ಕನ್ನಡ ಸುದ್ದಿ  /  Karnataka  /  Karnataka High Court Directs Kea To Consider 50% Puc Marks For Repeater Students On Kcet Row

KCET row: ಕೆಇಎ ಆದೇಶ ರದ್ದು, ಹೊಸ ರ್‍ಯಾಂಕ್ ಪಟ್ಟಿ ಪ್ರಕಟಿಸಲು ಹೈಕೋರ್ಟ್‌ ಸೂಚನೆ, ಪುನಾರವರ್ತಿತ ವಿದ್ಯಾರ್ಥಿಗಳಿಗೆ ಜಯ

KCET row: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ 2020-21ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ಗಳಿಸಿದ ಶೇಕಡ 50 ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿರುವ ಶೇಕಡ 50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ್‍ಯಾಂಕ್ ಪಟ್ಟಿ ಸಿದ್ಧಪಡಿಸಬೇಕುʼʼ ಎಂದು ಕೆಇಎಗೆ ರಾಜ್ಯ ಹೈಕೋರ್ಟ್‌ ಆದೇಶ ನೀಡಿದೆ.

KCET row: ಕೆಇಎ ಆದೇಶ ರದ್ದು, ಹೊಸ ರ್‍ಯಾಂಕ್ ಪಟ್ಟಿ ಪ್ರಕಟಿಸಲು ಹೈಕೋರ್ಟ್‌ ಸೂಚನೆ, ಪುನಾರವರ್ತಿತ ವಿದ್ಯಾರ್ಥಿಗಳಿಗೆ ಭಾಗಶಃ ಜಯ
KCET row: ಕೆಇಎ ಆದೇಶ ರದ್ದು, ಹೊಸ ರ್‍ಯಾಂಕ್ ಪಟ್ಟಿ ಪ್ರಕಟಿಸಲು ಹೈಕೋರ್ಟ್‌ ಸೂಚನೆ, ಪುನಾರವರ್ತಿತ ವಿದ್ಯಾರ್ಥಿಗಳಿಗೆ ಭಾಗಶಃ ಜಯ

KCET row: ಕರ್ನಾಟಕ ಶಿಕ್ಷಣ ಪ್ರಾಧಿಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಈ ಹಿಂದೆ ನೀಡಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಗೊಳಿಸಿದ್ದು, ಹೊಸ ಆದೇಶ ನೀಡಿದೆ. 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶದಿಂದ ವಂಚಿತರಾಗುವ ಆತಂಕದಲ್ಲಿದ್ದ 2020-21ನೇ ಸಾಲಿನ ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳ ನೆರವಿಗೆ ಕರ್ನಾಟಕ ಹೈಕೋರ್ಟ್‌ ಧಾವಿಸಿದ್ದು, ಈ ವಿದ್ಯಾರ್ಥಿಗಳ ಪರವಾಗಿ ತೀರ್ಪು ನೀಡಿದೆ.

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ 2020-21ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ಗಳಿಸಿದ ಶೇಕಡ 50 ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿರುವ ಶೇಕಡ 50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ್‍ಯಾಂಕ್ ಪಟ್ಟಿ ಸಿದ್ಧಪಡಿಸಬೇಕುʼʼ ಎಂದು ಕೆಇಎಗೆ ರಾಜ್ಯ ಹೈಕೋರ್ಟ್‌ ಆದೇಶ ನೀಡಿದೆ. 2020-21ನೇ ಸಾಲಿನ ಪಿಯು ಪರೀಕ್ಷಾ ಅಂಕಗಳನ್ನು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಲಾಗದು ಎಂದು ಕೆಇಎ 2022 ಜುಲೈ 30ರಂದು ಹೊರಡಿಸಿದ್ದ ಆದೇಶವನ್ನು ಈ ಮೂಲಕ ರದ್ದುಗೊಳಿಸಲಾಗಿದೆ.

