ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ; ಬೆಂಗಳೂರಿನ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರಮುಖ ಕಾರಣಗಳಿವು
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ; ಬೆಂಗಳೂರಿನ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರಮುಖ ಕಾರಣಗಳಿವು

ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ; ಬೆಂಗಳೂರಿನ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರಮುಖ ಕಾರಣಗಳಿವು

ಬೆಂಗಳೂರು ವ್ಯಾಪ್ತಿಯಲ್ಲಿನ 4 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿನ ಸೋಲು ಕಾಂಗ್ರೆಸ್‌ಗೆ ದೊಡ್ಡ ಹೊಡೆತವಾಗಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವೇನು? ಕೈ ನಾಯಕರು ಎಡವಿದ್ದು ಎಲ್ಲಿ ಅನ್ನೋದರ ಮಾಹಿತಿ ಇಲ್ಲಿದೆ.

ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ; ಬೆಂಗಳೂರಿನ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರಮುಖ ಕಾರಣಗಳಿವು
ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ; ಬೆಂಗಳೂರಿನ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರಮುಖ ಕಾರಣಗಳಿವು

ಬೆಂಗಳೂರು: 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾರಿ ಅಲೆಯಲ್ಲಿಯೂ ಕರ್ನಾಟಕದಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‌ನ (Congress) ಏಕೈಕ ಅಭ್ಯರ್ಥಿ ಎಂದರೆ ಅದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ (Bangalore Rural Lok Sabha Election Result) ಡಿಕೆ ಸುರೇಶ್ (DK Suresh) ಅವರು. ಆದರೆ 2024ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಬಿಜೆಪಿ ನಾಯಕರು (BJP Leaders) ರೂಪಿಸಿದ ರಣತಂತ್ರದ ಪರಿಣಾಮ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ (Dr CN Manjunath) ಅವರ ವಿರುದ್ಧ ಡಿಕೆ ಸುರೇಶ್ ಭಾರಿ ಅಂತರದ ಸೋಲು ಕಂಡಿದ್ದಾರೆ. ಡಿಕೆ ಸುರೇಶ್ ಅವರ ಪರಾಜಯವನ್ನು ಅರಿಗಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ. ಬೆಂಗಳೂರು ಗ್ರಾಮಾಂತರ ಮಾತ್ರವಲ್ಲ ಶಕ್ತಿಕೇಂದ್ರದ ವ್ಯಾಪ್ತಿಯಲ್ಲಿ ಬರುವ ಇತರೆ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು ಸಾಧ್ಯವಾಗಿಲ್ಲ.

ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರ ಯೋಜನೆಗಳು ಇಲ್ಲಿ ವರ್ಕೌಟ್ ಆಗಿಲ್ಲ ಯಾಕೆ? ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣಗಳೇನು ಅನ್ನೋದನ್ನು ತಿಳಿಯೋಣ.

ಬೆಂಗಳೂರು ವ್ಯಾಪ್ತಿಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಗೆ ಪ್ರಮುಖ 5 ಕಾರಣಗಳು

