ಕರ್ನಾಟಕದಲ್ಲಿ ಭಾರಿ ಮಳೆಗೆ ತುಂಬಿಹರಿದ ನದಿಗಳು; ಹಲವು ಜಲಾಶಯಗಳು ಭರ್ತಿ; ಇಲ್ಲಿದೆ ದೃಶ್ಯವೈಭವ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಬಿಡದೆ ಮಳೆ ಸುರಿಯುತ್ತಿವೆ. ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿವೆ. ಪ್ರಮುಖ ಜಲಾಶಯಗಳು ಭರ್ತಿಯಾಗಿವೆ.

ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆ ಸುರಿಯುತ್ತಿದೆ, ಜೂನ್ 18ರ ಬುಧವಾರವಾದ ಇಂದು ಕೂಡಾ ಮಳೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಈ ಮೂರೂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅತ್ತ ಮಲೆನಾಡು ಭಾಗದಲ್ಲೂ ಮಳೆಯಾಗುತ್ತಿದ್ದು, ಜನರು ಮನೆಯ ಹೊರಗಡೆ ಹೋಗಲು ಕಷ್ಟಪಡುವಂತಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕಕ್ಕೆ ಒತ್ತಿಕೊಂಡಿರುವಂತೆ ಇರುವ ಕೇರಳ ಜಿಲ್ಲೆಯ ವಯನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಕಬಿನಿ ಡ್ಯಾಮ್‌ಗೆ ಒಳಹರಿವು ಹೆಚ್ಚಿದೆ. ಉಳಿದಂತೆ ರಾಜ್ಯದ ಬಹುತೇಕ ಡ್ಯಾಮ್‌ಗಳು ಭರ್ತಿಯಾಗಿವೆ.
ಕಬಿನಿ ಜಲಾಶಯ ಭರ್ತಿ
ಕೊಡಗಿನಲ್ಲಿ ಮಳೆ
ತುಂಬಿ ಹರಿಯುತ್ತಿರುವ ಚುಂಚನಕಟ್ಟೆ ಜಲಪಾತ
ತುಂಬಿ ಹರಿಯಯುತ್ತಿರುವ ಕಾವೇರಿ ನದಿ
ತುಂಬಿ ಹರಿಯುತ್ತಿರುವ ಲಕ್ಷ್ಮಣತೀರ್ಥ
ಹವಾಮಾನ ಇಲಾಖೆ ಪ್ರಕಾರ ಜುಲೈ 19ರವರೆಗೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅತ್ತ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಮನ್ಸೂಚನೆ ಇದೆ.
ಇನ್ನಷ್ಟು ಮಳೆ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ | ಕರ್ನಾಟಕ ಹವಾಮಾನ ಜುಲೈ 18; ರಾಜ್ಯದಲ್ಲಿ ಮುಂಗಾರು ಮಳೆ, ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
