ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಭಾರೀ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ, ಉತ್ತರ ಕನ್ನಡದಲ್ಲೂ ಕರ್ನಲ್‌ ಹಿಲ್‌ ಗುಡ್ಡವೂ ಕುಸಿತ

Karnataka Rains: ಭಾರೀ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ, ಉತ್ತರ ಕನ್ನಡದಲ್ಲೂ ಕರ್ನಲ್‌ ಹಿಲ್‌ ಗುಡ್ಡವೂ ಕುಸಿತ

Rain Updates ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಗುಡ್ಡ ಕುಸಿತದ ಪ್ರಕರಣಗಳೂ ವರದಿಯಾಗಿವೆ.ವರದಿ: ಹರೀಶ್‌ ಮಾಂಬಾಡಿ,ಮಂಗಳೂರು

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನಲ್ಲಿ ಗುಡ್ಡಕುಸಿತವಾಗಿದೆ,
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನಲ್ಲಿ ಗುಡ್ಡಕುಸಿತವಾಗಿದೆ,

ಚಿಕ್ಕಮಗಳೂರು: ಕರ್ನಾಟಕ ಚಿಕ್ಕಮಗಳೂರು, ಉತ್ತರ ಕನ್ನಡ ಸೇರಿದಂತೆ ಹಲವು ಕಡೆಗಳಲ್ಲಿ ಭಾನುವಾರ ಭಾರೀ ಮಳೆ ಸುರಿದಿದೆ. ಇದರಿಂದ ಕೆಲವಡೆಗೆ ಗುಡ್ಡ ಕುಸಿತ ಕಂಡು ಸಂಚಾರಕ್ಕೆ ವ್ಯತ್ಯಯವಾಗಿದೆ. ಗುಡ್ಡ ರಸ್ತೆಗೆ ಉರುಳಿದ್ದರೂ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳೀಯರ ಸಹಕಾರದಿಂದ ಅಧಿಕಾರಿಗಳು ಗುಡ್ಡ ಕುಸಿತದ ಭಾಗ ತೆರವು ಮಾಡುವ ಪ್ರಯತ್ನ ನಡೆಸಿದ್ದಾರೆ. ಮುಖ್ಯವಾಗಿ ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯ ರಾಷ್ಟ್ರೀ ಯ ಹೆದ್ದಾರಿ ಅಲೇಖಾನ್ ನಲ್ಲಿ ಭಾನುವಾರ ರಾತ್ರಿ ವೇಳೆ ಮಣ್ಣು ಕುಸಿದಿದೆ. ಇನ್ನಷ್ಟು ಮಣ್ಣು ಕುಸಿಯುವ ಸನ್ನಿವೇಶ ಇರುವುದರಿಂದ ಮುನ್ನೆಚ್ಚರಿಕೆ ವಹಿಸಲಾಗಿದೆ. ಇದೇ ರೀತಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮೀಪದಲ್ಲೂ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾದರೂ ಕೂಡಲೇ ಮಣ್ಣನ್ನು ತೆರವು ಮಾಡಲಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಚಾರ್ಮಾಡಿಯಲ್ಲಿ ಹೇಗಿದೆ ಸ್ಥಿತಿ

ಮಳೆ ಪ್ರಮಾಣ ಹೆಚ್ಚುತ್ತಿದ್ದಂತೆ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಚಿಕ್ಕಮಗಳೂರು ದಕ ಜಿಲ್ಲೆ ಸಂಪರ್ಕದ ಮಂಗಳೂರು-ವಿಲ್ಲು ಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವ್ಯಾಪ್ತಿಯ ಆಲೇಖಾನ್ ಬಳಿ ಗುಡ್ಡ ಕುಸಿದು ರಸ್ತೆ ಬದಿಗೆ ಬಿದ್ದಿದೆ. ಕುಸಿತದ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಸ್ತೆಯನ್ನು ಆವರಿಸಿತ್ತು. ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುತ್ತಿದ್ದಾರೆ. ಪ್ರಸ್ತುತ ಸಂಚಾರಕ್ಕೆ ಹೆಚ್ಚಿನ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ ಮಳೆ ಇನ್ನಷ್ಟು ಮುಂದುವರಿದರೆ ಹೆಚ್ಚಿನ ಕುಸಿತ ಉಂಟಾಗುವ ಭೀತಿ ಎದುರಾಗಿದೆ. ಸಾವಿರಾರು ವಾಹನಗಳ ಸಂಚಾರವಿರುವ ಈ ಘಾಟಿಯಲ್ಲಿ ಇನ್ನಷ್ಟು ಕುಸಿತ ಉಂಟಾದರೆ ಸಂಪರ್ಕ ಕಡಿತ ಗೊಳ್ಳುವ ಸಾಧ್ಯತೆ ಇದೆ ಎನ್ನುವುದು ಪೊಲೀಸ್‌ ಅಧಿಕಾರಿಗಳ ವಿವರಣೆ.

ಟ್ರೆಂಡಿಂಗ್​ ಸುದ್ದಿ

ಭಾನುವಾರ ರಾತ್ರಿಯಾಗಿದ್ದರಿಂದ ಕತ್ತಲಿನಲ್ಲೇ ವಾಹನ ಸವಾರರು ಅಲ್ಲಿಂದ ಹೋಗುತ್ತಿದ್ದುದು ಕಂಡು ಬಂದಿತು. ಅದರಲ್ಲೂ ಮತ್ತೆ ಏನಾದರೂ ಸಮಸ್ಯೆಯಾಗಬಹುದಾ ಎನ್ನುವ ಆತಂಕವೂ ಹಲವರಲ್ಲಿ ಇತ್ತು.

ಹೊನ್ನಾವರದಲ್ಲೂ

ಹೊನ್ನಾವರ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ನಲ್ ಹಿಲ್ ಗುಡ್ಡ ಕುಸಿದಿದ್ದು ರಸ್ತೆಯ ಮೇಲೆ ಮಣ್ಣು ಬಿದ್ದು ಒಂದು ಕಡೆಯಿಂದ ಮಾತ್ರ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಐಆರ್‌ಬಿ ಸಿಬ್ಬಂದಿಗಳು ಕೆಲಸ ನಿರ್ವಹಿಸಿದ್ದಾರೆ. ಒಂದು ಗಂಟೆಯಲ್ಲಿ ರಸ್ತೆ ಸಂಚಾರ ಸುಗಮವಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.