Karnataka Rains: ಮುಂದಿನ ಆರು ದಿನ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಇಂದು ಬೆಂಗಳೂರಿನಲ್ಲೂ ಮಳೆ ಮುನ್ಸೂಚನೆ
ಕರ್ನಾಟಕದಲ್ಲಿ ಏಪ್ರಿಲ್‌ನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದ್ದೆ,ಮೇ ನಲ್ಲೂ ಮಳೆ ಇದೆ. ಗುರುವಾರದಿಂದ ಸತತ ಆರು ದಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು:ಕರ್ನಾಟಕದಲ್ಲಿ ಮೇ ತಿಂಗಳ ಮೊದಲ ವಾರದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರ ನೀಡಿದೆ. ಬೆಂಗಳೂರು ನಗರ ಮಾತ್ರಲ್ಲದೇ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಹಾವೇರಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ ಸಹಿತ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರುಜ, ಕೊಡಗು, ಮೈಸೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುರುವಾರವು ಸೇರಿದಂತೆ ಇತರೆ ದಿನಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕೆಲವು ಭಾಗಗಳಲ್ಲಿ ಬಿರುಗಾಳಿಯೂ ಕಾಣಿಸಿಕೊಳ್ಳಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ಮಳೆ ಮುನ್ಸೂಚನೆ ಹೇಗಿದೆ
ಮೇ 1 ರ ಗುರುವಾರದಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ ಗುಡುಗು ಸಹಿತ ಬರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದೆ
ಮೇ 2 ರ ಶುಕ್ರವಾರದಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಗುಡುಗು ಸಹಿತ ಬರಲಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆ ಗುಡುಗು ಸಹಿತ ಆಗಬಹುದು. ಗಾಳಿ ವೇಗವೂ ಹೆಚ್ಚಲಿದೆ.
ಮೇ 3 ರ ಶನಿವಾರದಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗಬಹುದು
ಮೇ 4ರ ಭಾನುವಾರದಂದು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ, ಮೇ 5 ರ ಸೋಮವಾರ ಹಾಗೂ ಮೇ 6ರ ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗಬಹುದು. ಮಂಗಳವಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸೂಚನೆ ನೀಡಲಾಗಿದೆ.
ಮೇ 1 ರ ಗುರುವಾರದಂದು ಉತ್ತರ ಒಳನಾಡಿನ ಹಾವೇರಿ. ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳ ಒಂದು ಅಥವಾ ಎರಡು ಕಡಗಳಲ್ಲಿ ಹಗುರ ಮಳೆ ಗುಡುಗು ಸಹಿತ ಮೇ 1 ರ ಗುರುವಾರ ಆಗಬಹುದು. ಗಾಳಿಯ ವೇಗವೂ ಈ ಜಿಲ್ಲೆಗಳಲ್ಲಿ ಹೆಚ್ಚಲಿದೆ.
ಮೇ 2 ರ ಶುಕ್ರವಾರ ಹಾಗೂ ಮೇ 3ರ ಶನಿವಾರ ಬೆಳಗಾವಿ, ಹಾವೇರಿ, ಧಾರವಾಡ, ಗದ, ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು,
ಮೇ 4 ರ ಸೋಮವಾರ ಯಾದಗಿರಿ, ಬೀದರ್, ಕಲಬುರಗಿ, ಕೊಪ್ಪಳ, ಗದಗ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆ ಗುಡುಗು ಸಹಿತ ಆಗಲಿದೆ.
ಮೇ 5 ಮತ್ತು 6ರಂದು ಉತ್ತರ ಕರ್ನಾಟಕದ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗಿನೊಂದಿಗೆ ಮಧ್ಯಮ ಮಳೆಯಾಗಲಿದೆ.
ಮೇ 1 ರ ಗುರುವಾರದಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಹಾಸನ,ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಗುಡುಗು ಸಹಿತ ಬರಲಿದೆ. ಇದಲ್ಲದೇ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಬಿರುಗಾಳಿಯೊಂದಿಗೆ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಮೇ 2 ರ ಶುಕ್ರವಾರದಿಂದ ಮೇ 6ರ ಮಂಗಳವಾರದವರೆಗೂ ದಕ್ಷಿಣ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹಗುರದಿಂದ ಮಧ್ಯಮ ಮಳೆ ಗುಡುಗು ಸಹಿತ ಇರಲಿದೆ.
ಉತ್ತಮ ಮಳೆ
ಮಂಗಳವಾರ ಹಾಗೂ ಬುಧವಾರದಂದು ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಮೈಸೂರು ನಗರ, ಸರಗೂರು, ಎಚ್.ಡಿ.ಕೋಟೆ, ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ, ಕೆಆರ್‌ಎಸ್. ಚಿಕ್ಕಮಗಳೂರಿನ ಎನ್‌ಆರ್‌ಪುರ, ಶೃಂಗೇರಿ, ಹಾವೇರಿ ಜಿಲ್ಲೆಯ ಹಿರೇಕೇರೂರು, ಕೊಡಗು ಜಿಲ್ಲೆಯ ನಾಪೊಕ್ಲು, ಭಾಗಮಂಡಲ, ಹಾರಂಗಿಯಲ್ಲೂ ಮಳೆಯಾಗಿದೆ.
ಬೆಂಗಳೂರು ಹವಾಮಾನ
ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಬಲವಾದ ಗಾಳಿಯೊಂದಿಗೆ ಹಗುರ ಮಳೆಯೂ ಆಗಬಹುದು. ಗುಡುಗು ಕೂಡ ಇರಲಿದೆ. ಎರಡೂ ದಿನವೂ ಬೆಂಗಳೂರಿನ ಉಷ್ಣಾಂಶವು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.