ಕನ್ನಡ ಸುದ್ದಿ  /  ಕರ್ನಾಟಕ  /  ಭ್ರೂಣ ಲಿಂಗ ಪತ್ತೆ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನದ ಮೊತ್ತ 1 ಲಕ್ಷಕ್ಕೆ ಹೆಚ್ಚಳ; ಆರೋಗ್ಯ ಇಲಾಖೆಯ ಸುತ್ತೋಲೆ

ಭ್ರೂಣ ಲಿಂಗ ಪತ್ತೆ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನದ ಮೊತ್ತ 1 ಲಕ್ಷಕ್ಕೆ ಹೆಚ್ಚಳ; ಆರೋಗ್ಯ ಇಲಾಖೆಯ ಸುತ್ತೋಲೆ

ಭ್ರೂಣ ಲಿಂಗ ಪತ್ತೆ ಕುರಿತು ಮಾಹಿತಿ ನೀಡಿದವರಿಗೆ ನೀಡುವ ಬಹುಮಾನದ ಮೊತ್ತವನ್ನು 50 ಸಾವಿರ ರೂ.ಗಳಿಂದ ರೂ. 1 ಲಕ್ಷಕ್ಕೆ ಹೆಚ್ಚಳ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಭ್ರೂಣ ಲಿಂಗ ಪತ್ತೆ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನದ ಮೊತ್ತ   ₹1 ಲಕ್ಷಕ್ಕೆ ಹೆಚ್ಚಳ; ಆರೋಗ್ಯ ಇಲಾಖೆಯ ಸುತ್ತೋಲೆ
ಭ್ರೂಣ ಲಿಂಗ ಪತ್ತೆ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನದ ಮೊತ್ತ ₹1 ಲಕ್ಷಕ್ಕೆ ಹೆಚ್ಚಳ; ಆರೋಗ್ಯ ಇಲಾಖೆಯ ಸುತ್ತೋಲೆ

Fetal gender detection: ಭ್ರೂಣ ಲಿಂಗ ಪತ್ತೆ ಕುರಿತು ಮಾಹಿತಿ ನೀಡಿದವರಿಗೆ ನೀಡುವ ಬಹುಮಾನದ ಮೊತ್ತವನ್ನು 50 ಸಾವಿರ ರೂ.ಗಳಿಂದ ರೂ. 1 ಲಕ್ಷಕ್ಕೆ ಹೆಚ್ಚಳ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಗರ್ಭಫೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ (ಪಿಸಿಸಿಎನ್‌ಡಿಟಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಶಸ್ವಿಗೊಂಡ ಗುಪ್ತ ಕಾರ್ಯಾಚರಣೆಯಲ್ಲಿ ಮಾಹಿತಿ ನೀಡಿದವರಿಗೂ ಈ ಬಹುಮಾನ ನೀಡಲಾಗುತ್ತದೆ. ಬಹುಮಾನದ ಮೊತ್ತದಲ್ಲಿ ಅರ್ಧದಷ್ಟು ಹಣವನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯಿಂದ ಮತ್ತು ಉಳಿದ 50 ಸಾವಿರ ರೂ.ಗಳನ್ನು ಆಯಾ ಜಿಲ್ಲೆಗಳಿಂದ ಸಂಗ್ರಹವಾಗುವ ಪಿಸಿಸಿಎನ್‌ಡಿಟಿ ಶುಲ್ಕದಿಂದ ಭರಿಸಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

