Karnataka Rains: ಮಾರ್ಚಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ; ಹೀಗಿದೆ ಬೆಂಗಳೂರು, ಮೈಸೂರು, ಕಲಬುರಗಿ ಮಳೆ ಪ್ರಮಾಣ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಮಾರ್ಚಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ; ಹೀಗಿದೆ ಬೆಂಗಳೂರು, ಮೈಸೂರು, ಕಲಬುರಗಿ ಮಳೆ ಪ್ರಮಾಣ

Karnataka Rains: ಮಾರ್ಚಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ; ಹೀಗಿದೆ ಬೆಂಗಳೂರು, ಮೈಸೂರು, ಕಲಬುರಗಿ ಮಳೆ ಪ್ರಮಾಣ

Karnataka Rains: ಕರ್ನಾಟಕದಲ್ಲಿ ಮಾರ್ಚ್‌ ತಿಂಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯೇ ಆಗಿದೆ.ಕೆಲವು ಜಿಲ್ಲೆಗಳು ಮಳೆ ಕೊರತೆ ಎದುರಿಸುತ್ತಿವೆ.

ಉತ್ತಮ ಮಳೆಯಿಂದ ಮೈಸೂರಿನ ಕುಕ್ಕರಹಳ್ಳಿ ಕೆರೆ ಈಗಲೂ ಹಸಿರಾಗಿದೆ.
ಉತ್ತಮ ಮಳೆಯಿಂದ ಮೈಸೂರಿನ ಕುಕ್ಕರಹಳ್ಳಿ ಕೆರೆ ಈಗಲೂ ಹಸಿರಾಗಿದೆ. (Ravi Keerthi Gowda)

Karnataka Rains:ಕಳೆದ ಎರಡು ತಿಂಗಳಿನಿಂದ ಕರ್ನಾಟಕದ ಬಿಸಿಲ ಬೇಗೆ ಜೋರಿದೆ. ಇದರ ನಡುವೆಯೇ ಮಾರ್ಚ್‌ ತಿಂಗಳಲ್ಲಿ ಕೆಲವು ಭಾಗದಲ್ಲಿ ವಾಡಿಕೆ ಮಳೆ ಚೆನ್ನಾಗಿಯೇ ಆಗಿದೆ. ಕರ್ನಾಟಕದ 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಇದರಲ್ಲಿ ಬರದ ನಾಡು ಕೋಲಾರ, ಬಿರು ಬಿಸಿಲಿನ ಕಲಬುರಗಿ, ಮೈಸೂರು, ಚಾಮರಾಜನಗರ, ತುಮಕೂರು ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಗದಗ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ. ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯ ತೀವ್ರ ಕೊರತೆ ಕಂಡು ಬಂದಿದೆ. ಉತ್ತರ ಕನ್ನಡ, ಬೆಳಗಾವಿ. ರಾಮನಗರ, ಬೀದರ್‌ , ಕೊಡಗು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದ್ದರೆ, ಉಡುಪಿ, ಧಾರವಾಡ, ರಾಯಚೂರು, ವಿಜಯಪುರ, ಬಾಗಲಕೋಟೆ, ಯಾದಗಿರಿ ಜಿಲ್ಲೆಯಲ್ಲಿ ಕೊರತೆ ಕಂಡು ಬಂದಿದೆ. ಚಿಕ್ಕಬಳ್ಳಾಫುರ. ದಾವಣಗೆರೆ, ಹಾವೇರಿ. ಬಾಗಲಕೋಟೆ ಜಿಲ್ಲೆಗಳಲ್ಲೂ ನಿರೀಕ್ಷಯಷ್ಟು ಮಳೆಯಾಗಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಅದರಲ್ಲೂ ಈ ವಾರದಲ್ಲಿ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಸುಮಾರು ಇಪ್ಪತ್ತು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ. ನಾಲ್ಕೈದು ಜಿಲ್ಲೆಗಳಲ್ಲಿ ತೀವ್ರ ಕೊರತೆ ಉಂಟಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಮಳೆಯಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

