ಸಿದ್ದರಾಮಯ್ಯ ಖಡಕ್‌ ಪ್ರಶ್ನೆ: ನಾನೇಕೆ ರಾಜೀನಾಮೆ ನೀಡಲಿ, ಇದಕ್ಕೂ ಮೊದಲು ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆ ಕೇಳಿ-karnataka politics cm siddaramaiah questions why should i resign first get union minister hd kumar swamy resignation kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಸಿದ್ದರಾಮಯ್ಯ ಖಡಕ್‌ ಪ್ರಶ್ನೆ: ನಾನೇಕೆ ರಾಜೀನಾಮೆ ನೀಡಲಿ, ಇದಕ್ಕೂ ಮೊದಲು ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆ ಕೇಳಿ

ಸಿದ್ದರಾಮಯ್ಯ ಖಡಕ್‌ ಪ್ರಶ್ನೆ: ನಾನೇಕೆ ರಾಜೀನಾಮೆ ನೀಡಲಿ, ಇದಕ್ಕೂ ಮೊದಲು ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆ ಕೇಳಿ

ಕರ್ನಾಟಕ ಹೈಕೋರ್ಟ್‌ ತೀರ್ಪಿನ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ನಾನೇಕೇ ರಾಜೀನಾಮೆ ಕೊಡಬೇಕು. ಮೊದಲು ಜಾಮೀನಿನಲ್ಲಿರುವ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆ ಕೇಳಿ ಎಂದು ತಿರುಗೇಟು ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ನಾನೇಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನೆ ಹಾಕಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ನಾನೇಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನೆ ಹಾಕಿದರು.

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ. ನಾನು ತಪ್ಪು ಮಾಡಿಲ್ಲ. ಅಷ್ಟಕ್ಕೂ ಇಡೀ ಪ್ರಕರಣದಲ್ಲಿ ಬಿಎನ್ ಎಸ್ ಎಸ್ ಪ್ರಕಾರ 218 ಹಾಗೂ ಪಿಸಿ ಕಾಯ್ದೆ 19ರಂತೆ ತನಿಖೆಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17 ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಅದನ್ನು ಬಿಟ್ಟರೆ ಬೇರೆನೂ ಇಲ್ಲ. ಹೀಗಿದ್ದರೂ ನನ್ನ ರಾಜೀನಾಮೆ ಕೇಳೋದಿಲ್ಲ. ನೈತಿಕತೆ ಪ್ರದರ್ಶಿಸಲಿ ಎನ್ನುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜಾಮೀನಿನಲ್ಲಿದ್ದಾರೆ. ಮೊದಲು ರಾಜೀನಾಮೆಯನ್ನು ಪ್ರಧಾನಿ ನರೇಂದ್ರ ಮೋದಿ ಪಡೆದುಕೊಳ್ಳಲಿ. ನನ್ನ ಕಾನೂನು ಹೋರಾಟ ನಿಲ್ಲೋಲ್ಲ.

ಇಂದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ ಆದೇಶ ಹೊರಬಂದ ನಂತರ ಪತ್ರಿಕಾ ಗೋಷ್ಠಿ ನಡೆಸಿ, ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರ ನೇರ ಅಭಿಪ್ರಾಯ ಹೀಗಿತ್ತು.

