Karnataka Rains:ಕರ್ನಾಟಕದಲ್ಲಿ ಇಂದು, ನಾಳೆ ಮಳೆ, 9 ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನ ಮುನ್ನೆಚ್ಚರಿಕೆ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains:ಕರ್ನಾಟಕದಲ್ಲಿ ಇಂದು, ನಾಳೆ ಮಳೆ, 9 ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನ ಮುನ್ನೆಚ್ಚರಿಕೆ

Karnataka Rains:ಕರ್ನಾಟಕದಲ್ಲಿ ಇಂದು, ನಾಳೆ ಮಳೆ, 9 ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನ ಮುನ್ನೆಚ್ಚರಿಕೆ

Weather Updates ಬೇಸಿಗೆಯಲ್ಲಿಯೂ ಕರ್ನಾಟಕದ( Summer Rains) ಕೆಲವು ಕಡೆ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆ ಇರಲಿದೆ.

ಕೊಡಗಿನ( Kodagu Rains) ಕೆಲ ಭಾಗದಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ.
ಕೊಡಗಿನ( Kodagu Rains) ಕೆಲ ಭಾಗದಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಯುಗಾದಿ ವೇಳೆ ಶುರುವಾದ ಮಳೆ ಇನ್ನೂ ಎರಡು ದಿನ ಇರಲಿದೆ. ಮಂಗಳವಾರ ಹಾಗೂ ಬುಧವಾರದಂದು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಂಗಳವಾರದಂದು 9 ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಹಾಗೂ ಸಿಡಿಲಿನ ಸಹಿತ ಮಳೆಯಾಗುವ ಮುನ್ಸೂಚನೆಯನ್ನೂ ನೀಡಲಾಗಿದೆ. ಬುಧವಾರವೂ ಹಳೆ ಮೈಸೂರು ಭಾಗದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆ ಇದೆ. ಬೆಂಗಳೂರು ಮಹಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಎರಡು ದಿನ ಮಳೆ ಸೂಚನೆಯೇನೂ ಇಲ್ಲ. ಈ ಕುರಿತು ಭಾರತೀಯ ಹವಾಮಾನ ಇಲಾಖೆ( IMD) ಬೆಂಗಳೂರು ಕೇಂದ್ರವು ಎರಡು ದಿನಗಳ ಮಳೆಯ ಮಾಹಿತಿಯನ್ನು ಬಿಡುಗಡೆ ಮಾಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದಲ್ಲಿ ಏ. 23ರ ಮಂಗಳವಾರದಂದು ಉತ್ತರ ಕರ್ನಾಟಕದ ಬೀದರ್‌, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಬಹುದು. ಈ ಭಾಗದಲ್ಲಿ ರಭಸದ ಗಾಳಿ ಗಂಟೆಗೆ 30 ರಿಂದ 40 ಕಿ.ಮಿ. ವೇಗದಲ್ಲಿ ಸಂಚರಿಸುವ ಸಾಧ್ಯತೆಗಳಿವೆ. ಅದೇ ರೀತಿ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕೆಲವೆಡೆ ಹಗುರವಾಗಿ ಮಳೆಯಾಗಲಿದೆ. ಉಳಿದಂತೆ ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರೆಯುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ.

ಉತ್ತರ ಒಳನಾಡಿನಲ್ಲಿ ಏ. 23ರಂದು ಒಂದೆರಡು ಕಡೆಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ. ಗುಡುಗು, ಮಿಂಚಿನ ಜತೆಯಲ್ಲಿಯೇ ಹಗುರ ಮಳೆಯಾಗಬಹುದು ಎಂದು ತಿಳಿಸಲಾಗಿದೆ.

ಏ.24ರ ಬುಧವಾರದಂದು ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು ಜತೆಯಲ್ಲಿ ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಗಳು ಅಧಿಕವಾಗಿವೆ. ಉಳಿದಂತೆ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣವೇ ಮುಂದುವರಿಯಲಿದೆ.

ಅಲ್ಲಲ್ಲಿ ಮಳೆ

ಭಾನುವಾರ ರಾತ್ರಿ ಹಾಗೂ ಸೋಮವಾರವೂ ಕರ್ನಾಟಕದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ. ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಅದರಲ್ಲೂ ಬೆಳಗಾವಿಯಲ್ಲಿ 2 ಸೆ.ಮೀ, ಹಾವೇರಿಯಲ್ಲಿ 1 ಸೆ.ಮೀ.ನಷ್ಟು ಮಳೆಯಾಗಿದೆ. ಇದಲ್ಲದೇ ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ಬೆಳಗಾವಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.

ಬೆಂಗಳೂರು ಹವಾಮಾನ

ಬೆಂಗಳೂರು ಹಾಗೂ ಸುತ್ತಮತ್ತಲಿನ ಪ್ರದೇಶದಲ್ಲಿ ಮುಂದಿನ ಎರಡು ದಿನಗಳ ಕಾಲ ಮುಂಜಾನೆ ವೇಳೆ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಮಧ್ಯಾಹ್ನದ ಹೊತ್ತಿಗೆ ಶುಭ್ರವಾದ ಆಕಾಶ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು 37 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶದ ಪ್ರಮಾಣವು 24 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದೆ.

ಈ ಜಿಲ್ಲೆಗಳಲ್ಲಿ ಮಳೆ ಕೊರತೆ

ಕಳೆದ ವಾರ ಆಗಿರುವ ಮಳೆಯ ಮಾಹಿತಿಯನ್ನು ಹವಾಮಾನ ಇಲಾಖೆಯು ಬಿಡುಗಡೆ ಮಾಡಿದೆ. ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯ ಕೊರತೆ ತೀವ್ರವಾಗಿದೆ.

ಹಾವೇರಿ, ದಾವಣಗೆರೆ, ಚಿತ್ರದುರ್ಗ, ಹಾಸನ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆ ಕಂಡು ಬಂದಿದೆ. ಅದೇ ರೀತಿ ಬಾಗಲಕೋಟೆ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ಮೈಸೂರು ಜಿಲ್ಲೆಯಲ್ಲಿ ಮಳೆಯಾಗಿದ್ದರೂ ಕೊರತೆಯ ವ್ಯಾಪ್ತಿಯಲ್ಲಿಯೇ ಇದೆ.

ಆದರೆ ಉತ್ತರ ಕರ್ನಾಟಕದ ಬೀದರ್‌, ವಿಜಯಪುರ, ಕೊಪ್ಪಳ, ರಾಯಚೂರು, ಮಲೆನಾಡಿನ ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗಿದೆ. ಧಾರವಾಡ, ಗದಗ, ಕಲಬುರಗಿ, ಯಾದಗಿರಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆ ಪ್ರಮಾಣ ಸರಾಸರಿಗಿಂತ ಕೊಂಚ ಹೆಚ್ಚಿದೆ. ಬೆಳಗಾವಿ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಸುರಿದ ಮಾಹಿತಿಯನ್ನು ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner