೂ ನಿಮ್ಮ ಮೊದಲ ಪತ್ನಿ‌ ಜತೆಗೆ ಒಂದೇ ಮನೆಯಲ್ಲಿದರೆ ಕಷ್ಟ; 2ನೇ ಪತ್ನಿಗೆ ಬೇರೆ ವಸತಿ ವ್ಯವಸ್ಥೆ ಮಾಡಿಕೊಡಿ-ಕೋರ್ಟ್‌

ಎರಡನೇ ಪತ್ನಿಯೂ ನಿಮ್ಮ ಮೊದಲ ಪತ್ನಿಯ ಜತೆಗೆ ಒಂದೇ ಮನೆಯಲ್ಲಿದ್ದರೆ ಕಷ್ಟವಾದೀತು. ಸಿವಿಲ್ ಮತ್ತು ಕ್ರಿಮಿನಲ್ ವ್ಯಾಜ್ಯಕ್ಕೂ ಕಾರಣವಾದೀತು. ಆದ್ದರಿಂದ ಎರಡನೇ ಪತ್ನಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಿಕೊಡಬೇಕು. ಅದಕ್ಕಾಗಿ ಆಕೆಗೆ ಪ್ರತಿ ತಿಂಗಳು 5,000 ರೂಪಾಯಿ ನೀಡಬೇಕು ಎಂದು ರಾಜ್ಯ ಹೈಕೋರ್ಟ್‌ ತೀರ್ಪು ನೀಡಿದೆ. ವಿವರ ಓದಿಗೆ ಇಲ್ಲಿ ಕ್ಲಿಕ್‌ ಮಾಡಿ