ಬಿಜೆಪಿಯವರು ಮುಖ್ಯಮಂತ್ರಿಗಳು ರಾಜಿನಾಮೆ ಕೊಡಲು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಅವರನ್ನು ನಾವು ಎದುರಿಸುತ್ತೇವೆ. ರಾಜಿನಾಮೆ ಏಕೆ ಕೊಡಬೇಕು ಎಂದು ಪ್ರಶ್ನಿಸಿದರು. ರಾಜಿನಾಮೆ ಕೇಳುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಹೇಳಿಕೆಗೆ ಪ್ರತಿಕ್ರಿಯಿಸಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು ಅವರು ಜಾಮೀನಿನ ಮೇಲೆ ಇದ್ದಾರೆ.ಅವರು ರಾಜಿನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜಿನಾಮೆ ಕೊಡುವ ಬಗ್ಗೆ ಕುಮಾರಸ್ವಾಮಿಯವರನ್ನು ಕೇಳಿ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ನನ್ನ ಪ್ರಕಾರ ನಾನು ತಪ್ಪು ಮಾಡಿಲ್ಲ. 17 ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಬಿ ಎನ್.ಎಸ್.ಎಸ್ ಕಾಯ್ದೆಯಡಿ 218 ಆದೇಶ ಮಾಡಿಲ್ಲ. ಸಚಿವರು, ಶಾಸಕರು ನನ್ನೊಂದಿಗಿದ್ದಾರೆ. ಪಕ್ಷ ಮಾತ್ರವಲ್ಲದೇ ಹೈಕಮಾಂಡ್‌ ಕೂಡ ನನ್ನ ಬೆನ್ನಿಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎನ್ನುವುದು ಸಿದ್ದರಾಮಯ್ಯ ನೀಡಿದ ತಿರುಗೇಟು.

ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಎಂದೂ ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ಸಂಚು , ರಾಜಭವನ ದುರುಪಯೋಗ ಹಾಗೂ ದುರ್ಬಳಕೆಗೆ ನಾನು ಹೆದರುವುದಿಲ್ಲ. ರಾಜ್ಯದ ಜನ , ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ , ಕೇವಲ ನನ್ನ ಮೇಲಷ್ಟೇ ಅಲ್ಲ , ಇಡೀ ದೇಶದ ವಿರೋಧಪಕ್ಷಗಳ ವಿರುದ್ಧ ಮೇಲೆ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಮಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಆಪರೇಷನ್ ಕಮಲದ ಪ್ರಯತ್ನ ವಿಫಲ

ಬಿಜೆಪಿ ಹಾಗೂ ಜೆಡಿಎಸ್ ನವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಅವರು ಹಣಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷ ಬಂದಿದ್ದರಿಂದ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಡಿದರು. ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ,ಅವರ ಪ್ರಯತ್ನ ವಿಫಲವಾಯಿತು ಎಂದು ಆಪಾದಿಸಿದರು.

ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು

ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸುತ್ತಾ ಬಂದಿದ್ದಾರೆ. ಶೂಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ , ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳು ಹಾಗೂ ಈಗಿನ ಗ್ಯಾರಂಟಿ ಯೋಜನೆಗಳನ್ನು ಸಹ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು. ಸರ್ಕಾರಕ್ಕೆ ಕಪ್ಪು ಮಸಿ ಬಳಿಯುವುದು ಅವರ ದುರಾಲೋಚನೆ. ಹೈಕೋರ್ಟ್ ಆದೇಶದ ಪ್ರತಿಯನ್ನು ಸಂಪೂರ್ಣ ಪರಿಶೀಲಿಸಿ , ಮುಂದಿನ ಪ್ರತಿಕ್ರಿಯೆಯನ್ನು ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಇಡೀ ದೇಶದಲ್ಲಿ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ ಎನ್ನುವುದು ಸಿದ್ದರಾಮಯ್ಯ ಆರೋಪ.

ಕಾನೂನಾತ್ಮಕ ಹೋರಾಟ ನಿಲ್ಲುವುದಿಲ್ಲ

ಆದೇಶ ತೃಪ್ತಿ ತಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇದೊಂದು ಕಾನೂನಾತ್ಮಕ ಹೋರಾಟ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ ಪ್ರತಿಕ್ರಿಯೆ ನೀಡುತ್ತೇನೆ. ಅದನ್ನು ಬಿಟ್ಟು ತೃಪ್ತಿಯ ಪ್ರಶ್ನೆ ಏನೂ ಇಲ್ಲ ಎಂದರು.

mysore-dasara_Entry_Point