ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಇಂದಿನಿಂದ ಎರಡು ದಿನ ಭಾರೀ ಮಳೆ, ಕರಾವಳಿ, ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್

Karnataka Rains: ಇಂದಿನಿಂದ ಎರಡು ದಿನ ಭಾರೀ ಮಳೆ, ಕರಾವಳಿ, ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್

Rain Updates ಕರ್ನಾಟಕದ ಕರಾವಳಿ, ಮಲೆನಾಡು,ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂನ್‌ 9 ಹಾಗೂ 10ರ ಭಾನುವಾರ ಹಾಗೂ ಸೋಮವಾರ ಭಾರೀ ಮಳೆಯಾಗಲಿದೆ( Heavy Rains) ಎಂದು ಭಾರತೀಯ ಹವಾಮಾನ ಇಲಾಖೆ( IMD) ಮುನ್ಸೂಚನೆ ನೀಡಿದೆ.

ಶನಿವಾರ ರಾತ್ರಿಯೂ ಕರ್ನಾಟಕದ ಹಲವೆಡೆ ಮಳೆಯಾಗಿದೆ.
ಶನಿವಾರ ರಾತ್ರಿಯೂ ಕರ್ನಾಟಕದ ಹಲವೆಡೆ ಮಳೆಯಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಜೂನ್‌ 9 ಮತ್ತು 10ರ ಭಾನುವಾರ ಹಾಗೂ ಸೋಮವಾರದಂದು ಕರ್ನಾಟಕದ ಹಲವು ಕಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿಯೂ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರವು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಆಯಾ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿವೆ. ಕೆಲವು ಕಡೆ ಹಳ್ಳ ಕೊಳ್ಳಗಳ ನೀರು ಉಕ್ಕಿ ಹರಿದು ಸಮಸ್ಯೆ ಸೃಷ್ಟಿಸುವ ಸಾಧ್ಯತೆಯೂ ಇರುವುರಿಂದ ಜನ ಸಾಮಾನ್ಯರು ಗಮನ ನೀಡಬೇಕು ಎಂದು ಸೂಚಿಸಲಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಜಿಲ್ಲೆಗಳಲ್ಲಿ ಚದುರಿನ ಭಾರೀ ಮಳೆಯೊಂದಿಗೆ ಪ್ರತ್ಯೇಕ ಭಾರೀ , ಅತಿ ಭಾರೀ ಮಳೆಯಾಗುವ ಸಾಧ್ಯತ ದಟ್ಟವಾಗಿದೆ. ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಆಗಲಿದೆ. ದಕ್ಷಿಣ ಕನ್ನಡ, ಜಿಲ್ಲೆಯಲ್ಲೂ ಭಾರೀ ಮಳೆಯಾಗಲಿದ್ದು. ಎಲ್ಲೆಡೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದೇ ದಿನ ಬೆಳಗಾವಿ, ಬೀದರ್‌, ಧಾರವಾಡ, ರಾಯಚೂರು, ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ತುಮಕೂರು. ವಿಜಯನಗರ ಜಿಲ್ಲೆಗಳ ಕೆಲವೆಡೆಯೂ ಮಳೆಯಾಗಲಿದೆ.

ಜೂನ್‌ 10 ರ ಸೋಮವಾರದಂದು ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಜಿಒಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಆಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣಾ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆ ಮೇಲೆ ಚದುರಿನ ಭಾರೀ ಮಳೆಯಿಂದ ಪ್ರತ್ಯೇಕವಾದ ಭಾರೀ ಮಳೆ ಗುಡುಗು ಸಹಿತ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಒಂಡೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಜೂನ್‌ 11ರ ಮಂಗಳವಾರದಂದು ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಬಹುದು. ಗುಡುಗು,ಸಿಡಿಲು ಕೂಡ ಇರಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಆಗಬಹುದು. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ. ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂಡ ಮಾರುತದ ಹವಾಮಾನವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೆೇಗದಲ್ಲಿ65 ಕಿ.ಮೀ ವೇಗದವರೆಗೂ ಬೀಸುವ ಗಾಳಿಯೊಂದಿಗೆ ಕರ್ನಾಟಕದ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕು. ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.

ಟಿ20 ವರ್ಲ್ಡ್‌ಕಪ್ 2024