ಕನ್ನಡ ಸುದ್ದಿ  /  ಕರ್ನಾಟಕ  /  Weather Report Today: ಬಿಸಿಲಿನ ಝಳಕ್ಕೆ ಬೇಸತ್ತವರಿಗೆ ಸಿಹಿಸುದ್ದಿ, ಕರ್ನಾಟಕದ ವಿವಿಧೆಡೆ ಸಾಧಾರಣ ಮಳೆ ಸಾಧ್ಯತೆ; ಇಂದಿನ ಹವಾಮಾನ ವರದಿ

Weather Report Today: ಬಿಸಿಲಿನ ಝಳಕ್ಕೆ ಬೇಸತ್ತವರಿಗೆ ಸಿಹಿಸುದ್ದಿ, ಕರ್ನಾಟಕದ ವಿವಿಧೆಡೆ ಸಾಧಾರಣ ಮಳೆ ಸಾಧ್ಯತೆ; ಇಂದಿನ ಹವಾಮಾನ ವರದಿ

ಕರ್ನಾಟಕ ಹವಾಮಾನ ಇಲಾಖೆ (Met Centre Bengaluru - IMD) ಮುಂದಿನ 48 ಗಂಟೆಗಳ ಹವಾಮಾನ ಮುನ್ಸೂಚನೆ (Karnataka Weather Forecast) ನೀಡಿದೆ. ರಾಜ್ಯದ ವಿವಿಧಡೆ ಮಳೆಯಾಗುವ ನಿರೀಕ್ಷೆ ಇದೆ. ಒಂದೆರಡು ಕಡೆಗಳಲ್ಲಿ ಬಿಸಿಲಿನ ಪ್ರಖರತೆ ಮುಂದುವರೆಯಲಿದೆ.

ರಾಜ್ಯದ ವಿವಿಧೆಡೆ ಹಗುರ ಮಳೆ ಸಾಧ್ಯತೆ
ರಾಜ್ಯದ ವಿವಿಧೆಡೆ ಹಗುರ ಮಳೆ ಸಾಧ್ಯತೆ (Satish Bate/HT Photo)

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ದಿನೇ ದಿನೇ ಏರುತ್ತಲೇ ಇದ್ದು, ಕೆಲವೊಂದು ಕಡೆ ಸಾಧಾರಣ ಮಳೆಯಾಗುತ್ತಿದೆ. ಇದರಿಂದ ಕಾದ ಭೂಮಿ ಕೊಂಚ ತಂಪಾಗಿದೆ. ಕರ್ನಾಟಕ ಹವಾಮಾನ ಇಲಾಖೆ (Met Centre Bengaluru - IMD) ಮುಂದಿನ 48 ಗಂಟೆಗಳ ಹವಾಮಾನ ಮುನ್ಸೂಚನೆ (Karnataka Weather Forecast) ಪ್ರಕಟಿಸಿದ್ದು, ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಕೆಲವು ಕಡೆ ಒಣಹವೆ ಮುಂದುವರಿಯಲಿದೆ. ಏಪ್ರಿಲ್‌ 29ರವರೆಗೆ ರಾಜ್ಯದ ಹಲವು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಹವಾಮಾನ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಿರುವ ಮುನ್ಸೂಚನೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂಬ ಮುನ್ಸೂಚನೆ ಇದೆ.

ಕರಾವಳಿ ಹವಾಮಾನ ಮುನ್ಸೂಚನೆ

ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ಕರಾವಳಿ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ವಾಡಿಕೆಗಿಂತ 2 ಡಿಗ್ರಿ ಹೆಚ್ಚಿರಲಿದೆ. ಏಪ್ರಿಲ್‌ 28 ಹಾಗೂ 29 ರಂದು ಕರಾವಳಿಯ ಕೆಲವು ಭಾಗಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಬ್ರಹ್ಮಣ್ಯ ಪರಿಸರದಲ್ಲಿ ಸೋಮವಾರ ರಾತ್ರಿಯಿಂದ ಭಾರಿ ಮಳೆಯಾಗಿದೆ. ಇಂದು ಕೂಡ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡು ಹವಾಮಾನ ವರದಿ

ಬಾಗಲಕೋಟೆ, ಬೀದರ್‌, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರ/ಸಾಧಾರಣ ಮಳೆಯಾಗಲಿದೆ. ಧಾರವಾಡ, ಗದಗ, ಬೆಳಗಾವಿಯಲ್ಲಿ ಒಣಹವೆ ಮುಂದುವರಿಯಲಿದೆ. ಬಾಗಲಕೋಟೆ, ಬೀದರ್‌, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗಲಿದೆ. ಏಪ್ರಿಲ್‌ 29ರವರೆಗೆ ಉತ್ತರ ಒಳನಾಡಿನ ಅಲ್ಲಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ವರದಿ

ದಕ್ಷಿಣ ಒಳನಾಡು ಒಳನಾಡಿನ ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ಇದೆ. ಬಳ್ಳಾರಿ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲಭಾಗದಲ್ಲಿ ಒಣಹವೆ ಮುಂದುವರಿಯಲಿದೆ. ಸೋಮವಾರ ಹಾಗೂ ಮಂಗಳವಾರ ರಾಜ್ಯದ ಕೆಲವು ಕಡೆ ಮಳೆಯಾಗಿದ್ದು, ಇಂದು ಮತ್ತು ನಾಳೆಯೂ ಅನಿರೀಕ್ಷಿತ ಮಳೆಯಾಗುವ ಸಾಧ್ಯತೆಯಿದೆ.

IPL_Entry_Point