2nd Puc Result: ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ, ನೋಡೋದು ಹೇಗೆ; ರಿಸಲ್ಟ್ ನೋಡಲು ಇಲ್ಲಿದೆ ನೇರ ಲಿಂಕ್
Karnataka PUC 2 Results 2025: ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಏಪ್ರಿಲ್‌ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದ್ದು, ನಿಖರವಾದ ದಿನಾಂಕ, ಸಮಯದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

Karnataka PUC 2 Results 2025: ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟಗಳಲ್ಲಿ ಒಂದು. ಈಗಾಗಲೇ ಪಿಯುಸಿ ಪರೀಕ್ಷೆಗಳು ಮುಗಿದಿದ್ದು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಏಪ್ರಿಲ್ ತಿಂಗಳಿನಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದ್ದು, ದಿನಾಂಕ, ಸಮಯದ ಬಗ್ಗೆ ಇನ್ನೂ ನಿಖರವಾದ ಮಾಹಿತಿ ಲಭ್ಯವಿಲ್ಲ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇತ್ತೀಚೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ (ದ್ವಿತೀಯ ಪಿಯುಸಿ ಪರೀಕ್ಷೆ 1) ತಾತ್ಕಾಲಿಕ ಉತ್ತರ ಪತ್ರಿಕೆಯನ್ನು ಬಿಡುಗಡೆ ಮಾಡಿದ್ದು ಇನ್ನು ಕೆಲವು ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು karresults.nic.in ವೆಬ್‌ಸೈಟ್‌ನಲ್ಲಿ ದ್ವಿತೀಯ ಪಿಯುಸಿ ರಿಸ್ಟಲ್ ನೋಡಬಹುದಾಗಿದೆ. ಫಲಿತಾಂಶ ಪ್ರಕಟವಾಗುವ ಮೊದಲು ನಿಖರ ದಿನಾಂಕ ಹಾಗೂ ಸಮಯ ತಿಳಿಯಲು ವಿದ್ಯಾರ್ಥಿಗಳು ನಿಯಮಿತವಾಗಿ ಕೆಎಸ್‌ಇಎಬಿ ಅಧಿಕೃತ ವೆಬ್‌ಸೈಟ್ ಆಗಿರುವ kseab.karnataka.gov.in ಗೆ ಭೇಟಿ ನೀಡಬೇಕು ಎಂದು ಮಂಡಳಿ ಸೂಚಿಸಿದೆ.
ಕೆಎಸ್‌ಇಎಬಿ ಅಧಿಕೃತ ವೆಬ್‌ಸೈಟ್‌ನಲ್ಲಿ ದ್ವಿತೀಯ ಪಿಯುಸಿ ಎಲ್ಲಾ 35 ವಿಷಯಗಳ ಮಾದರಿ ಉತ್ತರ ಪತ್ರಿಕೆ ಲಭ್ಯವಿದೆ. ಮಾದರಿ ಉತ್ತರ ಪತ್ರಿಕೆ ಪರಿಶೀಲಿಸಿದ ನಂತರ, ವಿದ್ಯಾರ್ಥಿಗಳು ಯಾವುದೇ ಆಕ್ಷೇಪಣೆಗಳನ್ನು ಹೊಂದಿದ್ದರೆ, ಅವರು ಅಬ್ಜೆಕ್ಷನ್ ವಿಂಡೋವನ್ನು ಬಳಸಬಹುದು ಎಂದು ಕೆಎಸ್‌ಇಎಬಿ ತಿಳಿಸಿದೆ. ಅಬ್ಜೆಕ್ಷನ್ ವಿಂಡೋವನ್ನು ತೆರೆಯಲು ಪಿಯುಸಿ ಪರೀಕ್ಷೆಯ ನೋಂದಣಿ ಸಂಖ್ಯೆಗಳನ್ನು ನಮೂದಿಸಬೇಕಾಗುತ್ತದೆ.
ಪಿಯುಸಿ ಫಲಿತಾಂಶ ಪರಿಶೀಲಿಸುವುದು ಹೇಗೆ?
- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.inಗೆ ಹೋಗಿ.
- ಮೇನ್ ಪೇಜ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 1 ಎಂಬಲ್ಲಿ ಕ್ಲಿಕ್ ಮಾಡಿ ಲಿಂಕ್ ಓಪನ್ ಮಾಡಿ.
- ನಂತರ ಲಾಗಿನ್ ವಿವರಗಳನ್ನು ನಮೂದಿಸಿ
- ನಂತರ ಸಬ್‌ಮಿಟ್ ಕೊಟ್ಟು ಫಲಿತಾಂಶ ಪರಿಶೀಲಿಸಿ.
- ರಿಸ್ಟಲ್ ಪುಟವನ್ನು ಡೌನ್‌ಲೋಡ್ ಮಾಡಿಟ್ಟುಕೊಳ್ಳಿ. ಇದು ನಿಮಗೆ ಭವಿಷ್ಯದಲ್ಲಿ ಬೇಕಾಗಬಹುದು.
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಂದು ಪ್ರಾರಂಭವಾಗಿ ಮಾರ್ಚ್ 20 ರಂದು ಮುಕ್ತಾಯಗೊಂಡಿತು. ಎಲ್ಲಾ ಪರೀಕ್ಷಾ ದಿನಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಪರೀಕ್ಷೆಗಳು ಒಂದೇ ಪಾಳಿಯಲ್ಲಿ ನಡೆದಿದ್ದವು.
12ನೇ ತರಗತಿಯ ಪರೀಕ್ಷೆಯು ಕನ್ನಡ ಮತ್ತು ಅರೇಬಿಕ್ ವಿಷಯಗಳೊಂದಿಗೆ ಪ್ರಾರಂಭವಾಗಿ ಹಿಂದಿ ವಿಷಯದೊಂದಿಗೆ ಕೊನೆಗೊಂಡಿತು. ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