  1. ವರ್ಕೌಟ್ ಆಗದ ಗ್ಯಾರಂಟಿಗಳು: ಕರ್ನಾಟಕದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಗೆಲ್ಲುವ ವಿಶ್ವಾಸ ಹೊಂದಿತ್ತು. ಇದಕ್ಕೆ ಕಾರಣ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಾರಿಗೆ ತಂದಿರುವ ಗ್ಯಾರಂಟಿಗಳು. ಆದೆ ಗ್ಯಾರಂಟಿಗಳು ಮತಗಳಾಗಿ ಪರಿವರ್ತನೆಯಾಗಿಲ್ಲ. ಬೆಂಗಳೂರಿನ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಗೆ ಇದು ಪ್ರಮುಖ ಕಾರಣವಾಗಿದೆ.
  2. ರಾಜಕಾರಣಿಗಳ ಕುಟುಂಬದವರರಿಗೆ ಟಿಕೆಟ್: ನಗರ ವ್ಯಾಪ್ತಿಯ ನಾಲ್ಕು ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ರಾಜಕೀಯ ಕುಟುಂಬಗಳ ಹಿನ್ನೆಲೆಯುಳ್ಳವರಿಗೆ ಟಿಕೆಟ್ ನೀಡಿತ್ತು. ಬೆಂಗಳೂರು ದಕ್ಷಿಣದಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿಗೆ ಟಿಕೆಟ್ ನೀಡಿದ್ದರೆ, ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಕೇಂದ್ರ ಮಾಜಿ ಸಚಿವ, ಎಐಸಿಸಿ ಕಾರ್ಯದರ್ಶಿ ರೆಹಮಾನ್ ಖಾನ್ ಅವರ ಪುತ್ರ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕೆ ಇಳಿಸಿತ್ತು. ಬೆಂಗಳೂರು ಉತ್ತರದಲ್ಲಿ ಕೇಂದ್ರ ಮಾಜಿ ಸಚಿವ ಇದು ಕೂಡ ಸೋಲಿಗೆ ಕಾರಣವಾಗಿರಬಹುದು.
  3. ಅತಿ ವಿಶ್ವಾಸ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಇಲ್ಲ. ಹೀಗಾಗಿ ನಮ್ಮ ಪಕ್ಷವೇ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬಹುದು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅತಿ ವಿಶ್ವಾಸ ಹೊಂದಿದ್ದರೂ ಆದರೆ ಈ ಬಾರಿಯ ಚುನಾವಣಾ ಫಲಿತಾಂಶದಲ್ಲಿ ಉಲ್ಟಾ ಆಗಿದೆ.
  4. ದೇಶಕ್ಕೆ ಎನ್‌ಡಿಎ, ರಾಜ್ಯಕ್ಕೆ ಕಾಂಗ್ರೆಸ್: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೆಸ್ಟ್, ದೇಶದ ಮಟ್ಟದಲ್ಲಿ ಎನ್‌ಡಿಎ ಸರ್ಕಾರವೇ ಉತ್ತಮ ಅನ್ನೋದು ಬಹುತೇಕ ಮತದಾರರ ಮನದಾಳದ ಮಾತುಗಳು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಮತದಾರ ಬಿಜೆಪಿಗೆ ಬೆಂಬಲ ನೀಡಿರುವುದು ಕೂಡ ಕಾಂಗ್ರೆಸ್ ಸೋಲಿಗೆ ಮತ್ತೊಂದು ಕಾರಣವಾಗಿರಬಹುದು.
  5. ಪ್ರಮುಖ ಕೇಂದ್ರಿತ ಮತ ಯಾಚನೆ: ಕಾಂಗ್ರೆಸ್ ಪಕ್ಷ ಕೆಳಹಂತಕ್ಕೆ ಇಳಿದು ಕೆಲಸ ಮಾಡಿಲ್ಲ ಅನ್ನೋ ಮಾತುಗಳಿವೆ. ಕೇವಲ ಪಕ್ಷದ ಪ್ರಮುಖ ನಾಯಕರ ಮಟ್ಟಕ್ಕೆ ಮಾತ್ರ ಕೇಂದ್ರಿತವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದು ಕೂಡ ಬೆಂಗಳೂರು ವ್ಯಾಪ್ತಿಯ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಗಿದೆ ಎಂಬ ಚರ್ಚೆಗಳೂ ನಡೆಯುತ್ತಿವೆ.

ಬೆಂಗಳೂರು ವ್ಯಾಪ್ತಿಯಲ್ಲಿ 4 ಕ್ಷೇತ್ರದಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿಗಳು

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ 4ನೇ ಬಾರಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಗೆದ್ದು ಬೀಗಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ 2ನೇ ಬಾರಿಗೆ ಜಯಭೇರಿ ಬಾರಿಸಿದ್ದಾರೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಮೊದಲ ಯತ್ನದಲ್ಲೇ ಗೆಲುವು ಕಂಡಿದ್ದಾರೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner