ಕನ್ನಡ ಸುದ್ದಿ  /  ಕರ್ನಾಟಕ  /  ಲೋಕಸಭಾ ಚುನಾವಣಾ ಫಲಿತಾಂಶ: ಗ್ಯಾರಂಟಿಗಳಿಂದ ಹೆಚ್ಚು ಸೀಟು ಗೆಲ್ಲುವ ವಿಶ್ವಾಸವಿತ್ತು; ಎಲ್ಲಿ ಎಡವಿದ್ವಿ ಅನ್ನೋದನ್ನ ಚರ್ಚಿಸುತ್ತೇವೆ; ಡಿಕೆಶಿ

ಲೋಕಸಭಾ ಚುನಾವಣಾ ಫಲಿತಾಂಶ: ಗ್ಯಾರಂಟಿಗಳಿಂದ ಹೆಚ್ಚು ಸೀಟು ಗೆಲ್ಲುವ ವಿಶ್ವಾಸವಿತ್ತು; ಎಲ್ಲಿ ಎಡವಿದ್ವಿ ಅನ್ನೋದನ್ನ ಚರ್ಚಿಸುತ್ತೇವೆ; ಡಿಕೆಶಿ

ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ತನ್ನ ಸ್ಥಾನಗಳನ್ನು 1 ರಿಂದ 9ಕ್ಕೆ ಹೆಚ್ಚಿಸಿಕೊಂಡಿದೆ. ಬಿಜೆಪಿ ಕೆಲ ಕ್ಷೇತ್ರಗಳನ್ನು ಕಳೆದುಕೊಂಡಿದೆ. ಈ ಬಗ್ಗೆ ನಾಯಕರು ಮಾತನಾಡಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶ: ಗ್ಯಾರಂಟಿಗಳಿಂದ ಹೆಚ್ಚು ಸೀಟು ಗೆಲ್ಲುವ ವಿಶ್ವಾಸವಿತ್ತು; ಎಲ್ಲಿ ಎಡವಿದ್ವಿ ಅನ್ನೋದನ್ನ ಚರ್ಚಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶ: ಗ್ಯಾರಂಟಿಗಳಿಂದ ಹೆಚ್ಚು ಸೀಟು ಗೆಲ್ಲುವ ವಿಶ್ವಾಸವಿತ್ತು; ಎಲ್ಲಿ ಎಡವಿದ್ವಿ ಅನ್ನೋದನ್ನ ಚರ್ಚಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಇಡೀ ದೇಶ ಕುತೂಹಲದಿಂದ ಕಾಯುತ್ತಿದ್ದ 18ನೇ ಲೋಕಸಭಾ ಚುನಾವಣೆ ಫಲಿತಾಂಶ (Lok Sabha Election Result 2024) ಪ್ರಕಟವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ (Karnataka Congress) ತನ್ನ ಸ್ಥಾನವನ್ನು 1 ರಿಂದ 9ಕ್ಕೆ ಹೆಚ್ಚಿಸಿಕೊಂಡಿದೆ. ಆದರೆ ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ (Bangalore Rural Congress Candidate DK Suresh) ಅವರ ಸೋಲು ದೊಡ್ಡ ಅಚ್ಚರಿ ತರಿಸಿದೆ. ರಾಜ್ಯದಲ್ಲಿ ಫಲಿತಾಂಶದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡದಿದ್ದು (DCM DK Shivakumar), ನಾನು ಬಹಳ ಅರ್ಥ ಮಾಡಿಕೊಳ್ಳಬೇಕು, ಅರ್ಥ ಮಾಡಿಕೊಳ್ಳುತ್ತೇನೆ. ಡಿಕೆ ಸುರೇಶ್ ಸೋಲನಿಂದ ಪಾಠ ಕಲಿತೀನಿ ಎಂದು ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಸದಾಶಿನಗರದ ತಮ್ಮ ನಿವಾಸದಲ್ಲಿ ಮಾತನಾಡಿರುವ ಡಿಕೆಶಿ, ಗ್ಯಾರಂಟಿಗಳಿಂದ ಹೆಚ್ಚಿನ ಸೀಟುಗಳನ್ನು ಗೆಲ್ಲುವ ವಿಶ್ವಾಸ ಇತ್ತು. ಎಲ್ಲೆಲ್ಲಿ ಎಡವಿದ್ದೀವಿ ಅನ್ನೋದನ್ನ ಚರ್ಚೆ ಮಾಡುತ್ತೀವಿ. ಆದರೆ ಮೋದಿ ಅಲೆ ಕಡಿಮೆಯಾಗಿದೆ. ಅವರ ನಿರೀಕ್ಷೆಯೂ ಕಡಿಮೆಯಾಗಿದೆ. ಜನರ ತೀರ್ಪನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷನಾಗಿ ಗೌರವಿಸುತ್ತೇನೆ. ನಾಯಕರೆಲ್ಲಾ ಕುಳಿತು ಮಾತನಾಡುತ್ತಿದ್ದಾರೆ. ಮುಂದೆ ಅಧಿಕಾರಕ್ಕೆ ಬರುವ ಬಗ್ಗೆ ಚರ್ಚೆಯಾಗುತ್ತಿದೆ. ನೋಡೋಣ ಏನು ಆಗುತ್ತೋ ಅಂತ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿಸಿಎಂ ಕ್ಷೇತ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದಾರೆ- ಹೆಚ್‌ಡಿಕೆ

ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಎನ್‌ಡಿಎ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯ ಲೋಕಸಭೆ ಫಲಿತಾಂಶದ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ಕುರಿ, ಮೇಕೆ, ಎಮ್ಮೆ ಕಡಿದು ಗೆದ್ದಿಲ್ಲ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇವೆ. ಈ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟಿದ್ದಾರೆ.

ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಕುಮಾರಸ್ವಾಮಿ ಸೋಲುವುದೂ ಅಷ್ಟೇ ಸತ್ಯ ಎಂದು ಮಂಡ್ಯದಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಅವರ ಪ್ರಕಾರ ಸೂರ್ಯ ಹುಟ್ಟುತ್ತಾನೋ ಇಲ್ಲವೋ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕುಮಾರಸ್ವಾಮಿ ಕುಟುಕಿದ್ದಾರೆ.

ನಮ್ಮ ಕಾರ್ಯಕರ್ತರಿಗೆ ವಿನಾಕಾರಣ ತೊದರೆ ಕೊಟ್ಟರೆ ಸುಮ್ಮನಿರುವುದಿಲ್ಲ-ಬೊಮ್ಮಾಯಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಇರಬಹುದು. ನಮ್ಮ ಬಳಿ ಜನ ಶಕ್ತಿ ಇದೆ. ಜನಶಸಕ್ಯಿ ರಾಜಶಕ್ತಿ ನಡುವೆ ಸಂಘರ್ಷ ಬಂದಾಗ ಜನಶಕ್ತಿ ಗೆಲ್ಲುತ್ತದೆ. ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸುಮ್ಮನೆ ಬಿಡುವುದಿಲ್ಲ. ನಮ್ಮ ಕಾರ್ಯಕರ್ತರಿಗೆ ವಿನಾಕಾರಣ ತೊದರೆ ಕೊಟ್ಟರೆ ಸುಮ್ಮನಿರುವುದಿಲ್ಲ ಎಂದು ಮಾಜಿ ಸಿಎಂ ಹಾಗೂ ಹಾವೇರಿ ಲೋಕಸಭಾ ವಿಜೇತ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಸಂದೇಶ ಬಂದಿದೆ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲಾಗುವುದು. ದೆಹಲಿಯಿಂದ ಬಂದ ಮೇಲೆ ದೊಡ್ಡ ಪ್ರಮಾಣದಲ್ಲಿ ಮೆರವಣಿಗೆ ಮಾಡೋಣ. ನೀವು ಇಟ್ಟಿರುವ ನಂಬಿಕೆಗೆ ತಕ್ಕಹಾಗೆ ಕೆಲಸ ಮಾಡುತ್ತೇನೆ. ಮಹಿಳೆಯರ ರಕ್ಷಣೆ .ಮಾಡುವ ಕೆಲಸ ಮಾಡುತ್ತೇನೆ ಎಂದು ತಮ್ಮ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿ ಮಾತನಾಡಿದ್ದಾರೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024