ಕರ್ನಾಟಕದಲ್ಲಿ ಮಧುಬಲೆ ಪ್ರಕರಣ: ಸಿಬಿಐ ಅಥವಾ ಎಸ್ಐಟಿ ತನಿಖೆ ನಡೆಸಬೇಕೆಂಬುದರ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕದಲ್ಲಿ ಮಧುಬಲೆ ಪ್ರಕರಣ: ಸಿಬಿಐ ಅಥವಾ ಎಸ್ಐಟಿ ತನಿಖೆ ನಡೆಸಬೇಕೆಂಬುದರ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಕರ್ನಾಟಕದಲ್ಲಿ ಮಧುಬಲೆ ಪ್ರಕರಣ: ಸಿಬಿಐ ಅಥವಾ ಎಸ್ಐಟಿ ತನಿಖೆ ನಡೆಸಬೇಕೆಂಬುದರ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಕರ್ನಾಟಕದಲ್ಲಿನ ಮಧುಬಲೆ ಪ್ರಕರಣವನ್ನು ರಾಜ್ಯದ ನಿಯಂತ್ರಣ ಅಥವಾ ಪ್ರಭಾವಕ್ಕೆ ಒಳಪಡದ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಸಿಬಿಐ ಅಥವಾ ಎಸ್ಐಟಿಯಿಂದ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಮಧುಬಲೆ (ಹನಿಟ್ರ್ಯಾಪ್) ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿಗೆ ವಹಿಸಬೇಕೇ ಎಂಬುದನ್ನು ನಿರ್ಧರಿಸುವ ಸಂಬಂಧ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಮಧುಬಲೆ (ಹನಿಟ್ರ್ಯಾಪ್) ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿಗೆ ವಹಿಸಬೇಕೇ ಎಂಬುದನ್ನು ನಿರ್ಧರಿಸುವ ಸಂಬಂಧ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

Karnataka Honeytrap Case: ಕರ್ನಾಟಕದ ಶಾಸಕರು, ಸರ್ಕಾರಿ ನೌಕರರು ಹಾಗೂ ನ್ಯಾಯಾಧೀಶರ ಹನಿಟ್ರ್ಯಾಪ್ ಆರೋಪದ ಬಗ್ಗೆ ಸಿಬಿಐ ಅಥವಾ ಎಸ್ಐಟಿಯಿಂದ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠದ ಮುಂದೆ ಪ್ರಕರಣವನ್ನು ಶೀಘ್ರವಾಗಿ ಪಟ್ಟಿ ಮಾಡಲು ಅರ್ಜಿದಾರರ ವಕೀಲರು ಈ ವಿಷಯವನ್ನು ಉಲ್ಲೇಖಿಸಿದ್ದಾರೆ. ಇಂದು (ಮಾರ್ಚ್ 24) ಅಥವಾ ನಾಳೆ (ಮಾರ್ಚ್ 25) ವಿಚಾರಣೆಗೆ ಪಟ್ಟಿ ಮಾಡಲು ಒಪ್ಪಿಕೊಂಡಿತು.

ಅರ್ಜಿಯಲ್ಲಿ, ಕರ್ನಾಟಕ ರಾಜ್ಯದ ನಿಯಂತ್ರಣ ಅಥವಾ ಪ್ರಭಾವಕ್ಕೆ ಒಳಪಡದ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಕೇಂದ್ರ ತನಿಖಾ ದಳ (ಸಿಬಿಐ) ಅಥವಾ ವಿಶೇಷ ತನಿಖಾ ತಂಡ (ಎಸ್ಐಟಿ) ಯಿಂದ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಲಾಗಿದೆ. ವಕೀಲ ಬರುನ್ ಸಿನ್ಹಾ ಅವರ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಸುಪ್ರೀಂ ಕೋರ್ಟ್ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದ ಮೇಲ್ವಿಚಾರಣಾ ಸಮಿತಿಯು ತನಿಖೆಯನ್ನು ಮೇಲ್ವಿಚಾರಣೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದೆ.