  • ಕರ್ನಾಟಕದ ಆಂಧ್ರ ಹಾಗೂ ತಮಿಳುನಾಡಿನ ಗಡಿ ಭಾಗದ ಬರದ ನಾಡು ಕೋಲಾರ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇ 280 ರಷ್ಟು ಮಳೆಯಾಗಿದೆ
  • ಮೈಸೂರು ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ. ಮೈಸೂರು ಭಾಗದಲ್ಲಿ ಶೇ 256 ರಷ್ಟು ಮಳೆ ಸುರಿದಿದೆ.
  • ಕರ್ನಾಟಕದ ಕೇರಳ ಹಾಗು ತಮಿಳುನಾಡು ರಾಜ್ಯಗಳ ಗಡಿ ಹಂಚಿಕೊಂಡಿರುವ ಚಾಮರಾಜನಗರ ಜಿಲ್ಲೆಯಲ್ಲೂ ಶೇ. 252 ರಷ್ಟು ಮಳೆಯಾಗಿದೆ
  • ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಬಿಸಿಲು ಇರುವ ಕಲಬುರಗಿ ಜಿಲ್ಲೆಯಲ್ಲೂ ಮಾರ್ಚ್‌ ತಿಂಗಳಲ್ಲಿ ಶೇ. 232 ರಷ್ಟು ಮಳೆಯಾಗಿದೆ.
  • ಬೆಂಗಳೂರಿನ ಭಾಗವೇ ಆದರಂತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಉತ್ತಮ ಮಳೆ ಸುರಿದಿದೆ. ಗ್ರಾಮಾಂತರ ಜಿಲ್ಲೆಯಲ್ಲಿ ಶೇ. 212 ರಷ್ಟು ಮಳೆಯಾದ ಮಾಹಿತಿ ಇದೆ.
  • ಬರದ ನಾಡು ಎಂದೇ ಹೆಸರಾಗಿರುವ ತುಮಕೂರು ಜಿಲ್ಲೆಯಲ್ಲೂ ಚೆನ್ನಾಗಿಯೇ ಮಳೆಯಾಗಿದೆ. ತುಮಕೂರು ಜಿಲ್ಲೆಯಲ್ಲಿ ಶೇ. 200 ರಷ್ಟು ಮಳೆಯಾದ ಮಾಹಿತಿಯಿದೆ.
  • ಬೇಸಿಗೆಯಲ್ಲೂ ಹೆಚ್ಚು ಚಳಿ ಇರುವ ಗಿರಿ ಶಿಖರ ಹಾಗೂ ಬಯಲುಸೀಮೆಯ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ಶೇ. 169ರಷ್ಟು ಮಳೆಯಾಗಿದೆ
  • ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಾರ್ಚ್‌ ತಿಂಗಳ ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಈ ಜಿಲ್ಲೆಯಲ್ಲಿನ ಮಳೆ ಪ್ರಮಾಣ ಶೇ. 136 ರಷ್ಟಿದೆ.
  • ಕಾಡಾನೆಗಳ ಉಪಟಳದಿಂದ ನಲುಗಿರುವ ಮಲೆನಾಡಿನ ಹಾಸನ ಜಿಲ್ಲೆಯಲ್ಲೂ ಈ ತಿಂಗಳಲ್ಲಿ ಮಳೆ ಪ್ರಮಾಣ ಶೇ 118 ರಷ್ಟಿದೆ.
  • ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲೂ ಮಳೆಯ ಪ್ರಮಾಣ ಚೆನ್ನಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಶೇ.96 ರಷ್ಟು ಮಳೆಯಾಗಿರುವ ಮಾಹಿತಿಯಿದೆ.
  • ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲೂ ಮಳೆ ಚೆನ್ನಾಗಿಯೇ ಆಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶೇ.83 ರಷ್ಟು ಮಳೆ ಸುರಿದ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.
  • ಬೆಂಗಳೂರು ನಗರದಲ್ಲೂ ಮಳೆ ಉತ್ತಮವಾಗಿಯೇ ಸುರಿದ ಮಾಹಿತಿಯಿದೆ. ಮಾರ್ಚ್‌ನಲ್ಲಿ ಶೇ. 96ರಷ್ಟು ಮಳೆ ಬೆಂಗಳೂರಿನಲ್ಲಿ ಆಗಿದೆ.
  • ಉತ್ತರ ಕರ್ನಾಟಕದ ಗದಗ ಜಿಲ್ಲೆಯಲ್ಲೂ ಬಿಸಿಲು ಜೋರಾಗಿದ್ದು. ಇಲ್ಲಿ ಮಳೆಯೂ ಚೆನ್ನಾಗಿಯೇ ಆಗಿದೆ. ಗದಗದ ಮಳೆ ಪ್ರಮಾಣ ಶೇ. 81 ರಷ್ಟಿದೆ.

 

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.
Whats_app_banner