ಕನ್ನಡ ಸುದ್ದಿ  /  ಕರ್ನಾಟಕ  /  Karnataka Rain: ಹವಾಮಾನ ವರದಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ, ಕರಾವಳಿಯಲ್ಲಿ ತಂಪಾಗುವುದೇ ಇಳೆ

Karnataka Rain: ಹವಾಮಾನ ವರದಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ, ಕರಾವಳಿಯಲ್ಲಿ ತಂಪಾಗುವುದೇ ಇಳೆ

ಹವಾಮಾನ ಇಲಾಖೆ ಬೆಂಗಳೂರು (Met Centre Bengaluru) ಇಂದಿನ ಹವಾಮಾನ ವರದಿ (IMD weather forecast karnataka) ಪ್ರಕಟಿಸಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿಯ ಕೆಲವು ಕಡೆ ಹಗುರ/ಸಾಧಾರಣ ಮಳೆಯಾಗುವ ಸೂಚನೆಯನ್ನೂ ನೀಡಿದೆ.

ಹವಾಮಾನ ವರದಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ
ಹವಾಮಾನ ವರದಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ (HT_PRINT)

ಬೆಂಗಳೂರು: ಬೆಂಗಳೂರು ಸೇರಿದಂತೆ (Bengaluru Rain) ರಾಜ್ಯದ ಕೆಲವು ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಕಾದ ನೆಲ ತಂಪಾಗುತ್ತಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಕೆಲವು ದಿನದ ಹಿಂದೆ ಒಂದು, ಎರಡು ಮಳೆಯಾಗಿದ್ದು, ಗೋರ್ಕಲ್ಲ ಮೇಲೆ ಮಳೆ ಸುರಿದಂತಾಗಿದೆ. ಹವಾಮಾನ ಇಲಾಖೆ ಬೆಂಗಳೂರು (Met Centre Bengaluru) ಇಂದಿನ ಹವಾಮಾನ ವರದಿ (IMD weather forecast karnataka) ಪ್ರಕಟಿಸಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿಯ ಕೆಲವು ಕಡೆ ಹಗುರ/ಸಾಧಾರಣ ಮಳೆಯಾಗುವ ಸೂಚನೆಯನ್ನೂ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 8ರಿಂದ 11ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೃಹತ್‌ ಬೆಂಗಳೂರಿನ ಹಲವು ಭಾಗಗಳಲ್ಲಿ ನಿನ್ನೆ ಮಧ್ಯಾಹ್ನ ಮಳೆಯಾಗಿತ್ತು. ಅಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಅನಿರೀಕ್ಷಿತ ಮಳೆಗೆ ಬೆಂದಕಾಲೂರು ತಂಪಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ವರದಿ

ಬೆಂಗಳೂರು ಹವಾಮಾನ ಕೇಂದ್ರದ ಅಪ್‌ಡೇಟ್‌ ಪ್ರಕಾರ ಉತ್ತರ ಒಳನಾಡಿನ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಹಗುರ/ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್‌, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಕೊಪ್ಪಳ ಸೇರಿದಂತೆ ಉತ್ತರ ಒಳನಾಡಿನ ಎಲ್ಲಾ ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡು ಹವಮಾನ ವರದಿ

ಇಂದು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ/ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗಲಿದೆ.

ಕರಾವಳಿ ಹವಾಮಾನ ವರದಿ

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರ/ ಸಾಧಾರಣ ಮಳೆಯಾಗಲಿದೆ. ಬೇರೆ ಯಾವುದೇ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲ.

ಇತ್ತೀಚೆಗೆ ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದ ಅಪ್‌ಡೇಟ್‌ ಪ್ರಕಾರ ಮೇ 14ರವರೆಗೆ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆಯನ್ನು ಐಎಂಡಿ ನೀಡಿದೆ. ಮಳೆ ಬೀಳದ ಕಡೆಗಳಲ್ಲಿ ತಾಪಮಾನ ತುಸು ತಗ್ಗಲಿದೆ. ಇಂದು ಮತ್ತು ನಾಳೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

IPL_Entry_Point