"ಘಟನೆಯಿಂದ ನೇರವಾಗಿ ಅಥವಾ ಪರೋಕ್ಷವಾಗಿ ಲಾಭ ಪಡೆದ ಎಲ್ಲಾ ಅಧಿಕಾರಿಗಳು / ವ್ಯಕ್ತಿಗಳು ನಿರ್ವಹಿಸಿದ ಪಾತ್ರದ ಬಗ್ಗೆಯೂ ಮೇಲ್ವಿಚಾರಣಾ ಸಮಿತಿಯು ತನಿಖೆ ನಡೆಸಬೇಕು. ತನಿಖೆಯ ನಂತರ ತಪ್ಪಿತಸ್ಥರೆಂದು ಕಂಡುಬಂದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ನಿರ್ದೇಶಿಸಬೇಕು" ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸಚಿವ ರಾಜಣ್ಣ ಹೇಳಿಕೆಯಿಂದ ಸಂಚಲನ ಮೂಡಿಸಿದ ಮಧುಬಲೆ ಪ್ರಕರಣ

ರಾಜ್ಯದಲ್ಲಿ 48 ಮಂದಿ ಮಧುಬಲೆ (ಹನಿಟ್ರ್ಯಾಪ್) ಗೆ ಬಲಿಯಾಗಿದ್ದಾರೆ. ಅವರ ಅಶ್ಲೀಲ ವಿಡಿಯೊಗಳನ್ನು ಪ್ರಸಾರ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಆರೋಪಿಸಿದ್ದಾರೆ. ಈ ಪಟ್ಟಿಯು ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸೇರಿದಂತೆ ಪಕ್ಷಾತೀತವಾಗಿದೆ ಎಂದು ರಾಜಣ್ಣ ಹೇಳಿದ್ದಾರೆ.

"ರಾಜ್ಯದ ಮುಖ್ಯಮಂತ್ರಿಯಾಗಲು ಬಯಸುವ ವ್ಯಕ್ತಿಯೊಬ್ಬರು ನ್ಯಾಯಾಧೀಶರು ಸೇರಿದಂತೆ ಹಲವಾರು ವ್ಯಕ್ತಿಗಳನ್ನು ಹನಿಟ್ರ್ಯಾಪ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ವಿಧಾನಸಭೆ ಕಲಾಪದಲ್ಲಿ ಬಹಳ ಗಂಭೀರ ಮತ್ತು ಗೊಂದಲದ ಆರೋಪಗಳು ಕೇಳಿಬಂದವು. ತಾನು ಬಲಿಪಶು ಎಂದು ಹೇಳಿಕೊಂಡಿರುವ ಹಾಲಿ ಸಚಿವರೊಬ್ಬರು ಈ ಆರೋಪಗಳನ್ನು ಮಾಡಿದ್ದಾರೆ. ಆ ಮೂಲಕ ಗಂಭೀರ ಆರೋಪಗಳಿಗೆ ವಿಶ್ವಾಸಾರ್ಹತೆಯನ್ನು ನೀಡಿದ್ದಾರೆ" ಎಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ತಿಳಿಸಲಾಗಿದೆ.

"ಅಷ್ಟೇ ಅಲ್ಲ, ಸರ್ಕಾರದ ಇನ್ನೊಬ್ಬ ಸಚಿವರು, ಮೊದಲ ಸಚಿವರು ಮಾಡಿದ ಆರೋಪಗಳಿಗೆ ಬೆಂಬಲವಾಗಿ ಮಾತನಾಡಿ, ಹಗರಣದ ಪ್ರಮಾಣವು ಪ್ರಸ್ತುತ ಗೋಚರಿಸುವುದಕ್ಕಿಂತ ಕನಿಷ್ಠ ಹತ್ತು ಪಟ್ಟು ಹೆಚ್ಚಾಗಿದೆ" ಎಂದು ಆರೋಪಿಸಿದ್ದಾರೆ. ಮಧುಬಲೆ (ಹನಿಟ್ರ್ಯಾಪ್) ವಿಧಾನಗಳಿಂದ ನ್ಯಾಯಾಧೀಶರು ರಾಜಿ ಮಾಡಿಕೊಳ್ಳುವುದು ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಗಂಭೀರ ಬೆದರಿಕೆಯನ್ನುಂಟು ಮಾಡುತ್ತದೆ. ಕೋರ್ಟ್ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ತೀವ್ರವಾಗಿ ದುರ್ಬಲಗೊಳಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner