ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಿ ಎಂದು ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (HT_PRINT)

ಬೆಂಗಳೂರು: ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯು ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ರಾಜ್ಯದ ಮೂರು ಸ್ಥಳಗಳಲ್ಲಿ BMST ಅಡಿಯಲ್ಲಿ HLA ಪ್ರಯೋಗಾಲಯಗಳನ್ನು ಸ್ಥಾಪಿಸಲು KMC&RI ಮಾದರಿಯನ್ನು ಅನ್ವೇಷಿಸುಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.‌ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು. ಈ ಬಗ್ಗೆ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಏಕೆ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ ಸಚಿವರು, ಎಲ್ಲಾ ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರಗಳನ್ನು ಪ್ರಾರಂಭಿಸಿ ಎಂದರು.

ರಾಜ್ಯದಲ್ಲಿ ಅಂಗಾಂಗ ದಾನ ಮತ್ತು ಕಸಿ ಪ್ರಯತ್ನಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಪ್ರಮುಖ ನಿರ್ಧಾರಗಳನ್ನು ಸಚಿವರ ನೇತೃತ್ವದ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಜೀವಸಾರ್ಥಕತೆ ಸೊಸೈಟಿಯ ನೋಂದಣಿಯನ್ನು ನವೀಕರಿಸಲಾಗುವುದು ಮತ್ತು ಕಾರ್ಯಾಚರಣಾ ವಲಯಗಳ ಸಂಖ್ಯೆಯನ್ನು ಐದರಿಂದ ಏಳಕ್ಕೆ ವಿಸ್ತರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಲ್ಲದೇ ಸ್ಟೀರಿಂಗ್ ಸಮಿತಿಯನ್ನು ರಚಿಸುವುದರ ಜೊತೆಗೆ ಅಂಗಾಂಗ ವಿತರಣೆ ಸಮರ್ಪಕವಾಗಿ ಒದಗಿಸಲು ಮೂತ್ರಪಿಂಡ ಹಂಚಿಕೆ ನೀತಿಯನ್ನು ಸಹ ಪರಿಷ್ಕರಿಸಲು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in