Karnataka Rains: ಕರಾವಳಿ 3 ಜಿಲ್ಲೆಗಳಲ್ಲೂ ಭಾರೀ ಮಳೆ, ಉತ್ತರ ಕರ್ನಾಟಕ, ಮಲೆನಾಡು ಭಾಗದಲ್ಲೂ ಅಲರ್ಟ್‌
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಕರಾವಳಿ 3 ಜಿಲ್ಲೆಗಳಲ್ಲೂ ಭಾರೀ ಮಳೆ, ಉತ್ತರ ಕರ್ನಾಟಕ, ಮಲೆನಾಡು ಭಾಗದಲ್ಲೂ ಅಲರ್ಟ್‌

Karnataka Rains: ಕರಾವಳಿ 3 ಜಿಲ್ಲೆಗಳಲ್ಲೂ ಭಾರೀ ಮಳೆ, ಉತ್ತರ ಕರ್ನಾಟಕ, ಮಲೆನಾಡು ಭಾಗದಲ್ಲೂ ಅಲರ್ಟ್‌

Rain Updates ಕರ್ನಾಟಕದ 13 ಜಿಲ್ಲೆಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯಾಗಲಿದೆ.

ಕರ್ನಾಟದಲ್ಲಿ ಶನಿವಾರವೂ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರ್ನಾಟದಲ್ಲಿ ಶನಿವಾರವೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಶನಿವಾರವೂ ಹದಿಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ( Karnataka Rains) ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರವು( IMD Bangalore Center) ನೀಡಲಾಗಿದೆ. ಮೂರು ಜಿಲ್ಲೆಗಳಲ್ಲಿ ಆರೆಂಜ್‌ , ಎಂಟು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಒಂದು ವಾರದಿಂದ ಉತ್ತಮ ಮಳೆಯಾಗುತ್ತಿರುವ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ( Dakshina Kannada Rains) ಜಿಲ್ಲೆಗಳಲ್ಲಿ ಭಾರೀಯಿಂದ ಅತೀ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬೀದರ್‌, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಶಿವಮೊಗ್ಗ( Shimoga Rains), ಚಿಕ್ಕಮಗಳೂರು, ಹಾಸನ, ಕೊಡಗು( Kodagu Rain) ಜಿಲ್ಲೆಗಳಲ್ಲೂ ಭಾರೀ ಮಳೆಯಾಗಬಹುದು ಎನ್ನುವ ಸೂಚನೆ ನೀಡಲಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲೆಲ್ಲಿ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಶನಿವಾರವೂ ಮೂರೂ ಜಿಲ್ಲೆಗಳಲ್ಲೀ ಭಾರೀಯಿಂಧ ಅತೀ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೂರೂ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಇದೆ.

ಇದಲ್ಲದೇ ಕರಾವಳಿ ಭಾಗದ ಮೂರೂ ಜಿಲ್ಲೆಗಳಲ್ಲಿ ಮುಂದಿನ ಆರು ದಿನ ಕಾಲವೂ ಭಾರೀ ಮಳೆಯ ಸೂಚನೆಯನ್ನು ನೀಡಲಾಗಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಯ ಕೆಲ ಭಾಗದಲ್ಲೀ ಭಾರೀ ಮಳೆಯಾಗಬಹುದು. ಈ ಆರೂ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಣೆಯಾಗಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ ಶನಿವಾರ ಭಾರೀ ಮಳೆಯ ಮುನ್ಸೂಚನೆಯಿದೆ. ಈ ನಾಲ್ಕು ಜಿಲ್ಲೆಗಳಿಗೂ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಎಲ್ಲಾ ಜಿಲ್ಲೆಗಳಲ್ಲಿ ನಿರಂತರ ಗಾಳಿಯ ವೇಗವು ಅಧಿವಾಗಿರಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಲಘು ಮಳೆಯಾಗಬಹುದು. ಗಾಳಿಯ ಪ್ರಮಾಣ ಈ ಭಾಗದಲ್ಲೂ ಇರಲಿದೆ.

ಕರಾವಳಿ ಭಾಗದಲ್ಲಿ ಗಾಳಿಯ ವೇಗವೂ ಹೆಚ್ಚೇ ಇರುವುದರಿಂ ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಬೆಂಗಳೂರು ಹವಾಮಾನ

ಬೆಂಗಳೂರಿನಲ್ಲಿ ಶುಕ್ರವಾರವೂ ಮಳೆಯಾಗಿದ್ದು, ಶನಿವಾರವೂ ಮಳೆ ಯಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.

ಗಾಳಿಯ ವೇಗವು 35ರಿಂದ 45 ಕಿ.ಮಿವರೆಗೂ ಇರಬಹುದು. ಮುಂದಿನ ಎರಡು ದಿನವೂ ಬೆಂಗಳೂರಿನಲ್ಲಿ ಚಳಿಯ ಜತೆಗೆ ಮಳೆಯ ವಾತಾವರಣವೂ ಕಂಡು ಬರಬಹುದು.

ಸುರಿದ ಮಳೆ

ಕರ್ನಾಟಕದ ನಾನಾ ಭಾಗಗಳಲ್ಲಿ ಶುಕ್ರವಾರವೂ ಮಳೆಯಾಗಿದೆ. ದಕ್ಷಿಣ ಕನ್ನಡದ ಧರ್ಮಸ್ಥಳದಲ್ಲಿ ಅತ್ಯಧಿಕ ಮಳೆಯಾಗಿದೆ. ಶಿವಮೊಗ್ಗದ ಆಗುಂಬೆ, ಕೊಡಗಿನ ಭಾಗಮಂಡಲ, ಬೆಂಗಳೂರು ನಗರದ ಹಲವು ಭಾಗಗಳಲ್ಲೂ ಉತ್ತಮ ಮಳೆಯಾಗಿದೆ.

ದಕ್ಷಿಣ ಕನ್ನಡದ ಬೆಳ್ತಂಗಡಿ, ಮಾಣಿ, ಪಣಂಬೂರು, ಮೂಲ್ಕಿ, ಉಡುಪಿ, ಸಿದ್ದಾಪುರ, ಕೋಟ, ಕುಂದಾಪುರ, ಉತ್ತರ ಕನ್ನಡದ ಕದ್ರಾ, ಮಂಕಿ, ಗೇರುಸೊಪ್ಪ, ಕಾರವಾರ, ಜಗಲ್‌ಬೆಟ್‌, ಕುಮಟಾ, ಬೀದರ್‌, ಹುಮ್ನಾಬಾದ್‌. ಕಲಬುರಗಿಯ ಸೇಡಂ, ಯಾದಗಿರಿಯ ಸೈದಾಪುರ,ಶಹಾಪುರ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ, ಕೊಟ್ಟಿಗೆಹಾರ, ಕಮ್ಮರಡಿ, ಕಳಸ, ಜಯಪುರ, ಬಾಗಲಕೋಟೆ ಜಿಲ್ಲೆ ಬಾದಾಮಿ, ಇಳಕಲ್‌, ರಾಯಚೂರಿನ ಮುದಗಲ್‌, ಗಬ್ಬೂರು, ರಾಮನಗರ ಹಗೂ ಮಾಗಡಿ, ಚನ್ನಪಟ್ಟಣ, ಹಾಸನದ ಸಕಲೇಶಪುರ, ಕೊಡಗಿನ ಹಾರಂಗಿ, ಸೋಮವಾರಪೇಟೆಯಲ್ಲೂ ಮಳೆಯಾಗಿದೆ.

Whats_app_banner