ಪೊಲೀಸ್ ಸಂಸ್ಮರಣಾ ದಿನ; ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಸ್ಕೂಲ್ ಸ್ಥಾಪನೆ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕನ್ನಡ ಸುದ್ದಿ  /  ಕರ್ನಾಟಕ  /  ಪೊಲೀಸ್ ಸಂಸ್ಮರಣಾ ದಿನ; ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಸ್ಕೂಲ್ ಸ್ಥಾಪನೆ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪೊಲೀಸ್ ಸಂಸ್ಮರಣಾ ದಿನ; ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಸ್ಕೂಲ್ ಸ್ಥಾಪನೆ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪೊಲೀಸ್ ಸಂಸ್ಮರಣಾ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಸ್ಕೂಲ್ ಸ್ಥಾಪನೆ ಮಾಡುವುದಾಗಿ ಘೋಷಿಸಿದರು. ಇದಲ್ಲದೆ, ಇತರೆ ಪೊಲೀಸ್ ಕಲ್ಯಾಣ ಯೋಜನೆಗಳ ಕಡೆಗೂ ಗಮನಸೆಳೆದರು.

ಪೊಲೀಸ್ ಸಂಸ್ಮರಣಾ ದಿನ; ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಸ್ಕೂಲ್ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಪೊಲೀಸ್ ಸಂಸ್ಮರಣಾ ದಿನ; ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಸ್ಕೂಲ್ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. (CMO)

ಬೆಂಗಳೂರು: ಕರ್ನಾಟಕ ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡುವುದಕ್ಕೆ ಬೇಕಾದ ವಾತಾವರಣ ಮತ್ತು ಅವರಿಗೆ ಸಂಪೂರ್ಣ ಸಹಕಾರವನ್ನು ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮ್ಯ ಅವರು ಇಂದು (ಅಕ್ಟೋಬರ್ 21) ಹೇಳಿದರು. ಅವರು ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದು, ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಹೊಸ ಪಬ್ಲಿಕ್ ಶಾಲೆ ತೆರೆಯುವುದಾಗಿ ಪ್ರಕಟಿಸಿದರು. ಇದೂ ಅಲ್ಲದೆ, 2025ರಲ್ಲಿ 10,000 ಪೊಲೀಸ್ ವಸತಿ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ 2000 ಕೋಟಿ ರೂಪಾಯಿ ನೀಡಿದೆ. ಇದಲ್ಲದೆ 200 ಕೋಟಿ ರೂಪಾಯಿ ವೆಚ್ಚದಲ್ಲಿ 100 ಹೊಸ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಪೊಲೀಸ್ ಸಂಸ್ಮರಣಾ ದಿನ; ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ

ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತವನ್ನು ಕಾಪಾಡಲು ಕರ್ನಾಟಕ ಸರ್ಕಾರವು ಬದ್ಧವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಅವರು ಘೋಷಿಸಿದರು.

ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುವುದಲ್ಲದೆ, ಅವರ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ ಎಂದು ಅವರು ಹೇಳಿದರು.

ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಕರ್ನಾಟಕ ಪೊಲೀಸ್ ಇವರು

ಕರ್ನಾಟಕದ 12 ಪೊಲೀಸ್ ಹುತಾತ್ಮರು 

ಕ್ರ.ಸಂಹೆಸರುಹುದ್ದೆಜಿಲ್ಲೆ
01ಪ್ರಭಾಕರ್ಸಹಾಯಕ ಕಮಾಂಡೆಂಟ್‌, ಕೆಎಸ್‌ಆರ್‌ಪಿ 3ನೇ ಪಡೆಬೆಂಗಳೂರು
02ಜಗದೀಶ್‌ಎಎಸ್‌ಐರಾಯಚೂರು
03ವೆಂಕಟೇಶ್ ಬಿಎಎಸ್‌ಐತುಮಕೂರು
04ದಾದಾವಲ್ಲಿಸಿಎಚ್‌ಸಿ 1342ಬೆಂಗಳೂರು
05ಎ ಹನುಮಂತ ರಾಜ್ಸಿಎಚ್‌ಸಿ 390ಬೆಂಗಳೂರು 
06ಬಿ ಎಚ್ ಶ್ರೀನಿವಾಸ್ಸಿಎಚ್‌ಸಿ 6748ಬೆಂಗಳೂರು ನಗರ
07ಪೀರ್ ಖಾನ್‌ಸಿಎಚ್‌ಸಿ 9723ಬೆಂಗಳೂರು ನಗರ
08ವಿಜಯಕುಮಾರ್ಸಿಎಚ್‌ಸಿ 860ಬೀದರ್
09ಸಂಜೀವ ಕುಮಾರ್ಸಿಎಚ್‌ಸಿ 750ಬೀದರ್
10ವಿಠ್ಠಲ್ ವೈ ಗಡದರ್ಸ್ಪೆಷಲ್ ಆರ್‌ಎಚ್‌ಸಿ 14, ಐಆರ್‌ಬಿ ವಿಜಯಪುರ
11ರುದ್ರಪ್ಪ ಸಿದ್ದಣ್ಣನವರ್ಪಿಸಿ 614, 3ನೇ ಪಡೆ, ಕೆಎಸ್‌ಐಎಸ್‌ಎಫ್‌ಧಾರವಾಡ
12ಮಹೇಶ್ ಜೆ ವಿಸಿಪಿಸಿ 573ತುಮಕೂರು

ಭಾರತದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ನಮ್ಮ ಪೊಲೀಸ್ ಸಿಬ್ಬಂದಿಯೇ ಪ್ರಮುಖ ಪಾತ್ರ ವಹಿಸುವುದು. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು. ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಅವರೊಂದಿಗೆ ಸರ್ಕಾರ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದೇಶದ ಜಿಡಿಪಿಗೂ ಕಾನೂನು ಸುವ್ಯವಸ್ಥೆಗೂ ನೇರ ಸಂಬಂಧ

ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದ್ದರೆ ಮಾತ್ರ ಬಂಡವಾಳ ಹೂಡಿಕೆ ಹೆಚ್ಚಾಗುತ್ತದೆ. ಹೂಡಿಕೆಯಿಂದ ಉದ್ಯೋಗ ಸೃಷ್ಟಿ ಹೆಚ್ಚಾಗುತ್ತದೆ. ಉದ್ಯೋಗ ಸೃಷ್ಟಿಯಿಂದ ಆರ್ಥಿಕತೆಯ ವೇಗ ಹೆಚ್ಚುತ್ತದೆ. ಆರ್ಥಿಕತೆಗೆ ವೇಗ ಬಂದರೆ ಅಭಿವೃದ್ಧಿ ಹೆಚ್ಚುತ್ತದೆ. ಅಭಿವೃದ್ಧಿ ಹೆಚ್ಚಾದರೆ ಜನರ ಜಿಡಿಪಿ, ತಲಾ ಆದಾಯವೂ ಹೆಚ್ಚುತ್ತದೆ. ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಅವರು ಇದೇ ವೇಳೆ ಮಾಹಿತಿ ನೀಡಿದರು.

ಗೃಹ ಸಚಿವ ಜಿ.ಪರಮೇಶ್ವರ್, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅತೀಕ್ ಎಲ್.ಕೆ., ಗೃಹ ಕಾರ್ಯದರ್ಶಿ ಉಮಾಶಂಕರ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Whats_app_banner