2023ರ ಡಿಸೆಂಬರ್‌ 11ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಹುಮಾನದ ಮೊತ್ತವನ್ನು ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿತ್ತು. ಇತ್ತೀಚೆಗೆ ಭ್ರೂಣ ಹತ್ಯೆ ಮಾಡುವ ಪ್ರಕರಣಗಳು ರಾಜ್ಯಾದ್ಯಂತ ಹೆಚ್ಚುತ್ತಲೇ ಇವೆ. ಅದರಲ್ಲೂ ಮಂಡ್ಯದಲ್ಲಿ ಸರಕಾರಿ ಆಸ್ಪತ್ರೆಯ ಆವರಣದಲ್ಲೇ ಭ್ರೂಣಹತ್ಯೆ ನಡೆಯುತ್ತಿದ್ದ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೆಣ್ಣು ಭ್ರೂಣಹತ್ಯೆ ಪ್ರಕರಣಗಳ ಹೆಚ್ಚಳದಿಂದ ಲಿಂಗ ತಾರತಮ್ಯವೂ ಹೆಚ್ಚಳವಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಪ್ರತಿ ಸಾವಿರ ಗಂಡು ಮಕ್ಕಳಿಗೆ ಇರಬೇಕಾದ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಿಂಗಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಗಳು ಅವ್ಯಾಹತವಾಗಿ ನಡೆಯುತ್ತಲೇ ಇವೆ. ಈ ನಿಟ್ಟಿನಲ್ಲಿ ಸರಕಾರ ಈ ಕ್ರಮಕಕೆ ಮುಂದಾಗಿದೆ.

ಟ್ರೆಂಡಿಂಗ್​ ಸುದ್ದಿ

ಆಸ್ಪತ್ರೆ ಹಣ: ಪ್ರತಿದಿನ ಜಮೆ ಮಾಡಲು ಆರೋಗ್ಯ ಇಲಾಖೆ ಎಚ್ಚರಿಕೆ

ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಯೂಸರ್ಸ್‌ ಚಾರ್ಜ್‌ (ಆರೋಗ್ಯ ರಕ್ಷಾ ಸಮಿತಿಯ ಹಣ) ವನ್ನು ಆಯಾ ದಿನವೇ ಬ್ಯಾಂಕ್‌ ಖಾತೆಗೆ ಜಮಾ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇಲಾಖೆಯ ಆಯುಕ್ತ ಡಿ.ರಂದೀಪ್ ಒಂದು ವೇಳೆ ಜಮೆ ಮಾಡುವುದು ವಿಳಂಬವಾದಲ್ಲಿ ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಯೂಸರ್ಸ್‌ ಚಾರ್ಜ್‌ ಹಣ ದುರುಪಯೋಗವಾಗಿತ್ತು. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗದ ಚೀಟಿ ಹಂಚುವ ಕೆಲಸವನ್ನು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ನೌಕರರು ಸಂಗ್ರಹ ಮಾಡುತ್ತಾರೆ. ಹೀಗೆ ಸಂಗ್ರಹವಾಗುವ ಹಣದ ಲೆಕ್ಕವನ್ನು ಸಂಬಂಧಪಟ್ಟ ಆಡಳಿತ ವಿಭಾಗದ ಅಧಿಕಾರಿಗೆ ಒಪ್ಪಿಸಬೇಕು. ಅವರು ಇ-ಆಸ್ಪತ್ರೆಯಲ್ಲಿ ನಮೂದಾಗಿರುವ ಲೆಕ್ಕದ ಪ್ರಕಾರ ಹಣವನ್ನು ಬ್ಯಾಂಕ್‌ ಖಾತೆಗೆ ಜಮಾ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

ಸಂಗ್ರಹಿಸಿದ ಹಣವನ್ನು ಜಮೆ ಮಾಡುವಲ್ಲಿ ವಿಳಂಬ ಮಾಡುವಂತಿಲ್ಲ. ಇಂತಹ ವಿಳಂಬ ನೀತಿಯನ್ನು ಇಲಾಖೆ ಸಹಿಸುವುದಿಲ್ಲ. ಒಂದು ವೇಳೆ ಉದ್ದೇಶಪೂರ್ವಕವಾಗಿ ವಿಳಂಬವಾದರೆ ಜಿಲ್ಲಾ ಶಸ್ತ್ರ ಚಿಕಿತ್ಸಕರು, ತಾಲೂಕು ಮಟ್ಟದಲ್ಲಿ ಆಡಳಿತ ವೈದ್ಯಾಧಿಕಾರಿಗಳು ಮತ್ತು ಆಡಳಿತ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ನೇರವಾಗಿ ಹೊಣೆಯಾಗುತ್ತಾರೆ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.