Murugha Mutt: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಿದ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಹಿನ್ನಡೆ
ಕನ್ನಡ ಸುದ್ದಿ  /  ಕರ್ನಾಟಕ  /  Murugha Mutt: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಿದ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಹಿನ್ನಡೆ

Murugha Mutt: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಿದ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಹಿನ್ನಡೆ

Chitradurga Murugha Mutt: ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ ಅವರನ್ನು ನೇಮಕ ಮಾಡಿದ್ದ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ (Karnataka Highcourt) ರದ್ದುಗೊಳಿಸಿದೆ.

Murugha Mutt: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಿದ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಹಿನ್ನಡೆ
Murugha Mutt: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಿದ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ ಅವರನ್ನು ನೇಮಕ ಮಾಡಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇಂದು ಕರ್ನಾಟಕ ಹೈಕೋರ್ಟ್‌ ಈ ವಿಚಾರದ ಕುರಿತು ತೀರ್ಪು ನೀಡಿದ್ದು, ಸರ್ಕಾರಕ್ಕೆ ಆಡಳಿತಾಧಿಕಾರಿ ನೇಮಿಸುವ ಹಕ್ಕಿಲ್ಲ ಎಂದಿದೆ. ವಸ್ತ್ರದ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೋರ್ಟ್‌ ರದ್ದುಗೊಳಿಸಿದೆ.

ಆಡಳಿತಾಧಿಕಾರಿ ನೇಮಕದ ಕುರಿತು ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಲಾಗಿದೆ. "ಆಡಳಿತಾಧಿಕಾರಿಯನ್ನು ನೇಮಕ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ" ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಸ್ಪಷ್ಟಪಡಿಸಿದೆ. ಸರ್ಕಾರವು ಆಡಳಿತಾಧಿಕಾರಿಯನ್ನು ನೇಮಕ ಮಾಡಿರುವುದನ್ನು ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಪ್ರಶ್ನಿಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

"ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ಅಧಿಕಾರವು ಸರಕಾರಕ್ಕೆ ಇರುವುದಿಲ್ಲ. ಮಠ ಮತ್ತು ಶೈಕ್ಷಣಿಕ ಆಡಳಿತ ನಿರ್ವಹಣೆಗೆ ಮಠದ ಭಕ್ತರು, ಲಿಂಗಾಯತ ಸಮುದಾಯದ ಮುಖಂಡರು ನಿರ್ಧರಿಸಬಹುದು. ಮುಂದಿನ ನಾಲ್ಕು ವಾರಗಳ ಕಾಲ ಸರ್ಕಾರ ನೇಮಕ ಮಾಡಿರುವಂತಹ ಆಡಳಿತಾಧಿಕಾರಿ ಮುಂದುವರೆಯಬಹುದು" ಎಂದು ಕೋರ್ಟ್‌ ತಿಳಿಸಿರುವುದಾಗಿ ವರದಿಗಳು ತಿಳಿಸಿವೆ.

ಕಳೆದ ವರ್ಷ ಡಿಸೆಂಬರ್‌ ತಿಂಗಳಿನಲ್ಲಿ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನು ನೇಮಿಸಲಾಗಿತ್ತು. ವಸ್ತ್ರದ್ ಅವರನ್ನ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಉಪಕಾರ್ಯದರ್ಶಿ ಟಿಸಿ ಕಾಂತರಾಜ್ ಆದೇಶ ಹೊರಡಿಸಿದ್ದರು.

"ಭಾರತದ ಸಂವಿಧಾನದ 162ನೇ ವಿಧಿಯಡಿ ಸರ್ಕಾರವು ಆಡಳಿತಾಧಿಕಾರಿ ನೇಮಕ ಮಾಡಿರುವುದು ಕಾನೂನಿನ ವಿರುದ್ಧವಾದದ್ದು. ಮಠಗಳ ಮೇಲೆ ನಿಯಂತ್ರಣ ಹೊಂದಲು ಸರ್ಕಾರಕ್ಕೆ ಕಾನೂನಿನಡಿ ಅವಕಾಶವಿಲ್ಲ. ಈ ರೀತಿ ನಿಯಂತ್ರಣ ಹೊಂದಲು ಸಿವಿಲ್ ಪ್ರೊಸೀಜರ್ ಕೋಡ್ ಅನುಸಾರ ಕಲಂ 92ರ ಅಡಿಯಲ್ಲಿ ಸಾಧ್ಯ. ಈ ಪ್ರಕರಣದಲ್ಲಿ ರಾಜ್ಯ ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸಿ" ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

ಮುರುಘಾ ಮಠದ ವಸತಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಡಿ ಶಿವಮೂರ್ತಿ ಮುರುಘಾ ಶರಣರನ್ನು ಸೆಪ್ಟೆಂಬರ್​ 1ರ ರಾತ್ರಿ ಬಂಧಿಸಲಾಗಿತ್ತು. ಪ್ರಕರಣ ದಾಖಲಾಗಿ ಆರು ದಿನಗಳು ಕಳೆದ ಬಳಿಕ, ಮುರುಘಾ ಶ್ರೀಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.

 

Whats_app_banner