Karnataka polls: ದೇಗುಲ, ಮಸೀದಿಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಬೆಂಬಲಿಗರು, ಪುಲಕೇಶಿನಗರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಿಗಲೆಂದು ಪ್ರಾರ್ಥನೆ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Polls: ದೇಗುಲ, ಮಸೀದಿಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಬೆಂಬಲಿಗರು, ಪುಲಕೇಶಿನಗರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಿಗಲೆಂದು ಪ್ರಾರ್ಥನೆ

Karnataka polls: ದೇಗುಲ, ಮಸೀದಿಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಬೆಂಬಲಿಗರು, ಪುಲಕೇಶಿನಗರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಿಗಲೆಂದು ಪ್ರಾರ್ಥನೆ

ಕರ್ನಾಟಕ ರಾಜ್ಯದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ(Karnataka Congress Candidate List 2023) ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ (Akhanda Shrinivas Murthy) ಅವರ ಹೆಸರು ಇರಲೆಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ನಿನ್ನೆ ದೇವಾಲಯ ಮತ್ತು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

Karnataka polls: ದೇಗುಲ, ಮಸೀದಿಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಬೆಂಬಲಿಗರಿಂದ ಪ್ರಾರ್ಥನೆ
Karnataka polls: ದೇಗುಲ, ಮಸೀದಿಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಬೆಂಬಲಿಗರಿಂದ ಪ್ರಾರ್ಥನೆ

ಬೆಂಗಳೂರು: ಕರ್ನಾಟಕವು ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿದ್ದು, ಟಿಕೆಟ್‌ ಆಕಾಂಕ್ಷಿಗಳು ಮತ್ತು ಅವರ ಆಕಾಂಕ್ಷಿಗಳ ಕಾತುರ, ಅಸಹನೆ, ಪ್ರಾರ್ಥನೆ, ಬೇಡಿಕೆ, ಹೋರಾಟ ಇತ್ಯಾದಿಗಳಿಗೆ ರಾಜ್ಯದ ಜನರು ಸಾಕ್ಷಿಯಾಗುತ್ತಿದ್ದಾರೆ. ಕೆಲವು ಮುಖಂಡರು ತಮ್ಮ ಪಕ್ಷದ ಸೀಟು ಸಿಗದೆ ಇದ್ದಾಗ ಬೇರೆ ಪಕ್ಷಕ್ಕೆ ನೆಗೆದಿದ್ದಾರೆ. ಇನ್ನು ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಮುಂದಾಗಿದ್ದಾರೆ. ಕೆಲವು ನಾಯಕರು ಟಿಕೆಟ್‌ ಸಿಗದೆ ಇದ್ದಾಗ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಮ್ಮ ನಾಯಕರಿಗೆ ಟಿಕೆಟ್‌ ಸಿಗಲೆಂದು ಕಾಂಗ್ರೆಸ್‌ ಬೆಂಬಲಿಗರು ಪ್ರತಿಭಟನೆಯನ್ನೂ ನಡೆಸಿದ್ದರು. ಇದೀಗ ಅಖಂಡ ಶ್ರೀನಿವಾಸ ಮೂರ್ತಿ ಬೆಂಬಲಿಗರು ಟಿಕೆಟ್‌ಗಾಗಿ ದೇವರ ಮೊರೆ ಹೋಗಿದ್ದಾರೆ.

ಕರ್ನಾಟಕ ರಾಜ್ಯದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ಅವರ ಹೆಸರು ಇರಲೆಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ನಿನ್ನೆ ದೇವಾಲಯ ಮತ್ತು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಪುಲಕೇಶಿನಗರದಲ್ಲಿನ ತಂಗಬೆಟ್ಟ ಸುಬ್ರಮಣ್ಯ ದೇಗುಲದಲ್ಲಿ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಸೀದಿಯಲ್ಲಿ ಪ್ರಾರ್ಥನೆಯನ್ನೂ ಮಾಡಿ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ಸಿಗಲೆಂದು ಕೇಳಿದ್ದಾರೆ.

ನಮ್ಮ ನಾಯಕರಾದ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಟಿಕೆಟ್‌ ನೀಡಲೆಂದು ಕಾಂಗ್ರೆಸ್‌ನ ಹೈಕಮಾಂಡ್‌ನ ಬಳಿ ತೆರಳಿ ಮನವಿ ಮಾಡಲು ನಮ್ಮಿಂದ ಸಾಧ್ಯವಿಲ್ಲ. ಹೀಗಾಗಿ ದೇವರ ಮೊರೆ ಹೋಗಿದ್ದೇವೆ. ನಮ್ಮ ಪ್ರಾರ್ಥನೆ ದೇವರಿಗೆ ತಲುಪಲಿ, ಕಾಂಗ್ರೆಸ್‌ ಪಕ್ಷಕ್ಕೂ ತಲುಪಲಿ ಎಂದು ಪ್ರಾರ್ಥಿಸಿದ್ದಾರೆ.

"ಈ ಬಾರಿ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಟಿಕೆಟ್‌ ನೀಡಿದರೆ ಅವರನ್ನು ಕಳೆದ ಬಾರಿಗಿಂತಲೂ ಅಧಿಕ ಮತದಿಂದ ಗೆಲ್ಲಿಸುವೆವು" ಎಂದು ಬೆಂಬಲಿಗರು ತಿಳಿಸಿದ್ದಾರೆ. ಪೂಜೆ, ಪ್ರಾರ್ಥನೆ ಬಳಿಕ ಇವರು ಅಖಂಡ ಶ್ರೀನಿವಾಸಮೂರ್ತಿ ಮತ್ತು ಕಾಂಗ್ರೆಸ್‌ಗೆ ಜೈಕಾರ ಹಾಕಿದ್ದಾರೆ.

ಕಳೆದ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರು 81 ಸಾವಿರ ಮತಗಳಿಂದ ಅಮೋಘ ಗೆಲುವು ಸಾಧಿಸಿದ್ದರು. ಆದರೆ, ಈ ಬಾರಿಯ ಎರಡು ಪಟ್ಟಿಯಲ್ಲಿಯೂ ಅಖಂಡರ ಹೆಸರು ಇರಲಿಲ್ಲ. ಈ ಬಾರಿ ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್‌ ನೀಡಲು ವಿಳಂಬವಾಗುತ್ತಿರುವುದಕ್ಕೆ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ ದೇಗುಲ, ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಪುಲಕೇಶಿನಗರ ಅಸೆಂಬ್ಲಿ ಕ್ಷೇತ್ರವು ಭಾರತದ ದಕ್ಷಿಣ ರಾಜ್ಯವಾದ ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಲ್ಲಿ ಒಂದಾಗಿದೆ . ಇದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಭಾಗವಾಗಿದೆ. ಇದು 2008ರಲ್ಲಿ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಿದೆ. ಇದಕ್ಕೂ ಮೊದಲು ಯಲಹಂಕ ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಈ ಕ್ಷೇತ್ರದ ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ 2020ರಲ್ಲಿ ಗಲಭೆಯೂ ನಡೆದಿತ್ತು. ಅಖಂಡ ಶ್ರೀನಿವಾಸಮೂರ್ತಿ ಅವರು ಜೆಡಿಎಸ್‌ನಲ್ಲಿ ಅಡ್ಡಮತದಾನ ಮಾಡಿ ಅಮಾನತುಗೊಂಡಿದ್ದರು. ಬಳಿಕ ಕಾಂಗ್ರೆಸ್‌ ಸೇರಿದ್ದರು.

Whats_app_banner