ಕರ್ನಾಟಕ ಶಿಕ್ಷಣ ಪ್ರಾಧಿಕಾರದ ಕ್ರಮವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಆರ್. ಚಿಕ್ಕಬಳ್ಳಾಪುರದ ವೈ.ಎಚ್‌.ಕೀರ್ತನಾ, ಬೆಂಗಳೂರಿನ ಮನಸ್ವಿನಿ ಸೇರಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೈಕೋರ್ಟ್‌ಗೆ ದೂರು ನೀಡಿದ್ದರು. ಈ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ನಡೆಸಿ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯಪೀಠ ನಿನ್ನೆ ಈ ಕುರಿತು ತೀರ್ಪು ನೀಡಿದೆ.

ಎಲ್ಲ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಾಲಯ, 2022-23ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಬ್ಯಾಂಕಿಂಗ್ ಅನ್ನು ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರಕಾರಿ ಸೀಟುಗಳ ಪ್ರವೇಶಕ್ಕಾಗಿ ಕರ್ನಾಟಕ ಅಭ್ಯರ್ಥಿಗಳ ಆಯ್ಕೆ ನಿಯಮ- 2006'ರ (ಸಿಇಟಿ ನಿಯಮ-2006)ನಿಯಮ 3 ಮತ್ತು 4ರ ಅನ್ವಯ ಹೊಸದಾಗಿ ರಚನೆ ಮಾಡಲು ಸೂಚಿಸಿದೆ. 2020-21ನೇ ಸಾಲಿನಲ್ಲಿ ಪಿಯುಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಪಡೆದಿರುವ ಶೇ.50 ಅಂಕಗಳು ಮತ್ತು ಸಿಇಟಿಯಲ್ಲಿ ಪಡೆದ ಶೇ.50 ಅಂಕಗಳನ್ನು ಪರಿಗಣಿಸಿ ಹೊಸ ರ್‍ಯಾಂಕ್ ಪಟ್ಟಿ ಸಿದ್ಧಪಡಿಸಲು ಸೂಚಿಸಿದೆ.

"ಕೆಇಎ ಆದೇಶವು ಸ್ವಇಚ್ಛೆಯಿಂದ ಕೂಡಿದೆ. ಇದು ಅತಾರ್ಕಿಕವಾಗಿದೆ. ಸಿಇಟಿ-2022ರ ಮೌಲ್ಯಮಾಪನವು ಪುನಾರವರ್ತಿತ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡುವಂತೆ ಇದೆʼʼ ಎಂಬ ಅರ್ಜಿದಾರರ ವಾದವನ್ನು ಕೋರ್ಟ್‌ ಎತ್ತಿ ಹಿಡಿದಿದೆ. "ಪುನಾರವರ್ತಿತ ವಿದ್ಯಾರ್ಥಿಗಳ ಪಿಯು ಅಂಕಗಳನ್ನು ಪರಿಗಣಿಸದೆ ಇರುವುದು ಸಿಇಟಿ 2020ರ ಉಲ್ಲಂಘನೆಯಾಗಿದೆ. ಇದರಿಂದ ಪುನಾರವರ್ತಿತ ವಿದ್ಯಾರ್ಥಿಗಳಿಗೆ ರ್‍ಯಾಂಕ್ ಕಡಿಮೆಯಾಗಲಿದೆ'' ಎಂದು ಅರ್ಜಿದಾರ ವಿದ್ಯಾರ್ಥಿಗಳು ದೂರಿನಲ್ಲಿ ಹೇಳಿದ್ದರು.

ಸಿಇಟಿ ವಿಷಯದಲ್ಲಿ ಹೈಕೋರ್ಟ್‌ ಸರಿಯಾದ ತೀರ್ಪು ನೀಡಿದೆ. ಇದರಿಂದ ಸಾಕಷ್ಟು ಮಂದಿ ಪುನಾರವರ್ತಿತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಭಾಗಶಃ ಗೆಲುವು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

IPL_Entry_Point